ಮುಂಡಗೋಡ: ಜಯ ಕರ್ನಾಟಕ ಸಂಘಟನೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು

Source: nazir, | By Arshad Koppa | Published on 4th November 2017, 12:44 PM | Coastal News | Special Report |

ಮುಂಡಗೋಡ:  ಮುತ್ತಪ್ಪ ರೈ ನೇತ್ರತ್ಚದ ಜಯ ಕರ್ನಾಟಕ ಸಂಘಟನೆಯ ತಾಲೂಕಾ ಘಟಕದ ವತಿಯಿಂದ, ಪ್ರಥಮ ವರ್ಷದ ವಾರ್ಷಿಕೋತ್ಸವ, ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ, ನವಂಬರ 4 ಶನಿವಾರದಂದು ಸಂಜೆ 6-30 ಗಂಟೆಗೆ, ಪಟ್ಟಣದ ವಿವೇಕಾನಂದ ಬಯಲುರಂಗ ಮಂದಿರದಲ್ಲಿ ಸಭಾ ಕಾರ್ಯಕ್ರಮ ಹಾಗೂ ಮನೋರಂಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 
ಕಾರ್ಯಕ್ರಮದಲ್ಲಿ ವಿಶೇಷ ಜಾದೂ ಪ್ರದರ್ಶನ ಹಾಗೂ ಮನರಂಜನಾ ಕಾರ್ಯಕ್ರಮ, ನಡೆಯುವುದು, ಸಭಾ ಕಾರ್ಯಕ್ರಮದಲ್ಲಿ ವಿವಿಧ ರಂಗದಲ್ಲಿ ಸಾಧನೆ ಮಾಡಿದಂತಹ ಮಹನೀಯರಾದ ಲೋಕದ್ವನಿ ಪತ್ರಿಕೆಯ ಸಂಪಾದಕರಾದ ಶ್ರೀ ಪಿ.ಎಸ್.ಸದಾನಂದ, ಮುಂಡಗೋಡ ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರರಾದ ಶ್ರೀ ರಾಜಶೇಖರ ನಾಯ್ಕ,  ಕನ್ನಡ ಸಾಹಿತ್ಯ ಪರಿಷತ್ ಮುಂಡಗೋಡ ತಾಲೂಕಾ ಅಧ್ಯಕ್ಷರಾದ ಶ್ರೀ ನಾಗೇಶ ಪಾಲನಕರ, ಶಿಕ್ಷಕರಾದ ಶ್ರೀ ರಾಜಪ್ಪ ಪಿ. ಹುಲಸೋಗಿ, ಹಾಗೂ ಅಂಚೆ ವಿತರಕರಾದ ಶ್ರೀ ಚಂದ್ರಶೇಖರ ಎಮ್.ಕೂಸನೂರ, ಇವರುಗಳಿಗೆ ತಾಲೂಕಾ ಸಂಘಟನೆ ವತಿಯಿಂದ ಸನ್ಮಾನಿಲಾಗುವುದು, ಎಂದು ಸಂಘಟನೆಯ ತಾಲೂಕಾ ಅಧ್ಯಕ್ಷ ಪಾಂಡುರಂಗ ಪವಾರ, ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...