ಕಬ್ಬು ಅರೆಯಲು ಕಾರ್ಖಾನೆಗಳಿಗೆ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಸೂಚನೆ 

Source: S.O. News Service | By MV Bhatkal | Published on 3rd July 2019, 3:41 PM | State News | Don't Miss |

ಮಂಡ್ಯ:ಜಿಲ್ಲೆಯಲ್ಲಿ ಕಟಾವಿಗೆ ಬಂದಿರುವ ಕಬ್ಬನ್ನು ಅರೆಯುವ ನಿಟ್ಟಿನಲ್ಲಿ ಸಕ್ಕರೆ ಕಾರ್ಖಾನೆಗಳನ್ನು ಕೂಡಲೇ ಪುನಾರಂಭಿಸಿ ಜುಲೈ 15 ನಂತರ ಕಬ್ಬನ್ನು ಅರೆಯಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ಕಾರ್ಖಾನೆಯ ಆಡಳಿತ ಮಂಡಳಿಯ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಕ್ಕರೆ ಕಾರ್ಖಾನೆಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ರೈತರಿಗೆ ಸಕ್ಕರೆ ಕಾರ್ಖಾನೆಗಳಿಂದ ಬರಬೇಕಾದ ಕಬ್ಬಿನ ಬಾಕಿ ಹಣವನ್ನು ಪಾವತಿಸುವ ಸಂಬಂಧ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯಿಂದ ಬಾಕಿ ಇರುವ ರೂ 27 ಕೋಟಿ ಹಣವನ್ನು ಪಾವತಿಸಲು ಕೂಡಲೇ ಅಗತ್ಯ ಕ್ರಮವಹಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು ಎರಡು ಹಂತದಲ್ಲಿ ಅಂದರೆ ಬರುವ ಶನಿವಾರ ರೂ 10 ಕೋಟಿ ಹಾಗೂ ಮುಂಬರುವ ಶನಿವಾರ ರೂ 10 ಕೋಟಿ ಹಣವನ್ನು ಪಾವತಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಈ ಸಂದರ್ಭದಲ್ಲಿ ಎಲ್ಲಾ ಕಾರ್ಖಾನೆಯ ಆಡಳಿತ ಮಂಡಳಿಯ ಅಧಿಕಾರಿಗಳು ಜುಲೈ 15 ನಂತರ ಕಬ್ಬನ್ನು ಅರೆಯಲು ಸಮ್ಮತಿಸಿದರು.
ಜುಲೈ ಕೊನೆಯ ವಾರ ಸಕ್ಕರೆ ಕಾರ್ಖಾನೆಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಆಹಾರ ಮತ್ತು ನಾಗರೀಕ ಪೂರೈಕೆ ಉಪನಿರ್ದೆಶಕರಾದ ಹೇಮಲತಾ ಹಾಗೂ ಸಕ್ಕರೆ ಕಾರ್ಖಾನೆಯ ಅಧಿಕಾರಗಳು ಉಪಸ್ಥಿತರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...