ಸಮುದ್ರಪಾಲಾಗುತ್ತಿದ್ದ ವ್ಯಕ್ತಿಗೆ ಲೈಪ್ ನೀಡಿದ ’ಲೈಫ್ ಗಾರ್ಡ್’

Source: sonews | By Staff Correspondent | Published on 20th August 2017, 11:04 PM | Coastal News | State News | Special Report | Don't Miss | NewsVoir |

ಭಟ್ಕಳ: ಮುರುಡೇಶ್ವರದ ಸಮುದ್ರ ದಡದಲ್ಲಿ ಈಜಾಡುತ್ತಿದ್ದ ಪ್ರವಾಸಿಯೊಬ್ಬರು ಸಮುದ್ರದಲೆಗೆ ಸಿಲುಕಿ ಜೀವನ್ಮರಣದ ಹೋರಾಟ ನಡೆಸುತ್ತಿದ್ದಾಗ ಉ.ಕ.ಜಿಲ್ಲಾಡಳಿತದಿಂದ ನಿಯುಕ್ತಿಗೊಂಡಿರುವ ಲೈಪ್ ಗಾರ್ಡ್ ಗಳ ಕೂಡಲೆ ಸಮುದ್ರಪಾಲಾಗುತ್ತಿದ್ದ ವ್ಯಕ್ತಿಯನ್ನು ಉಳಿಸಿ ಆತನಿಗೆ ”ಲೈಫ್’ ನೀಡಿದ ಘಟನೆ ರವಿವಾರ ಮುರುಡೇಶ್ವರದಲ್ಲಿ ನಡೆದಿದೆ.

ಪ್ರಾಣಾಪಾಯದಿಂದ ಪಾರಾದ ಪ್ರವಾಸಿಯನ್ನು ತಮಿಳುನಾಡಿನ ಜೈಕಾಂತ್(೨೨) ಎಂದು ಗುರುತಿಸಲಾಗಿದ್ದು, ಇವರು ಸಮುದ್ರದಲ್ಲಿ ಈಜಾಡುತ್ತಿದ್ದಾಗ ಅಕಸ್ಮಿಕವಾಗಿ ಬಂದ ಅಲೆಯೊಂದು ಅವರನ್ನು ಸಮುದ್ರದಲ್ಲಿ ಮುಳುಗಿಸಿ ಸಾವೆನೆಡೆ ಸೆಳೆದುಕೊಂಡು ಹೋಗುತ್ತಿತ್ತು ಎನ್ನಲಾಗಿದ್ದು ಅಲ್ಲೆ ಕರ್ತವ್ಯನಿರತರಾಗಿದ್ದ ಲೈಫ್ ಗಾರ್ಡ್ ರೋಹಿತ್ ಮತ್ತು ಜಯರಾಂ ಎನ್ನುವವರೂ ತಮ್ಮ ಪ್ರಾಣವನ್ನು ಲೆಕ್ಕಿಸದೆ ಸಮುದ್ರಪಾಲಾಗುತ್ತಿದ್ದ ಜಯಂತ್ ರನ್ನು ಸುರಕ್ಷಿತವಾಗಿ ದಡಕ್ಕೆ ತರುವಲ್ಲಿ ಯಶಸ್ವಿಯಾದರು ಎಂದು ಹೇಳಲಾಗಿದೆ.

ಪ್ರವಾಸಿಗರು ಸಮುದ್ರದಲ್ಲಿ ಸಿಲುಕಿ ಸಾಯುವ ಪ್ರಕರಣಗಳು ದಿನೆ ದಿನೆ ಹೆಚ್ಚಾಗುತ್ತಿರುವುದನ್ನು ಗಮನಿಸಿದ ಇಲ್ಲಿನ ಜಿಲ್ಲಾಡಳಿತ ಕಾರವಾರ, ಗೋಕರ್ಣ ಹಾಗೂ ಮುರುಡೇಶ್ವರ ದಲ್ಲಿ ಪ್ರವಾಸಿಗರ ಸುರಕ್ಷೆಗೆಂದೇ ಲೈಫ್ ಗಾರ್ಡ್‌ಗಳನ್ನು ನೇಮಿಸಿದೆ. ಕೆಲ ದಿನಗಳ ಹಿಂದೆ ಗೋಕರ್ಣದಲ್ಲಿಯೂ ಲೈಫ್ ಗಾರ್ಡ್‌ಗಳು ಸಮುದ್ರಪಾಲಾಗುತ್ತಿದ್ದ ಪ್ರವಾಸಿಗರನ್ನು  ರಕ್ಷಿಸಿದ ಬೆನ್ನಲ್ಲೆ ಮುರಡೇಶ್ವರದ ಲೈಫ್ ಗಾರ್ಡ್‌ಗಳಿಂದಲೂ ಪ್ರವಾಸಿಗರ ಪ್ರಾಣಾ ರಕ್ಷಣೆಯಾಗಿದೆ. ಇದಕ್ಕಾಗಿ ಜನರು ಉತ್ತರಕನ್ನಡ ಜಿಲ್ಲಾಡಳಿತವನ್ನು ಅಭಿನಂದಿಸಿದ್ದಾರೆ.

Read These Next

ಜೂನ್ 29ರಿಂದ ಜುಲೈ 9 ರವರೆಗೆ  ಅಳ್ವೆಕೋಡಿ  ದುರ್ಗಾಪರಮೇಶ್ವರಿ ದೇವರ ಪುನರ್ ಪ್ರತಿಷ್ಟಾ ಸುವರ್ಣ ಮಹೋತ್ಸವ

ಭಟ್ಕಳ: ಜಿಲ್ಲೆಯ ಪ್ರಸಿದ್ಧ ಅಲ್ವೇಕೋಡಿ  ದುರ್ಗಾಪರಮೇಶ್ವರಿ ದೇವರ ಪುನರ್ ಪ್ರತಿಷ್ಟಾ ಸುವರ್ಣ ಮಹೋತ್ಸವ ಕಾರ್ಯಕ್ರಮ ಜೂನ್ 29ರಿಂದ ...

ಕಾಂಗ್ರೆಸ್‌ನ ಅಭೂತಪೂರ್ವ ಕಾರ್ಯಗಳಿಗೆ ಶುಭಾಶಯ ತಿಳಿಸಿದ ಹಿಂದುತ್ವ ನಾಯಕ ಚಕ್ರವರ್ತಿ ಸೂಲಿಬೆಲೆ

“ಕೆಲವು ವಿಚಾರ ನಾನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ಕಾಂಗ್ರೆಸಿಗರಿಗೆ ಶುಭಾಶಯ ತಿಳಿಸುತ್ತೇನೆ. ನೀವು ...

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ; ಶೇ.73.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ರಾಜ್ಯಾದ್ಯಂತ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.73.40ರಷ್ಟು ಉತ್ತೀರ್ಣತೆ ದಾಖಲಾಗಿದೆ. ...

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ; 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

ಈ ವರ್ಷದ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ 94 ರಷ್ಟು ಪ್ರಥಮ ಹಾಗೂ ದಕ್ಷಿಣ ಕಾಂಡ ಶೇ 92.12 ರಷ್ಟು ಫಲಿತಾಂಶದೊಂದಿಗೆ ದ್ವಿತೀಯ ...

ಕಾಂಗ್ರೆಸ್‌ನ ಅಭೂತಪೂರ್ವ ಕಾರ್ಯಗಳಿಗೆ ಶುಭಾಶಯ ತಿಳಿಸಿದ ಹಿಂದುತ್ವ ನಾಯಕ ಚಕ್ರವರ್ತಿ ಸೂಲಿಬೆಲೆ

“ಕೆಲವು ವಿಚಾರ ನಾನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ಕಾಂಗ್ರೆಸಿಗರಿಗೆ ಶುಭಾಶಯ ತಿಳಿಸುತ್ತೇನೆ. ನೀವು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಜಿಲ್ಲೆಯಲ್ಲಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯವ ನೀರು ಪೂರೈಸಲು ಅಗತ್ಯ ಕ್ರಮ : ಸಚಿವ ಮಧು ಎಸ್ ಬಂಗಾರಪ್ಪ

ಶಿವಮೊಗ್ಗ : ಪ್ರಸಕ್ತ ಸಾಲಿನ ಮುಂಗಾರು ವಿಫಲವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ...