ವಂಚನೆಗೊಳಗಾದ ಮುಸ್ಲಿಮರ ವಿಶ್ವಾಸ ಗಳಿಸಿ: ಎನ್​​ಡಿಎ ಸಂಸದರಿಗೆ ಪ್ರಧಾನಿ ಮೋದಿ ಕಿವಿಮಾತು

Source: S O News Service | By I.G. Bhatkali | Published on 26th May 2019, 12:40 AM | National News |

ನವದೆಹಲಿ: ದೇಶದ ಅಲ್ಪಸಂಖ್ಯಾತರು ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ. ಮುಸ್ಲಿಂ ಸಮುದಾಯವನ್ನು ವಿರೋಧ ಪಕ್ಷಗಳು ಮತ ಬ್ಯಾಂಕ್​​ಗಾಗಿ ಬಳಸಿಕೊಳ್ಳುತ್ತಿವೆ. ಎಲ್ಲಾ ವರ್ಗದ ಬಡವರಂತೆಯೇ ಅಲ್ಪಸಂಖ್ಯಾತರನ್ನು ವಂಚಿಸಲಾಗಿದೆ. ನಾವು ಮುಸ್ಲಿಂ ಸಮುದಾಯದ ನಂಬಿಕೆ ಗಳಿಸಬೇಕಿದೆ. 2019ರಲ್ಲಿ ನಾವು ಇವರ ನಂಬಿಕೆಯನ್ನು ಮತ್ತೆ ಗಳಿಸಿಕೊಳ್ಳುವ ನಿಟ್ಟಿನಲ್ಲಿ ಶ್ರಮಿಸಬೇಕು. ಹಾಗೂ ಅವರಿಗಾಗುತ್ತಿರುವ ವಂಚನೆಯನ್ನು ನಿಲ್ಲಿಸಬೇಕು" ಎಂದು ಪ್ರಧಾನಿ ನರೇಂದ್ರ ಮೋದಿಯವರು ಜನಪ್ರತಿನಿಧಿಗಳಿಗೆ ತಿಳಿಸಿದರು.

NDA ಮೈತ್ರಿ ಕೂಟದ ಮೊದಲ ಸಂಸದೀಯ ಸಭೆಯಲ್ಲಿ 17ನೇ ಲೋಕಸಭೆಯ ನೂತನ ಸಂಸದರನ್ನುದ್ದೇಶಿ ನರೇಂದ್ರ ಮೋದಿ ಮಾತನಾಡಿದ್ದಾರೆ.

ಮೊದಲ ಅವಧಿಯಲ್ಲಿ ತಾವು ಪ್ರಧಾನಿಯಾಗಿದ್ದಾಗ ಸಬ್​ ಕಾ ಸಾಥ್​, ಸಬ್​ ಕಾ ವಿಕಾಸ್​ (ಎಲ್ಲರ ಜತೆಗೂಡಿ ಸರ್ವರ ಅಭಿವೃದ್ಧಿ) ಎಂಬ ಮಂತ್ರ ಪಠಿಸಿದ್ದ ನರೇಂದ್ರ ಮೋದಿ, ಇದೀಗ ತಮ್ಮ ಸೂತ್ರಕ್ಕೆ ಸಬ್​ ಕಾ ವಿಶ್ವಾಸ್​ (ಎಲ್ಲ ವಿಶ್ವಾಸ) ಎಂಬ ಹೊಸ ಮಂತ್ರವನ್ನು ಸೇರ್ಪಡೆಗೊಳಿಸಿಕೊಂಡಿದ್ದಾರೆ.

ಸಂಸತ್​ನ ಸೆಂಟ್ರಲ್​ ಹಾಲ್​ನಲ್ಲಿ ಶನಿವಾರ ನಡೆದ ಎನ್​ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ ಸಂಸದೀಯ ಪಕ್ಷದ ನಾಯಕರಾಗಿ ಆಯ್ಕೆಯಾದ ಬಳಿಕ ಮಾತನಾಡಿದರು. ನಿಯೋಜಿತ ಪ್ರಧಾನಿಯಾಗಿ ಮಾತನ್ನು ಆರಂಭಿಸುವ ಮುನ್ನ ಅವರು ಹಾಲ್​ನಲ್ಲಿ ಇರಿಸಲಾಗಿದ್ದ ಸಂವಿಧಾನದ ಪುಸ್ತಕದ ಪ್ರತಿಕೃತಿಗೆ ಶಿರಬಾಗಿ ನಮಿಸಿದ್ದು ವಿಶೇಷವಾಗಿತ್ತು.

ಇಂದು ಎನ್‌ಡಿಎ ಮೈತ್ರಿಕೂಟದ ಸಂಸದೀಯ ಮಂಡಳಿ ನಾಯಕನಾಗಿ ನರೇಂದ್ರ ಮೋದಿಯವರು ಮತ್ತೊಮ್ಮೆ ಆಯ್ಕೆಯಾಗಿದ್ದಾರೆ. ಶನಿವಾರ ಸಂಜೆಯೇ ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ನಡೆದ ಸಭೆಯಲ್ಲಿ ಎನ್ ಡಿಎ ಮೈತ್ರಿಕೂಟದ ಸಂಸದರು ಸರ್ವಾನುಮತದಿಂದ ಮೋದಿಯವರನ್ನು ಆಯ್ಕೆ ಮಾಡಿದ್ದಾರೆ. ಮೈತ್ರಿಕೂಟದ ಮಿತ್ರ ಪಕ್ಷದ ಮುಖಂಡ ನಿತೀಶ್ ಕುಮಾರ್ ಅವರು ನರೇಂದ್ರ ಮೋದಿ ಅವರ ಹೆಸರನ್ನು ಅನುಮೋದಿಸಿದರು. ನಂತರ ಸರ್ವಾನು ಮತದಿಂದ ಜಯಘೋಷಗಳೊಂದಿಗೆ ಮೋದಿ ಅವರ ಹೆಸರನ್ನು ಪ್ರಕಟಿಸಲಾಯಿತು.

ಎನ್ ಡಿಎ ಮೈತ್ರಿಕೂಟದ ಎಲ್ಲಾ ಸಂಸದರು ಸಭೆಯಲ್ಲಿ ಭಾಗಿಯಾಗಿದ್ದರು. ಆಯ್ಕೆಯಾದ ನಂತರ ಹಿರಿಯ ಮುಖಂಡರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಷಿ ಅವರ ಕಾಲಿಗೆ ಎರಗಿದ ನರೇಂದ್ರ ಮೋದಿ ಅವರು ಅವರಿಂದ ಆಶೀರ್ವಾದ ಪಡೆದರು. ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಂಸದ ಅಮಿತ್ ಷಾ ಪ್ರಾಸ್ತಾವಿಕ ಭಾಷಣ ಮಾಡಿದರು. ನಂತರ ನರೇಂದ್ರ ಮೋದಿ ಅವರು ಸಂಸದರನ್ನು ಉದ್ದೇಶಿಸಿ ಮಾತನಾಡಿದರು.

ಇಲ್ಲಿನ ಸಭೆಯನ್ನುದ್ದೇಶಿಸಿ ಮಾತಾಡಿದ ಪ್ರಧಾನಿ ಮೋದಿಯವರು, ಸಂಸದೀಯ ನಾಯಕನಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ. ನಾನು ನಿಮಗೆಲ್ಲರಿಗೂ ಆಭಾರಿಯಾಗಿದ್ದೇನೆ. ನವಭಾರತದ ನಮ್ಮ ಸಂಕಲ್ಪ ವಿನೂತನವಾಗಿ ಆರಂಭವಾಗಲಿದೆ. ಇಡೀ ವಿಶ್ವವೇ ಭಾರತದ ಚುನಾವಣೆಯನ್ನು ನೋಡುತ್ತಿತ್ತು. ಈ ಬದಲಾವಣೆ ಪ್ರಕ್ರಿಯೆಯಲ್ಲಿ ನೀವೆಲ್ಲ ಭಾಗಿಯಾಗಿದ್ದೀರಿ ಎನ್ನುವ ಮೂಲಕ ಮೊದಲ ಬಾರಿಗೆ ಆಯ್ಕೆಯಾಗಿ ಬಂದವರಿಗೆ ಅಭಿನಂದನೆ ಸಲ್ಲಿಸಿದರು.

ಹಾಗೆಯೇ ಭಾರತ ಪ್ರಜಾತಂತ್ರದ ಉತ್ಸವ ವಿಶ್ವದ ಮುಂದೆ ಪ್ರತಿಷ್ಠೆಯಾಗಿ ನಿಲ್ಲಿಸಬೇಕು. ಚುನಾವಣೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಧನ್ಯವಾದ. ಜನಾದೇಶ ನಮ್ಮ ಜವಾಬ್ದಾರಿಗಳನ್ನು ಮತ್ತಷ್ಟು ಹೆಚ್ಚಿಸಿದೆ. ಈ ಜವಾಬ್ದಾರಿ ಎಲ್ಲರೂ ಸಮರ್ಥವಾಗಿ ನಿಭಾಯಿಸಬೇಕು. ದೇಶದ ರಾಜಕೀಯದಲ್ಲಿ ಬದಲಾವಣೆ ಬಂದಿದೆ. ಅಧಿಕಾರ ಮತದಾರರ ಮೇಲೆ ಎಂದೂ ಪ್ರಭಾವಿಸಲ್ಲ. ಜನ ನಮ್ಮನ್ನು ಆರಿಸಿದ್ದು ನಮ್ಮ ಸೇವಾಭಾವ ನೋಡಿ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...