ಮೈಸೂರು ಜಿಲ್ಲೆಯ ಟಿ.ನರಸಿಪುರದಲ್ಲಿ ಭೀಕರ ರಸ್ತೆ ಅಪಘಾತ; ೧೦ ಮಂದಿ ಸಾವು, ಮೃತರಿಗೆ ೨ಲಕ್ಷ ರೂ ಪರಿಹಾರ ಘೋಷಿಸಿದ ಸಿ.ಎಂ

Source: SOnews | By Staff Correspondent | Published on 29th May 2023, 6:10 PM | State News |

ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ

ಮೈಸೂರು: ಟಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ.

ಕೊಳ್ಳೇಗಾಲ- ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಇನೋವಾ ಕಾರು ಹಾಗೂ ಖಾಸಗಿ ಬಸ್ ನಡುವೆ ಈ ಅಪಘಾತ ಸಂಭವಿಸಿದ್ದು, ಮೃತರೆಲ್ಲರೂ ಬಳ್ಳಾರಿ ಮೂಲದವರು ಎಂದು ತಿಳಿದು ಬಂದಿದೆ. ಗಂಭೀರವಾಗಿ ಗಾಯಗೊಂಡವರನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಜನಾರ್ಧನ್, ಶಶಿಕುಮಾರ್, ಮಗು ಪುನೀತ್ ಗಂಭೀರ ಗಾಯಗೊಂಡವರಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.

27 ರಂದು ಬಳ್ಳಾರಿ ಜಿಲ್ಲೆಯ ಸಂಗನಕಲ್ ಗ್ರಾಮದಿಂದ ಒಟ್ಟು 13 ಜನರು ಮೈಸೂರು ಪ್ರವಾಸಕ್ಕೆ ಬಂದಿದ್ದರು. ಚಾಮರಾಜನಗರ ಜಿಲ್ಲೆಯ ಮಲೆ ಚಾಮುಂಡಿ ಬೆಟ್ಟ, ಮಲೆ ಮಹದೇಶ್ವರ ಬೆಟ್ಟ ಹಾಗೂ ಬಿಳಿಗಿರಿರಂಗನ ಬೆಟ್ಟಕ್ಕೆ ಹೋಗಿ ವಾಪಸ್ ಮೈಸೂರಿಗೆ ಬರುವಾಗ ಈ ಅಫಘಾತ‌ ಸಂಭವಿಸಿದೆ ಎನ್ನಲಾಗಿದೆ.

 

ಟಿ.ನರಸೀಪುರ ಬಳಿ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ:

ಟಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದಲ್ಲಿ ಸೋಮವಾರ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ  ಭೀಕರ ಅಪಘಾತದಲ್ಲಿ  ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು‌. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು' ಎಂದು ತಿಳಿಸಿದ್ದಾರೆ. 

''ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ'' ಎಂದು ಮಾಹಿತಿ ನೀಡಿದ್ದಾರೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...