ಎಂವಿಎ ಸರ್ಕಾರದ ಆಯುಷ್ಯ 2-3 ದಿನಗಳಷ್ಟೇ: ಕೇಂದ್ರ ಸಚಿವ

Source: PTI | By MV Bhatkal | Published on 26th June 2022, 11:49 PM | National News |

ಮುಂಬೈ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರ ಅಸ್ತಿತ್ವದಲ್ಲಿರುವುದು ಇನ್ನು 2-3 ದಿನಗಳಷ್ಟೇ ಎಂದು ಕೇಂದ್ರ ಸಚಿವ ರಾವ್ ಸಾಹೇಬ್ ದನ್ವೆ ಹೇಳಿದ್ದಾರೆ. 

ಎನ್ ಸಿಪಿ ಸಚಿವ ರಾಜೇಶ್ ಟೋಪೆ ಅವರಿದ್ದ ಕೃಷಿ ಇಲಾಖೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಕೇಂದ್ರ ಸಚಿವರು ನಾವು ಅಂದರೆ ಬಿಜೆಪಿಯವರು ವಿಪಕ್ಷದಲ್ಲಿರುವುದು ಇನ್ನು 2-3 ದಿನಗಳಷ್ಟೇ, ಆದ್ದರಿಂದ ಎಂವಿಎ ಸರ್ಕಾರ ಬಾಕಿ ಇರುವ ಅಭಿವೃದ್ಧಿ ಕೆಲಸಗಳನ್ನು ಅತಿ ಶೀಘ್ರವಾಗಿ ಮುಕ್ತಾಯಗೊಳಿಸಬೇಕು ಎಂದು ಹೇಳಿದ್ದಾರೆ. 

ಸಮಯ ಹೆಚ್ಚು ಇಲ್ಲ. ಈ ಸರ್ಕಾರ ಅಸ್ತಿತ್ವದಲ್ಲಿರುವುದು ಇನ್ನು 2-3 ದಿನಗಳಷ್ಟೇ. ಈ ಬಂಡಾಯಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಅಭಿವೃದ್ಧಿಗಾಗಿ ಅನುದಾನವನ್ನು ಎನ್ ಸಿಪಿ ಹಾಗೂ ಕಾಂಗ್ರೆಸ್ ಹೆಚ್ಚು ಪಡೆಯುತ್ತಿದ್ದವು ಆದ್ದರಿಂದ ಶಿವಸೇನೆ ಬಂಡಾಯ ಶಾಸಕರು ಉದ್ಧವ್ ವಿರುದ್ಧ ಅಸಮಾಧಾನ ಹೊಂದಿದ್ದರು ಎಂದು ಕೇಂದ್ರ ಕಲ್ಲಿದ್ದಲು, ಗಣಿ, ರೈಲ್ವೆ ಖಾತೆ ರಾಜ್ಯ ಸಚಿವರು ತಿಳಿಸಿದ್ದಾರೆ. 

ಶಿಂಧೆ ಬಣದ ಶಾಸಕರು ಬಿಜೆಪಿಯೊಂದಿಗೆ ವಿಲೀನಗೊಳ್ಳಲಿದ್ದಾರಾ? ಎಂಬ ಪ್ರಶ್ನೆಗೆ ಉತ್ತರಿಸಿರುವ ಕೇಂದ್ರ ಸಚಿವರು, ಈಗ ಅಂತಹ ಯಾವುದೇ ಪ್ರಸ್ತಾವನೆಗಳೂ ಇಲ್ಲ. ಯಾರಾದರೂ ಪಕ್ಷ ಸೇರುವುದಾದರೆ ಬಿಜೆಪಿ ಕೇಂದ್ರ ನಾಯಕರು ನಿರ್ಧಾರ ಕೈಗೊಳ್ಳಲಿದ್ದಾರೆ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳ್ಳುವ ಯಾವುದೇ ಸಾಧ್ಯತೆಯೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...