ರಾಷ್ಟ್ರೀಯಪೌರತ್ವ ತಿದ್ದುಪಡಿ ಮಸೂದೆಗೂ ಕೇಂದ್ರ ಸಂಪುಟ ಅಸ್ತು, ಮುಂದಿನ ವಾರ ಸಂಸತ್ತಿನಲ್ಲಿ ಮಂಡನೆ

Source: so news | By Staff Correspondent | Published on 10th December 2019, 12:29 AM | National News | Don't Miss |

 

ನವದೆಹಲಿ: ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನದ ಮುಸ್ಲಿಮೇತರ ನಿರಾಶ್ರಿತರಿಗೆ ನಾಗರಿಕ ಪೌರತ್ವ ಹಕ್ಕು ನೀಡುವ ತಿದ್ದುಪಡಿ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.ಕಳೆದ ಲೋಕಸಭೆಯಲ್ಲಿ ಈ ವಿವಾದಿತ ಮಸೂದೆಯನ್ನು ಮಂಡಿಸಲಾಗಿದ್ದು, ಅದಕ್ಕೆ ಅಂಗೀಕಾರ ದೊರಕಿರಲಿಲ್ಲ. ಈ ಹಿನ್ನಲೆಯಲ್ಲಿ ಮುಂದಿನ ವಾರ ಮತ್ತೆ ಸಂಸತ್ ನಲ್ಲಿ ಮಂಡನೆಯಾಗುವ ನಿರೀಕ್ಷೆ ಇದೆ ಎಂದೂ ವರದಿಯಾಗಿದೆ.ಮಂಗಳವಾರವೇ ಈ ಕುರಿತು ಬಿಜೆಪಿ ಸಂಸದರಿಗೆ ಸುಳಿವು ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈ ಮಸೂದೆಗೂ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಪೌರತ್ವ ತಿದ್ದುಪಡಿ ಮಸೂದೆ ಮಂಡನೆ ವೇಳೆ ಎಲ್ಲ ಸಂಸದರು ಸದನದಲ್ಲಿ ಕಡ್ಡಾಯವಾಗಿ ಹಾಜರಿರಬೇಕು ಎಂದು ಸೂಚಿಸಿದ್ದಾರೆ. ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ 370ನೇ ವಿಧಿಯನ್ನು ರದ್ದುಗೊಳಿಸುವಷ್ಟೇ ಮಹತ್ವದ ಮಸೂದೆ ಇದಾಗಿದೆ ಎಂದು ರಕ್ಷಣಾ ಸಚಿವರು ಸೂಚ್ಯವಾಗಿ ಹೇಳಿದ್ದಾರೆ ಎಂದೂ ಉನ್ನತ ಮೂಲಗಳು ತಿಳಿಸಿವೆ.2016ರಲ್ಲಿ ಮೊದಲಿಗೆ ಸಂಸತ್ತಿನಲ್ಲಿ ಈ ತಿದ್ದುಪಡಿ ಮಸೂದೆ ಮಂಡಿಸಲಾಗಿತ್ತು. ಅಸ್ಸಾಂ ಹಾಗೂ ಈಶಾನ್ಯ ಭಾಗದ ರಾಜ್ಯಗಳ ಜನರು ಈ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. 1985ರ ಅಸ್ಸಾಂ ಒಪ್ಪಂದದ ಅನುಸಾರ, 1971ರ ಮಾರ್ಚ್ 24ರ ಬಳಿಕ ವಲಸೆ ಬಂದ ಯಾವುದೇ ಧರ್ಮದವರನ್ನು ಸಹಅಕ್ರಮ ವಲಸಿಗರು ಎಂದು ಪರಿಗಣಿಸಲಾಗುತ್ತದೆ. ಆದರೆ ಈಗ ತಿದ್ದುಪಡಿ ಮಾಡಲಾಗಿರುವ ಮಸೂದೆ ಜಾರಿಗೆ ಬಂದರೆ, ಅಸ್ಸಾಂ ಒಪ್ಪಂದ ಅರ್ಥ ಕಳೆದುಕೊಳ್ಳಲಿದೆ ಎನ್ನುವುದು ಇವರ ವಾದ. ಮೇಘಾಲಯ ಹಾಗೂ ಮಿಜೋರಾಂ ಸರ್ಕಾರಗಳು ಸಹ ಈ ತಿದ್ದುಪಡಿ ಮಸೂದೆ ವಿರೋಧಿಸಿ ನಿರ್ಣಯ ಅಂಗೀಕರಿಸಿವೆ

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...