ಮುರ್ಡೇಶ್ವರ: ಭಾರತೀಯ ಸೇನೆಯ ವೀರಯೋಧನಿಗೆ ಗೌರವಾರ್ಪಣೆ

Source: rotary club | By Arshad Koppa | Published on 24th July 2017, 8:03 AM | Coastal News | Guest Editorial |

ಮುರ್ಡೇಶ್ವರ: ಇತ್ತೀಚೆಗೆ ಲಯನ್ಸ್ ಕ್ಲಬ್ ಮುರ್ಡೇಶ್ವರ ವತಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುರ್ಡೇಶ್ವರದ ಬಿದ್ರಮನೆ ನಿವಾಸಿಯಾಗಿರುವ ಹನುಮಂತ ನಾಯ್ಕ ಇವರನ್ನು ಯಕ್ಷರಕ್ಷೆ ಮುರ್ಡೇಶ್ವರದಲ್ಲಿ ಸನ್ಮಾನಿಸಲಾಯಿತು. ಇವರು ಹದಿನಾಲ್ಕು ವರ್ಷಗಳಿಂದ ಭಾರತೀಯ ಸೇನೆಯಲ್ಲಿ ವಿವಿಧ ಸ್ಥಳಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ.

ಸನ್ಮಾನದ ತರುವಾಯ ಇವರೊಂದಿಗೆ ಲಯನ್ಸ್ ಕ್ಲಬ್‍ನ ಪದಾಧಿಕಾರಿಗಳು ಸಂವಾದ ನಡೆಸಿದರು. ಶ್ರೀಯುತರು ಭಾರತ ಸರ್ಕಾರವು ಸೈನಿಕರಿಗೆ ನೀಡುವ ವಿವಿಧ ರೀತಿಯ ಸೌಲಭ್ಯ, ವಿವಿಧ ರೀತಿಯ ಹುದ್ದೆಗಳು ಕುರಿತಾಗಿ ಹೆಮ್ಮೆಯಿಂದ ಹೇಳಿಕೊಂಡರು. ದೇಶ ಸೇವೆಗೆ ಇದು ಉತ್ತಮ ಅವಕಾಶವಾಗಿದ್ದು, ಇಂದಿನ ಯುವಕರಿಗೆ ಸೇನೆ ಸೇರಲು ಇರುವ ಹಲವಾರು ಅವಕಾಶಗಳ ಕುರಿತು ಮಾಹಿತಿ ನೀಡಿದರು. ಲಯನ್ ಸದಸ್ಯರಾದ ಡಾ.ಸುನೀಲ್ ಜತ್ತನ್‍ರವರು ಇವರನ್ನು ಪರಿಚಯಿಸಿದರು. ಕ್ಲಬ್‍ನ ಅಧ್ಯಕ್ಷರಾದ ಮಂಜುನಾಥ ನಾಯ್ಕ ಹಾಗೂ ಕ್ಲಬ್‍ನ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಪ್ರಜಾಸತ್ತೆಯ ಬಂಧನ!

ಭಾರತದಲ್ಲಿ ಮತ್ತೆ ಬ್ರಿಟಿಷ್ ಕ್ರೌರ್ಯದ ಕಾಲಕ್ಕೆ ಮರಳಿದೆ. ಮನುವಾದಿ ಶಕ್ತಿಗಳು ಆ ಕಾಲವನ್ನು ನಿಯಂತ್ರಿಸುತ್ತಿದೆ. ಏಕಲವ್ಯನ ಬೆರಳು ...

ಚಿಂದಿ ಆಯುವ ಹಕ್ಕು

ಗಂಭೀರವಾಗಿ ಚರ್ಚಿಸುವುದಾದಲ್ಲಿ ಒಂದು ಸಾಮಾಜಿಕವಾಗಿ ತಿರಸ್ಕಾರಕ್ಕೊಳಪಟ್ಟ ವೃತ್ತಿಯಾದ ಚಿಂದಿ ಆಯುವುದು ನೈತಿಕವಾಗಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...