ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಪ್ರಕಟ ; ಉತ್ತರ ಕನ್ನಡದ ಜಿಲ್ಲೆಯ  ಆರ್ತಿ ಕಿರಣ ಶೇಟ್  ಆಯ್ಕೆ

Source: sonews | By Staff Correspondent | Published on 22nd January 2020, 12:24 AM | Coastal News | National News | Don't Miss |

ನವದೆಹಲಿ: ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ನೀಡುವ ರಾಷ್ಟ್ರೀಯ ಶೌರ್ಯ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಪ್ರಕಟ ಮಾಡಿದ್ದು. ಉತ್ತರ ಕನ್ನಡ ಜಿಲ್ಲೆಯ 9 ವರ್ಷದ ಕುಮಾರಿ ಆರ್ತಿ ಕಿರಣ್ ಶೇಟ್ ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾಳೆ.

ಉತ್ತರಕನ್ನಡ ಜಿಲ್ಲೆಯ ಆರ್ತಿ ಶೇಟ್ 2019 ರಲ್ಲಿ ಹಸುವಿನ ದಾಳಿಯಿಂದ 2 ವರ್ಷದ ಮಗುವನ್ನು ರಕ್ಷಣೆ ಮಾಡಿದ್ದಳು. ಈಕೆಯ ಸಮಯೋಚಿತ ನಡೆಯಿಂದಾಗಿ ಆ ಚಿಕ್ಕ ಮಗುವಿಗೆ ಪುನರ್ಜನ್ಮ ಸಿಕ್ಕಿತ್ತು. ಈಕೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನವೀಲಗೋಣ ಗ್ರಾಮದವಳು. ಕೆನರಾ ವೆಲ್ಹ್ ಫೆರ್ ಟ್ರಸ್ಟ್ ನ ದಿನಕರ ಪ್ರಾಥಮಿಕ ಶಾಲೆ ಧಾರೇಶ್ವರದಲ್ಲಿ 5 ನೇ ತರಗತಿಯಲ್ಲಿ ಓದುತ್ತಿರುವ ಆರ್ತಿ ಶೇಟ್ ಗೆ ಕಳೆದ ವರ್ಷ ರಾಜ್ಯ ಸರ್ಕಾರ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಿತ್ತು.

ಪ್ರತಿ ಪ್ರಶಸ್ತಿಯು ಪ್ರಶಸ್ತಿ,ಪದಕ, 1,00,000 ರೂ. ನಗದು, 10,000 ರೂ. ಮೌಲ್ಯದ ಬುಕ್ ವೋಚರ್, ಪ್ರಮಾಣ ಪತ್ರ ಹೊಂದಿರಲಿದೆ.

ಒಟ್ಟು 22 ಮಕ್ಕಳಿಗೆ ಶೌರ್ಯ ಪ್ರಶಸ್ತಿ ಘೋಷಿಸಿದ್ದು, ಆರ್ತಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಜನವರಿ 26ರಂದು ರಾಜ​ಪಥದಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​ನಲ್ಲಿ ಭಾಗಿಯಾಗಲಿರುವ ಇವಳು  ಪ್ರಶಸ್ತಿ ಸ್ವೀಕರಿಸಲಿದ್ದಾಳೆ 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...