ಚಾಕುವಿನಿಂದ ಇರಿದು ಕೊಲೆ ಯತ್ನ: ರೌಡಿಶೀಟರ್ ಛೋಟ್ಯಾ ಸೆರೆ

Source: S.O. News Service | Published on 12th September 2020, 7:51 PM | State News | Don't Miss |

ಕಲಬುರಗಿ:ನಗರದ ಪಂಚಶೀಲ ನಗರದಲ್ಲಿ ಕಿರಾಣಿ ಅಂಗಡಿಗೆ ಹೋಗುತ್ತಿದ್ದ ವಿಶಾಲ್ ತಂದೆ ದತ್ತು ಗುತ್ತೇದಾರ್ ಎಂಬ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ರೌಡಿಶೀಟರ್ ಛೋಟ್ಯಾ ಅಲಿಯಾಸ್ ಪ್ರಿಯದರ್ಶನ್ ತಂದೆ ವಸಂತ್‍ನಿಗೆ ಸ್ಟೇಷನ್ ಬಜಾರ್ ಠಾಣೆಯ ಪೋಲಿಸರು ಬಂಧಿಸಿದ್ದಾರೆ.
ಬಂಧಿತನಿಂದ ಕೃತ್ಯಕ್ಕೆ ಬಳಸಿದ ಚಾಕುವನ್ನು ಪೋಲಿಸರು ವಶಪಡಿಸಿಕೊಂಡಿದ್ದಾರೆ. ಖಚಿತ ಭಾತ್ಮಿ ಮೇರೆಗೆ ಸ್ಟೇಷನ್ ಬಜಾರ್ ಪೋಲಿಸ್ ಠಾಣೆಯ ಪಿಐ ಎಲ್.ಎಚ್. ಗೌಂಡಿ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಕಾರ್ಯಾಚರಣೆ ಮಾಡಿ ಆರೋಪಿಯನ್ನು ಬಂಧಿಸಿದ್ದರು. ಚೂರಿ ಇರಿತದ ಘಟನೆಯು ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಹುಟ್ಟಿಸಿತ್ತು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...