ಬೆಂಗಳೂರಿನಲ್ಲಿ‌ ಬಾರ್ ಮಾಲೀಕನ ಹತ್ಯೆ.

Source: SO News | By Laxmi Tanaya | Published on 16th October 2020, 3:24 PM | State News | Don't Miss |

ಬೆಂಗಳೂರು : ದುಷ್ಕರ್ಮಿಗಳ ತಂಡವೊಂದು ಬೈಕಲ್ಲಿ ಬಂದು  ಬಾರ್ ಮಾಲೀಕನನ್ನ ಹತ್ಯೆಗೈದ ಘಟನೆ ಬೆಂಗಳೂರಿನಲ್ಲಿ ಗುರುವಾರ ರಾತ್ರಿ ನಡೆದಿದೆ.

ನಗರದ  ಬ್ರಿಗೇಡ್ ರಸ್ತೆಗೆ ಹೊಂದಿಕೊಂಡಿರುವ ಆರ್‌.ಎಚ್‌.ಪಿ ರಸ್ತೆಯಲ್ಲಿರುವ ಡ್ಯೂಯೆಟ್ ಬಾರ್‌ ಹೊಂದಿರುವ ಮನೀಶ್ ಶೆಟ್ಟಿ (45 ) ಹತ್ಯೆಯಾದವರು.

ಮನೀಶ್ ಶೆಟ್ಟಿ  ಅವರು ಬಾರ್ ಮುಂಭಾಗದಲ್ಲಿ‌ ಇದ್ದಾಗಲೇ  ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿದ್ದ ಮನೀಶ್ ಅವರನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ. ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ.

ಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ  ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಬ್ಬನ್ ಪಾರ್ಕ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...