ಮುಂಡಗೋಡ:ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಎ.ಎಚ್ ದೊಡ್ಡಮನಿ ನಿಧನ

Source: nazir | By Arshad Koppa | Published on 12th July 2017, 8:08 PM | Coastal News | Guest Editorial |

ಮುಂಡಗೋಡ : ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಅಮೀರ ಹುಸೇನ ದೊಡ್ಡಮನಿ ಇಂದು ಮಧ್ಯಾಹ್ನ ತಾಲೂಕಿನ ನ ನ್ಯಾಸರ್ಗಿ ಗ್ರಾಮದ  ತಮ್ಮ ಸ್ವಗೃಹದಲ್ಲಿ ನಿಧನರಾದರು ಅವರಿಗೆ 80 ವರ್ಷ ಆಗಿತ್ತು ಎಂದು ತಿಳಿದು ಬಂದಿದೆ.
ಮೃತರು ತಮ್ಮ ಹಿಂದೆ ನಾಲ್ಕು ಗಂಡು ಮಕ್ಕಳು ಎರಡು ಹೆಣ್ಣು ಮಕ್ಕಳು ಹಾಗೂ ಅಪಾರ ಸ್ನೇಹಿತರು ಬಂಧುಗಳನ್ನು ಅಗಲಿದ್ದಾರೆ.
ಅವರ ಸಮಾಜ ಸೇವೆಯನ್ನು ಗುರುತಿಸಿ ಹಲವಾರು ಪ್ರಶಸ್ತಿಗಳು ಅವರ ಕೊರಳನ್ನು ಅಲಂಕರಿಸಿದ್ದವು

ಕಾಕಾ ಕಾಲೇಲ್ಕರ ಪ್ರಶಸ್ತಿ,  ಎನ್.ಎಸ್ಸಿ ರಾಜ್ಯ ಪ್ರಶಸ್ತಿ, ಅತ್ಯುತ್ತಮ ರೊಟರಿ ಕ್ಲಬ್ ಅಧ್ಯಕ್ಷ ಪ್ರಶಸ್ತಿ ಹೀಗೆ ಹಲವಾರು ಪ್ರಶಸ್ತಿಗಳು ಹಾಗೂ 1997 ರಲ್ಲಿ ರಾಷ್ಟ್ರಪ್ರಶಸ್ತಿ ಗೆ ಭಾಜನರಾಗಿದ್ದರು.
ಮೃತರ ನಿಧನಕ್ಕೆ ಬೃಹತ್ ಹಾಗೂ ಮಾಧ್ಯಮ ಕೈಗಾರಿಕಾ ಸಚಿವ ಮತ್ತು ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕ ಶಿವರಾಮ ಹೆಬ್ಬಾರ, ಮುಸ್ಲೀಂ ಹಿರಿಯ ಧುರಿಣರಾದ ಬಿ.ಎಫ್.ಬೆಂಡಿಗೇರಿ, ಎಮ್.ಕೆ ಗಡವಾಲೆ ಸೇರಿದಂತೆ ಜಿಲ್ಲೆಯ ವಿವಿಧ ಪಕ್ಷದ ಗಣ್ಯರು ಹಾಗೂ ಶಿಕ್ಷಕ ವೃಂದದವರು ಹಾಗೂ ಸ್ನೇಹಿತರು ಕಂಬನಿಮಿಡಿದು ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...