ಬೈಕ್ ಮೇಲೆ ಬರುತ್ತಿದ್ದಾಗ  ನಗ-ನಾಣ್ಯ ದೋಚಿದ ದುಷ್ಕರ್ಮಿಗಳು

Source: sonews | By Staff Correspondent | Published on 26th October 2020, 9:41 PM | Coastal News | Don't Miss |

ಮುಂಡಗೋಡ : ಮೋಟಾರ ಬೈಕ್ ಮೇಲೆ ಬಂದು ನಗ ನಾಣ್ಯ ಎಗರಿಸಿಕೊಂಡ ಹೋದ ಘಟನೆ ತಾಲೂಕಿನ ಹುಬ್ಬಳ್ಳಿ ಶಿರಸಿ ರಸ್ತೆಯ ಗೊಟಗೋಡಿಕೊಪ್ಪ ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಇಂದೂರ(ಕೊಪ್ಪ) ಗ್ರಾಮದ ಶಿವಾನಂದ ಭೋವಿವಡ್ಡರ ತಮ್ಮ ಹೆಂಡತಿ ಮಗನೊಂದಿಗೆ ಹುಬ್ಬಳ್ಳಿ ಶಿರಸಿ ರಸ್ತೆಯ ಮಳಗಿ ಮಾರ್ಗವಾಗಿ ಬರುತ್ತಿದ್ದಾಗ ಗೊಟಗೋಡಿ-ಕಲಕೊಪ್ಪ ಗ್ರಾಮದ ಮಧ್ಯದ ರಸ್ತೆಯಲ್ಲಿ ಯಾರೊ ಆರೋಪಿತರು  ಹಿಂದಿನಿಂದ ಮೋಟಾರ ಬೈಕ್ ಮೇಲೆ ಬಂದ ದುಷ್ಕರ್ಮಿಗಳು ಹೆಂಡತಿ ಬಗಲಿಗೆ ಹಾಕಿಕೊಂಡಿದ್ದ ವ್ಯಾನಿಟಿ ಬ್ಯಾಗ ಕಸಿದುಕೊಂಡು  ಅದರಲ್ಲಿದ್ದ 7000ರೂ ನಗದು ಸುಮಾರು 4000 ರೂ ಮೌಲ್ಯದ ಮೊಬೈಲ್ ಫೋನ್ ಹಾಗೂ ಮಗನ ಕೈಯಲ್ಲಿದ್ದ ಸುಮಾರು 800 ರೂ ಬೆಲೆಬಾಳುವ ಕೈಗಡಗ ದೂಚಿಕೊಂಡು ಹೋಗಿದ್ದಾರೆ. ಈ ಕುರಿತು ಶಿವಾನಂದ ಭೋವಿವಡ್ಡರ ದೂರು ನೀಡಿದ್ದಾರೆ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
 

Read These Next

ಭಟ್ಕಳ ಹೆಬಳೆಯಲ್ಲಿ ಕಸ, ತ್ಯಾಜ್ಯ ಸಂಗ್ರಹಕ್ಕೆ ತಡೆ; ಊರೆಲ್ಲ ದುರ್ವಾಸನೆ; ಜಾಗ, ಹಣವಿದ್ದರೂ ಯೋಜನೆ ಇಲ್ಲ !

ತಾಲೂಕಿನ ಹೆಬಳೆ ಪಂಚಾಯತ ಪ್ರದೇಶದಲ್ಲಿ ಮನೆ ಮನೆಯ ಕಸ, ತ್ಯಾಜ್ಯಗಳನ್ನು ಎತ್ತಿಕೊಂಡು ಊರ ನಡುವಿನ ಖಾಲಿ ಪ್ರದೇಶದಲ್ಲಿ ಸಂಗ್ರಹಿಸಿ ...

ಉ.ಕ.ಜಿಲ್ಲೆಯ 47,708 ಎಕರೆ ಅರಣ್ಯ ಭೂಮಿಯನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸುವಂತೆ ಅರಣ್ಯ ಹಕ್ಕು ಹೋರಾಟಗಾರ ಆಗ್ರಹ

ಶಿರಸಿ : ರಾಜ್ಯ ಸರ್ಕಾರದ ಅಧಿಸೂಚನೆ ನಿರ್ಲಕ್ಷಿಸಿ ಅರಣ್ಯ ವಾಸಿಗಳು ಸಾಗುವಳಿ ಮಾಡುತ್ತಿರುವ ಜಿಲ್ಲೆಯ 47,708 ಎಕರೆ ಅರಣ್ಯ ಭೂಮಿ ಪ್ರದೇಶ ...

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಖಂಡಿತ ಜಾರಿಗೆ ತರುತ್ತೇವೆ : ಗೃಹ ಸಚಿವ ಬೊಮ್ಮಾಯಿ.

ಕಾರವಾರ : ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಖಂಡಿತವಾಗಿ ಜಾರಿಗೆ ತರುತ್ತೇವೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.