ಶಿಕ್ಷಕಿನಿಂದ ಪುರಸಭೆ ಆಸ್ತಿ ಹಾನಿ  ವಿಡಿಯೋ ವೈರಲ್ ಸಾರ್ವಜನಿಕರ ಹಿತದೃಷ್ಟಿಯಿಂದ ಕಾನೂನು ಕ್ರಮಕ್ಕೆ ಆಗ್ರಹ - ಅಸ್ಲಂ

Source: sonews | By Staff Correspondent | Published on 26th May 2020, 9:21 PM | State News | Don't Miss |

ಶ್ರೀನಿವಾಸಪುರ: ಪಟ್ಟಣದ ವಾರ್ಡ್ ಸಂಖ್ಯೆ 14 ಗಫಾರ್‌ ಖಾನ್‌ ಮೊಹಲ್ಲಾದಲ್ಲಿ ಪುರಸಭೆ ವತಿಯಿಂದ ನಿರ್ಮಿಸಿರುವ ಕೊಳವೆ ಬಾವಿಗೆ ಅಳವಡಿಸಲಾಗಿದ್ದ ಪೈಪ್‌ಗಳನ್ನು ಒಡೆದುಹಾಕಿರುವ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳುವಂತೆ ರೈತ ಸಂಘದ ಮುಖಂಡ ಅಸ್ಲಂ ಪಾಷ ಆಗ್ರಹಪಡಿಸಿದ್ದಾರೆ.

 ವಾರ್ಡ್ ಸಂಖ್ಯೆ 14 ಗಫಾರ್‌ ಖಾನ್‌ ಮೊಹಲ್ಲಾದ ನಿವಾಸಿ ಸರ್ಕಾರಿ ಉರ್ದು ಪ್ರಾಥಮಿಕ ಶಾಲಾ ಶಿಕ್ಷಕಿ ಯಾಸ್ಮಿನ್‌ ತಾಜ್‌ ಎಂಬುವವರು ತಮ್ಮ ಮನೆಗೆ ಕೊಳವೆ ಬಾವಿಯಿಂದ ನೇರ ಸಂಪರ್ಕ ಪಡೆದು ನೀರು ಬಳಸಿಕೊಳ್ಳುತ್ತಿದ್ದರು. ಅದನ್ನು ಪ್ರಶ್ನಿಸಿದಕ್ಕೆ, ಕೊಳವೆ ಬಾವಿಗೆ ಅಳವಡಿಸಲಾಗಿದ್ದ ಪೈಪ್‌ ಒಡೆದುಹಾಕಿದ್ದಾರೆ. ಈ ದೃಶ್ಯ ಎದುರು ಮನೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಈ  ದೃಶ್ಯ ಫೇಸ್‌ಬುಕ್ ಮತ್ತು ವಾಟ್ಸಾಪ್ ವಿಡಿಯೋ ವೈರಲ್ ಆಗಿದೆ .

ಪೈಪ್‌ ಒಡೆದಿರುವುದರಿಂದ ನಿವಾಸಿಗಳಿಗೆ ನೀರಿನ ತೊಂದರೆ ಉಂಟಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸ್ವಾರ್ಥದಿಂದ ಸಾರ್ವಜನಿಕ ಆಸ್ತಿಗೆ ಹಾನಿ ಉಂಟುಮಾಡಿರುವ ಹಾಗೂ ಸಾರ್ವಜನಿಕ ರಸ್ತೆಯನ್ನು ಆಕ್ರಮಿಸಿಕೊಂಡು ವಾಹನ ನಿಲುಗಡೆ ಮಾಡುವ  ಮಹಿಳೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಪುರಸಭೆ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ಆದರೆ ಪುರಸಭೆ ಅಧಿಕಾರಿಗಳು ಈ ವಿಷಯದಲ್ಲಿ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆಪಾದಿಸಿದ್ದಾರೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಪುರಸಭೆ ಈ ಪ್ರಕರಣ ಕುರಿತು ವಿಚಾರಣೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ

Read These Next

ಕಾರ್ಮಿಕ ಸಂಘಟನೆಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಾಸಕರಿಗೆ ಮನವಿ

ಭಟ್ಕಳ: ತಾಲೂಕಿನ ಕಾರ್ಮಿಕ ಸಂಘಟನೆಗಳ ಮುಖಂಡರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗುರುವಾರ ಶಾಸಕ ಸುನಿಲ್ ...

ಗೃಹಿಣಿಯ ಕತ್ತಿನಿಂದ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಸರಗಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದ ಹೊನ್ನಾವರ,ಭಟ್ಕಳ ಪೊಲೀಸರು

ಗೃಹಿಣಿಯ ಕತ್ತಿನಿಂದ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಸರಗಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದ ಹೊನ್ನಾವರ,ಭಟ್ಕಳ ಪೊಲೀಸರು