ನ್ಯಾ. ಮುರಳೀಧರ್‌ ವರ್ಗಾವಣೆ; ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಶನ್ ಖಂಡನೆ

Source: sonews | By Staff Correspondent | Published on 27th February 2020, 11:03 PM | National News |

ಹೊಸದಿಲ್ಲಿ: ನ್ಯಾ. ಮುರಳೀಧರ್‌ರನ್ನು ದಿಲ್ಲಿ ಹೈಕೋರ್ಟ್‌ನಿಂದ ವರ್ಗಾವಣೆಗೊಳಿಸಿರುವುದು ದುರುದ್ದೇಶದ ಮತ್ತು ದಂಡನಾ ಕ್ರಮವಾಗಿದೆ ಎಂದು ಸುಪ್ರೀಂಕೋರ್ಟ್ ಬಾರ್ ಅಸೋಸಿಯೇಷನ್(ಎಸ್‌ಸಿಬಿಎ) ಅಧ್ಯಕ್ಷ ದುಷ್ಯಂತ್ ದವೆ ಟೀಕಿಸಿದ್ದಾರೆ.

ಕೊಲಿಜಿಯಂನಿಂದ ಶಿಫಾರಸು ಮಾಡಿರುವ ವರ್ಗಾವಣೆ ಅಧಿಸೂಚನೆಯು ಪ್ರಕ್ರಿಯೆಯ ಭಾಗವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಫೆ.12ರಂದು ಮಾಡಿದ್ದ ಶಿಫಾರಸಿನ ಬಗ್ಗೆ ಫೆ.26ರಂದು (ದಿಲ್ಲಿ ಹಿಂಸಾಚಾರದ ಕುರಿತ ಅರ್ಜಿಯ ಬಗ್ಗೆ ನ್ಯಾ. ಮುರಳೀಧರ್ ನೇತೃತ್ವದಲ್ಲಿ ವಿಚಾರಣೆ ನಡೆಸಿದ ಕೆಲವೇ ಗಂಟೆಗಳಲ್ಲಿ) ಅವಸರದ ಕ್ರಮ ಕೈಗೊಂಡಿರುವುದು ದುರುದ್ದೇಶದ ಮತ್ತು ದಂಡನಾರ್ಹ ಕ್ರಮ ಎಂಬುದಕ್ಕೆ ಸ್ಪಷ್ಟ ನಿದರ್ಶನವಾಗಿದೆ ಎಂದು ದವೆ ಹೇಳಿದ್ದಾರೆ.

ದೆಹಲಿ ಹೈಕೋರ್ಟ್ ಬಾರ್ ಅಸೋಸಿಯೇಷನ್ ಕೂಡಾ ನ್ಯಾ. ಮುರಳೀಧರ್ ಅವರ ವರ್ಗಾವಣೆಯನ್ನು ಖಂಡಿಸಿದೆ.

Read These Next

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

'ದಾರಿ ತಪ್ಪಿಸುವ ಜಾಹೀರಾತು' ಸಾರ್ವಜನಿಕ ಕ್ಷಮಾಪಣೆ ಕೇಳಲು ರಾಮ್‌ದೇವ್‌ಗೆ 1 ವಾರದ ಗಡುವು

ಅಲೋಪತಿ ವೈದ್ಯಕೀಯ ಪದ್ಧತಿಯ ವಿರುದ್ಧ ಅಪಪ್ರಚಾರ ಮಾಡದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಯೋಗ ಗುರು ರಾಮ್ ದೇವ್ ಮತ್ತು ಪತಂಜಲಿ ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...