ನಜ್ಮಾ ಪೀರಜಾದೆ ಅವರಿಗೆ ರಾಜ್ಯ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ

Source: S.O. News Service | By MV Bhatkal | Published on 26th January 2020, 8:20 PM | State News | Don't Miss |

ಧಾರವಾಡ:ಭೂಮಾಪನ ಕಂದಾಯ ವ್ಯವಸ್ಥೆ ಹಾಗೂ ಭೂದಾಖಲೆಗಳ ಇಲಾಖೆಯ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಉಪನಿರ್ದೇಶಕರಾದ ನಜ್ಮಾ ಎಂ.ಪೀರಜಾದೆ ಅವರಿಗೆ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಇಂದು ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ, ರಾಜ್ಯಪಾಲರಾದ ವಜೂಭಾಯಿ ವಾಲಾ ಪ್ರದಾನ ಮಾಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗಣ್ಯರು ಉಪಸ್ಥಿತರಿದ್ದರು.
ಪ್ರಶಸ್ತಿಯು 25 ಸಾವಿರ ರೂ. ಪೆÇ್ರೀತ್ಸಾಹ ಧನ, ಸ್ಮರಣಿಕೆ ಒಳಗೊಂಡಿದೆ.
ನಜ್ಮಾ ಪೀರಜಾದೆ ಅವರು ಬೆಳಗಾವಿ ಜಿಲ್ಲೆಯ ಗ್ರಾಮಗಳ ಮರು ಭೂಮಾಪನ ಕಾರ್ಯಪೂರ್ಣಗೊಳಿಸಿ, 157 ಕಂದಾಯ ಗ್ರಾಮಗಳನ್ನು ಸೃಜಿಸಲು, ಭೂದಾಖಲೆಗಳ ವಿವಾದಗಳ ತ್ವರಿತ ಇತ್ಯರ್ಥಪಡಿಸುವಿಕೆ, ಭೂದಾಖಲೆಗಳ ಸರಿಪಡಿಸುವಿಕೆ, ಸರ್ಕಾರಿ ಜಮೀನು, ಕೆರೆ, ವಕ್ಫ್ ಆಸ್ತಿಗಳನ್ನು ಸಂರಕ್ಷಿಸಲು ಶ್ರಮಿಸಿರುವುದನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...