ಭಟ್ಕಳ: ಕಾರ್ ಬೈಕ್ ಅಪಘಾತ; ಪೊಲೀಸ್ ಕಾನ್ಸಟೇಬಲ್ ಸಾವು

Source: sonews | By Staff Correspondent | Published on 18th August 2017, 7:48 PM | Coastal News | Don't Miss |

ಭಟ್ಕಳ: ಬೈಕ್ ಮತ್ತು ಕಾರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹೊನ್ನಾವರ ಠಾಣಾ ಪೊಲೀಸ್ ಪೇದೆ ಸಾವನ್ನಪ್ಪಿರುವ ಘಟನೆ ಮುರುಡೇಶ್ವರ ಬಳಿ ಗುಮ್ಮನಹಕ್ಕಲ್ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. 
ಮೃತ ಪೊಲೀಸ್ ಪೇದೆಯನ್ನು  ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುರುಡೇಶ್ವರ ಮೂಡುಕೇರಿ ನಿವಾಸಿ ರಾಮಚಂದ್ರ ಕೊಪ್ಪ ನಾಯ್ಕ(೩೦) ಎಂದು ಗುರುತಿಲಾಗಿದೆ. 
ಇವರು ತಮ್ಮ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಮಂಗಳೂರಿನಿಂದ ಹುಬ್ಬಳ್ಳಿ ಗೆ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಕಳೆದ ೯ವರ್ಷಗಳಿಂದ ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಕರ್ತವ್ಯನಿರತರಾಗಿದ್ದು ಮೇ ತಿಂಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟದ್ದರು. 
ಕಾರ್ ಚಾಲಕ ಮಂಗಳೂರು ಮುಲ್ಕಿಯ ಮುಜಾಹಿದ್ದುನ್ನೂರ್ ರನ್ನು ವಶಕ್ಕೆ ಪಡಿಸಿಕೊಂಡಿರುವ ಮುರುಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. 
 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...