ಶಾಲಾ ಪರಿಸರದಲ್ಲಿ ತೆರೆದ ಚರಂಡಿ; ವಿದ್ಯಾರ್ಥಿ,ಪಾಲಕರಿಂದ ಪ್ರತಿಭಟನೆ

Source: sonews | By Staff Correspondent | Published on 12th February 2020, 6:09 PM | Coastal News | Don't Miss |

•    ಶಿಕ್ಷಣಾಧಿಕಾರಿಗಳ ಮನವೊಲಿಕೆಗೂ ಜಗ್ಗದ ವಿದ್ಯಾರ್ಥಿಗಳು
•    ಪಾಲಕರಿಂದ ಪಂಚಾಯತ್ ಅಧಿಕಾರಿಗಳ ತರಾಟೆ

ಭಟ್ಕಳ: ಶಾಲಾ ಪರಿಸರದಲ್ಲಿದ್ದ ಚರಂಡಿಯಿಂದಾಗಿ ವಿದ್ಯಾರ್ಥಿಗಳು ನರಕಯಾತನೆ ಅನುಭವಿಸುತ್ತಿದ್ದು ಅದನ್ನು ದುರಸ್ತಿಗೊಳಿಸುವವರೆಗೂ ತರಗತಿಯನ್ನು ಬಹಿಷ್ಕರಿಸುವುದಾಗಿ ಪಾಲಕರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ  ಭಟ್ಕಳ ತಾಲೂಕಿನ ಮುರುಢೇಶ್ವರ ಕ್ಲಷ್ಟರ್ ವ್ಯಾಪ್ತಿಯ ಕೆರೆಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಮಂಗಳವಾರ ವರದಿಯಾಗಿದೆ. 

ಶಾಲೆಯ ಪಕ್ಕದಲ್ಲೇ ತೆರೆದ ಚರಂಡಿ ಇದ್ದು ಇದರಿಂದಾಗಿ ವಿದ್ಯಾರ್ಥಿಗಳು ಅನೇಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಇಲ್ಲಿಯೆ ಬಿಸಿಯೂಟ ಸೇವನೆ ನಡೆಯುತ್ತಿದೆ ಎನ್ನಲಾಗಿದೆ. ಕಳೆದ ನಾಲ್ಕು ತಿಂಗಳಿಂದ ಗ್ರಾ.ಪಂ ಹಾಗೂ ಜಿಲ್ಲಾ ಪಂಚಾಯತ್ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮಂಗಳವಾರ ಶಾಲೆಗೆ ಬಂದ ವಿದ್ಯಾರ್ಥಿಗಳು ತಮ್ಮ ಪಾಲರೊಂದಿಗೆ ಸೇರಿ ಪ್ರತಿಭಟನೆ ನಡೆಸಿದ್ದಾರೆ ಎನ್ನಲಾಗಿದೆ. 

ಸುದ್ದಿ ತಿಳಿದ ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಮುಂಜಿ ವಿದ್ಯಾರ್ಥಿ ಹಾಗೂ ಪಾಲಕರನ್ನು ಮನವೊಲಿಸಲು ಪ್ರಯತ್ನಿಸಿದಾದರೂ ಯಾವುದೇ ಪ್ರಯೋಜನವಾಗಲಿಲ್ಲ ಎನ್ನಲಾಗಿದ್ದು ಪಾಲಕರು ವಿದ್ಯಾರ್ಥಿಗಳೊಂದಿಗೆ ಸೇರಿ ಪ್ರಧಾನ ಗೇಟಿಗೆ ಬೀಗ ಜಡಿದರು ಎಂಬ ಮಾಹಿತಿ ಲಭ್ಯವಾಗಿದೆ. 

ಸರ್ಕಾರಿ ಶಾಲೆಗಳ ಬಗ್ಗೆ ಜನಪ್ರತಿನಿಧಿಗಳು ಅಧಿಕಾರಿಗಳು ಮಲತಾಯಿ ದೋರಣೆ ತಾಳುತ್ತಿದ್ದು ರಾಜಕಾರಣಿಗಳ,ಅಧಿಕಾರಿಗಳ ಹಾಗೂ ಉಳ್ಳವರ ಮಕ್ಕಳು ಖಾಸಗಿ ಶಾಲೆಗೆ ಹೋಗುತ್ತಿದ್ದು ಬಡವರು ಸರ್ಕಾರಿ ಶಾಲೆಯನ್ನೇ ಅವಲಂಬಿಸುತ್ತಾರೆ. ಇದರಿಂದಾಗಿಯೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸರ್ಕಾರಿ ಶಾಲೆಗಳ ಬಗ್ಗೆ ಅಸಡ್ಡೆ ಮನೋಭಾವನೆ ತೋರುತ್ತಿದ್ದಾರೆ ಎಂದು ಪಾಲಕರು ಆರೋಪಿಸಿದ್ದಾರೆ. 

ಪಂಚಾಯತ್ ಅಧಿಕಾರಿ ತರಾಟೆಗೆ: ಪ್ರತಿಭಟನಾ ನಿರತ ಪಾಲಕರ ಮನವೊಲಿಸಲು ಬಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಪ್ರತಿಭಟನಕಾರರು ತರಾಟೆಗೆ ತೆಗೆದುಕೊಂಡ ಘಟನೆ ಜರಗಿದ್ದು ಶಾಲಾ ಪರಿಸರದಲ್ಲಿ ಕೆಲ ಸಮಯ ಗೊಂದಲದ ವಾತವರಣ ನಿರ್ಮಾಣವಾಗಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಮಾಹಿತಿ ನೀಡಿದ್ದಾರೆ. ನಂತರ ತಾಲೂಕು ಪಂಚಾಯತ್ ಕಾರ್ಯನರ್ವಾಣಾದಿಕಾರಿ ಪ್ರಭಾಕರ್ ಚಿಕ್ಕನಮನೆ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಇಂಜಿನೀಯರ್ ಮಹೇಶ್ ನಾಯ್ಕ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ಮುರುಡೇಶ್ವರ ಮುಖ್ಯ ರಸ್ತೆ ಕಾಮಾಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಪಕ್ಕದ ಚರಂಡಿ ತೆರೆದುಕೊಂಡಿದೆ 2-3ದಿನಗಳೊಳಗೆ ಅದನ್ನು ಸರಿಪಡಿಸುವ ವೆವಸ್ಥೆ ಮಾಡುವುದಾಗಿ ಹೆದ್ದಾರಿ ಅಭಿಯಂತರ ಮಹೇಶ ನಾಯ್ಕ ಭರವಸೆ ನೀಡಿದ ನಂತರವಷ್ಟೆ ಪ್ರತಿಭಟನಾ ನಿರತ ವಿದ್ಯಾರ್ಥಿ ಹಾಗೂ ಪಾಲಕರು ತಮ್ಮ ಪ್ರತಿಭಟನೆಯನ್ನು ಕೈಬಿಟ್ಟರು ಎನ್ನಲಾಗಿದೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...