ಮುಲ್ಕಿ: ಮಳೆಗಾಳಿಗೆ ಮನೆ ಕುಸಿದು ಮಹಿಳೆಗೆ ಗಾಯ, ಅಪಾರ ಹಾನಿ

Source: VB News | Published on 3rd August 2020, 12:48 AM | Coastal News | Don't Miss |


ಮುಲ್ಕಿ: ಇಲ್ಲಿನ ನಗರ ಪಂಚಾಯತ್ ವ್ಯಾಪ್ತಿಯ ಕೆ ಎಸ್ ರಾವ್ ನಗರ ಕೆಇಬಿ ಸರಕಾರಿ ಬಾವಿ ಬಳಿ ರವಿವಾರ ಮಧ್ಯಾಹ್ನ ಸುರಿದ ಭಾರಿ ಮಳೆ ಹಾಗೂ ಗಾಳಿಗೆ ಮನೆ ಸಂಪೂರ್ಣ ಕುಸಿದಿದ್ದು ಮನೆಯ ಒಳಗಡೆ ಇದ್ದ ಮಹಿಳೆಯೊಬ್ಬರ ತಲೆಗೆ ಗಂಭೀರ ಗಾಯಗೊಂಡಿದ್ದು ಉಳಿದವರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.
ಗಂಭೀರ ಗಾಯಗೊಂಡ ಮಹಿಳೆಯನ್ನು ಸುಲೋಚನ ನಾಯರ್(59) ಎಂದು ಗುರುತಿಸಲಾಗಿದೆ. ಉಳಿದಂತೆ ಮನೆಯೊಳಗಿದ್ದ ಸೂರಜ, ಜಯಲಕ್ಷ್ಮಿ, ರಕ್ಷಿತ್, ದೇವಿಕಾ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ರವಿವಾರ ಮಧ್ಯಾಹ್ನ ಮುಲ್ಕಿಯಲ್ಲಿ ಭಾರಿ ಮಳೆ ಸುರಿದಿದ್ದು ಈ ಸಂದರ್ಭ ಕೆ ಎಸ್ ರಾವ್ ನಗರದ ತಮ್ಮ ಮನೆಯಲ್ಲಿ ಕುಟುಂಬದೊಂದಿಗೆ ಇದ್ದ ಸುಲೋಚನಾ ರವರಿಗೆ ಮನೆಯ ಮೇಲ್ಗಡೆಯಿಂದ ಭಾರಿ ಸದ್ದು ಕೇಳಿಸಿದ್ದು ಗಾಬರಿಯಿಂದ ಮನೆಯವರು ಹೊರಗೆ ಬರುವಷ್ಟರಲ್ಲಿ ಮನೆ ಕುಸಿದಿದೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ಸಾಮಾಜಿಕ ಕಾರ್ಯಕರ್ತರಾದ ರಹೀಂ, ಆಸಿಫ್, ತೌಫಿಕ್, ಝಾಹಿದ್, ದೀಕ್ಷಿತ್, ಮುಲ್ಕಿ ನ. ಪಂ. ಸದಸ್ಯರಾದ ಸಂದೀಪ್, ಮುನ್ನಾ ಯಾನೆ ಮಹೇಶ, ಮಾಜಿ ನಪಂ ಸದಸ್ಯ ಕುಳಾಯಿ ಬಶೀರ್ ಮತ್ತಿತರರು ಸೇರಿಕೊಂಡು ಗಾಯಾಳುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮನೆ ಕುಸಿತದಿಂದ ಸುಮಾರು 10 ಲಕ್ಷದವರೆಗೆ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಮುಲ್ಕಿ ವಿಶೇಷ ತಹಶಿಲ್ದಾರ್ ಮಾಣಿಕ್ಯ ಎನ್. ಆರ್ .ಐ. ದಿಲೀಪ್ ರೋಡ್ಕರ್. ಗ್ರಾಮಕರಣಿಕ ಪ್ರದೀಪ ಶೆಣೈ ಬೇಟಿ ನೀಡಿ ಪರಿಶೀಲಿಸಿದ್ದಾರೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...