ನ್ಯಾಷನಲ್ ಮೀಡಿಯಾ ಅವಾರ್ಡ್-2020 ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Source: SO News | By Laxmi Tanaya | Published on 4th November 2020, 9:34 PM | State News | Don't Miss |

ಧಾರವಾಡ : ಭಾರತ ಚುನಾವಣಾ ಆಯೋಗವು ಚುನಾವಣೆಗೆ ಸಂಬಂಧಿಸಿದಂತೆ 2020ನೇ ಸಾಲಿನಲ್ಲಿ ಮತದಾರರ ಶಿಕ್ಷಣ ಮತ್ತು ಅರಿವು ಮೂಡಿಸುವಲ್ಲಿ ಅತ್ಯುತ್ತಮ ಪ್ರಚಾರ ಹಾಗೂ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡ ಮಾಧ್ಯಮ ಸಂಸ್ಥೆಗಳಿಂದ ರಾಷ್ಟ್ರಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.

ಪ್ರಶಸ್ತಿಯನ್ನು ಒಟ್ಟು ನಾಲ್ಕು ವಿಭಾಗಗಳಲ್ಲಿ ನೀಡಲಾಗುತ್ತಿದ್ದು, ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ (ಟೆಲಿವಿಷನ್), ರೆಡಿಯೋ ಮತ್ತು ಆನ್‍ಲೈನ್ (ಇಂಟರ್‍ನೆಟ್)/ಸೋಷಿಯಲ್ ಮೀಡಿಯಾ ಸಂಸ್ಥೆಗಳು “National Media Award-2020”  ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

      ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಆಸಕ್ತ ಮಾಧ್ಯಮ ಸಂಸ್ಥೆಗಳು ನೇರವಾಗಿ ಭಾರತ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ನವೆಂಬರ್ 20 ಕೊನೆಯ ದಿನವಾಗಿರುತ್ತದೆ.  ಪವನ್ ದಿವಾನ್, ಅಧೀನ ಕಾರ್ಯದರ್ಶಿ (ಕಮ್ಯುನಿಕೇಷನ್) ಭಾರತ ಚುನಾವಣಾ ಆಯೋಗ, ನಿರ್ವಾಚನಾ  ಸದನ್, ಅಶೋಕ ರಸ್ತೆ, ನವದೆಹಲಿ -110001. 

ಹೆಚ್ಚಿನ ಮಾಹಿತಿಗಾಗಿ ಭಾರತ ಚುನಾವಣಾ ಆಯೋಗದ ವೆಬ್‍ಸೈಟ್ ವೀಕ್ಷಿಸಬಹುದಾಗಿದೆ ಅಥವಾ  [email protected] ಇ-ಮೇಲ್ ಮಾಡಬಹುದಾಗಿದೆ. ದೂರವಾಣಿ 011-23052133 ಸಂಖ್ಯೆಯನ್ನು ಸಹ ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.  

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...