ನನ್ನ ಕುಟುಂಬ ನನ್ನ ಜವಾಬ್ದಾರಿ ಜಾಗೃತಿ ಸ್ಟಿಕರ್ ಅಳವಡಿಕೆ

Source: SO News | By Laxmi Tanaya | Published on 18th October 2020, 10:42 AM | Coastal News | Don't Miss |

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೋವಿಡ್ -೧೯ ಕುರಿತು ಪ್ರತೀ ಮನೆ ಮನೆಗೆ ಅರಿವು ಮೂಡಿಸಲು ಜಿಲ್ಲಾಡಳಿತ ರೂಪಿಸಿರುವ, “ನನ್ನ ಕುಟುಂಬ ನನ್ನ ಜವಾಬ್ದಾರಿ” ಅಭಿಯಾನ ಕಾರ್ಯಕ್ರಮದ ಸ್ಟಿಕರ್‌ನ್ನು, ಜಿಲ್ಲಾ ನ್ಯಾಯಾಲಯದ ಸಮೀಪದ  ವಸತಿ ಸಂಕೀರ್ಣದಲ್ಲಿನ ಮನೆಯ ಬಾಗಿಲಿಗೆ,  ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಕಾವೇರಿ ಮತ್ತು ಜಿಲ್ಲಾಧಿಕಾರಿ ಜಿ.ಜಗದೀಶ್ ಅಂಟಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಈ ಸ್ಟಿಕರ್‌ನಲ್ಲಿ ಮನೆಯಲ್ಲಿನ ಪ್ರತೀ ಸದಸ್ಯರು ಕೋವಿಡ್ ೧೯ ನಿಂದ ತಮ್ಮ ಕುಟುಂಬವನ್ನು ರಕ್ಷಿಸಲು ಪಾಲಿಸಬೇಕಾದ ಕೋವಿಡ್-೧೯ ನಿಯಂತ್ರಣಾ ಮುನ್ನೆಚ್ಚರಿಕಾ ಕ್ರಮಗಳು ಮತ್ತು ಕುಟುಂಬದ ಹಿರಿಯ ಸದಸ್ಯರನ್ನು ಸೋಂಕಿಗೆ ಒಳಗಾಗದಂತೆ ರಕ್ಷಿಸುತ್ತೇನೆ, ಗರ್ಭಿಣಿ ಮಹಿಳೆಯರನ್ನು ಸೋಂಕಿಗೆ ಒಳಗಾಗದಂತೆ ರಕ್ಷಿಸುತ್ತೇನೆ, ಕುಟುಂಬದ ಸದಸ್ಯರಿಗೆ ರೋಗ ಲಕ್ಷಣಗಳಿದ್ದಲ್ಲಿ ಅವರನ್ನು ಪರೀಕ್ಷೆಗೆ ಒಳಪಡಿಸಲು ಬದ್ದನಾಗಿದ್ದೇನೆ, ಕೋವಿಡ್ ೧೯ ಪ್ರಸರಣ ಸರಪಳಿಯನ್ನು ಮೊಟಕುಗೊಳಿಸಲು ನನ್ನ ಕಡೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧನಾಗಿದ್ದೇನೆ ಎಂದು ಸಹಿ ಮಾಡಿದ ಸ್ವಯಂ ಘೋಷಣಾ ಪ್ರಮಾಣ ಪತ್ರದ ಪ್ರತಿ ಇರುತ್ತದೆ.

     ಜಿಲ್ಲೆಯ ಪ್ರತೀ ಮನೆ ಮನೆಗೂ ಈ ಸ್ಟಿಕರ್ ಅಂಟಿಸಿ, ಸಹಿ ಮಾಡಿದ ಸ್ವಯಂ ಘೋಷಣಾ ಪತ್ರವನ್ನು ಪಡೆಯುವ ಹಾಗೂ ಮನೆಯವರಿಂದ ಪ್ರತಿಜ್ಞಾ ಪಡೆಯುವ ಕಾರ್ಯಕ್ರಮವನ್ನು ಜಿಲ್ಲಾಡಳಿತ ರೂಪಿಸಿದೆ.

     ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡಾ, ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ್ ಭಟ್, ಡಾ. ಪ್ರೇಮಾನಂದ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪ್ರೇಮ್ ಸಾಗರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...