ವೈದ್ಯರ ದಿನಾಚರಣೆ ಹಿನ್ನಲೆ:ಭಟ್ಕಳದಲ್ಲಿ ಬೃಹತ್ ರಕ್ತದಾನ ಶಿಬಿರ

Source: so news | By MV Bhatkal | Published on 2nd July 2019, 11:39 AM | Coastal News | Don't Miss |

ಭಟ್ಕಳ: ರಕ್ತಕ್ಕೆ ಬದಲಿ ವ್ಯವಸ್ಥೆ ಇಲ್ಲ. ಮನುಷ್ಯನ ಜೀವನಕ್ಕೆ ರಕ್ತ ಅತ್ಯವಶ್ಯಕ. ಒಂದು ಬಾಟಲ್ ರಕ್ತದಿಂದ ಒಬ್ಬರ ಜೀವನ ಉಳಿಸಬಹುದು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು.

ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆ, ಉಡುಪಿ ಬ್ಲಡ್ ಬ್ಯಾಂಕ್, ಐಎಂಎ, ಲ್ಯಾಬ್ ಅಸೋಸಿಯೇಷನ್, ಕೆಮಿಸ್ಟ್ ಆಂಡ್ ಡ್ರಗ್ಗಿಸ್ಟ್ ಅಸೋಸಿಯೇಶನ್, ರಿಜಿಸ್ಟರ ಮೆಡಿಕಲ್ ಪ್ರಾಕ್ಟಿಶನರ್ಸ್, ಎಎಫ್​ಇ ಸಹಯೋಗದಲ್ಲಿ ಜರುಗಿದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ತಾಲೂಕಾಸ್ಪತ್ರೆಯ ವ್ಯವಸ್ಥೆ ಈ ಹಿಂದಿಗಿಂತ ಸಾಕಷ್ಟು ಬದಲಾಗಿದೆ. ಶಾಸಕನಾಗಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ. ಜನರು ಮತ್ತು ಅಧಿಕಾರಿಗಳ ಮಧ್ಯೆ ಮಧ್ಯವರ್ತಿಯಾಗಿ ಕೆಲಸ ಮಾಡಿ ಸಮಸ್ಯೆಗೆ ಸ್ಪಂದಿಸಿದ್ದೇನೆ. ಆಸ್ಪತ್ರೆಯ ವ್ಯವಸ್ಥೆ ಬದಲಾಗಲು ವೈದ್ಯರು ಮತ್ತು ಸಿಬ್ಬಂದಿಯ ಉತ್ತಮ ಸೇವೆಯೇ ಕಾರಣ. ಸರ್ಕಾರಿ ಆಸ್ಪತ್ರೆಗೆ ಇನ್ನೊಂದು ಆಂಬುಲೆನ್ಸ್ ಅವಶ್ಯಕತೆ ಬಗ್ಗೆ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ಕೆಎಂಸಿ ಮಣಿಪಾಲ ನಿಯೋನಾಟಾಲಜಿ ವಿಭಾಗದ ಎಚ್​ಒಡಿ ಡಾ. ಲೇಸಲೀನ್ ಲೂಯೀಸ್ ಮಾತನಾಡಿ, ರಕ್ತದಾನ ಶಿಬಿರವನ್ನು ವೈದ್ಯರ ದಿನದಂದು ನಡೆಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಇದೇ ರೀತಿ ಪ್ರತಿ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಬೇಕು ಎಂದರು. ನಂತರ ಶಾಸಕರು ಹಾಗೂ ಸಾರ್ವಜನಿಕರು ತಾಲೂಕಾಸ್ಪತ್ರೆ ವೈದ್ಯರನ್ನು ಸನ್ಮಾನಿಸಿದರು.
ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ ಅವರನ್ನು ಆಟೋ ರಿಕ್ಷಾ ಚಾಲಕರು ಸನ್ಮಾನಿಸಿದರು. ಶಿಬಿರದಲ್ಲಿ 70ಕ್ಕೂ ಅಧಿಕ ಜನ ರಕ್ತದಾನ ಮಾಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಮೂರ್ತಿರಾಜ್ ಭಟ್, ಉಡುಪಿ ಬ್ಲಡ್ ಬ್ಯಾಂಕ್ ವೈದ್ಯೆ ವೀಣಾ ಕುಮಾರಿ, ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಉಪಸ್ಥಿತರಿದ್ದರು

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...