ಎಂ.ಕೆ.ನಾಯ್ಕ್‍ರವರಿಗೆ ರಾಷ್ಟ್ರಮಟ್ಟದ ಮುಂಡಕೂರ್ ಮೆಮೋರಿಯಲ್ ಪ್ರಶಸ್ತಿಯ ಗರಿ

Source: so news | Published on 28th January 2020, 12:09 AM | State News | Don't Miss |

 

ಶಿವಮೊಗ್ಗ: ನವದೆಹಲಿಯ ಭಾರತೀಯ ಸಸ್ಯರೋಗಶಾಸ್ತ್ರ ಸೊಸೈಟಿಯು ಜನವರಿ 16 ರಿಂದ 20ರವರೆಗೆ ನವದೆಹಲಿಯಲ್ಲಿ ಏರ್ಪಡಿಸಿದ್ದ 7ನೇ ಅಂತರ್‍ರಾಷ್ಟ್ರೀಯ ಸಸ್ಯರೋಗಶಾಸ್ತ್ರದಲ್ಲಿ ವಿಶ್ವಸಂಸ್ಥೆಯ ಸಮಗ್ರ ಅಭಿವೃದ್ಧಿಯ ಗುರಿ ಎಂಬ ಸಮ್ಮೇಳನದಲ್ಲಿ ಶಿವಮೊಗ್ಗದ ಕೃಷಿ ಮತ್ತುತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ.ಕೆ.ನಾಯ್ಕ್‍ರವರು ಸಸ್ಯ ಬೆಳೆವಣಿಗೆಯಲ್ಲಿ ಸಹಾಯಕವಾದ ಸೂಕ್ಷ್ಮಾಣುಜೀವಿಗಳ, ಸಸ್ಯರೋಗ ಹತೋಟಿ, ಸಸ್ಯರೋಗದ ನಿರೋಧಕತೆ, ಸಂಶೋಧನೆ ಮುಂತಾದ ವಿಷಯಗಳಲ್ಲಿನ ಪರಿಣಿತಿ, ಅಭಿವೃದ್ಧಿ ಹಾಗೂ ವಿಸ್ತರಣೆಯನ್ನು ಪರಿಗಣಿಸಿ `ರಾಷ್ಟ್ರಮಟ್ಟದ ಮುಂಡಕೂರ್ ಮೆಮೋರಿಯಲ್ ಪ್ರಶಸ್ತಿ ನೀಡಿ ಗೌರವಿಸಿದೆ.
ಈ ಪ್ರಶಸ್ತಿಯು ಸಸ್ಯರೋಗ ಶಾಸ್ತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಕೊಡಬಹುದಾದ ಅತ್ಯುನ್ನತ್ತ ಪ್ರಶಸ್ತಿಯಾಗಿದ್ದು, ಡಾ.ನಾಯ್ಕ್ ಅವರು ಈ ಪ್ರಶಸ್ತಿಯನ್ನು ತಮ್ಮ ಶಿಷ್ಯಕೋಟಿ ಮತ್ತು ವಿಜ್ಞಾನಿ ಬಂಧು-ಬಳಗಕ್ಕೆ ಮತ್ತು ವಿಶ್ವವಿದ್ಯಾಲಯಕ್ಕೆ ಸಂದ ಗೌರವ ಎಂದವರು ತಿಳಿಸಿತ್ತಾರೆ. ಈ ಸುಸಂದರ್ಭದಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳು, ವಿಜ್ಞಾನಿಗಳು, ನೌಕರ ಬಂಧುಗಳು ಹಾಗೂ ಕಾರ್ಮಿಕರು ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ.ಕೆ.ನಾಯ್ಕ್‍ರವರಿಗೆ ಅಭಿನಂದಿಸಿದ್ದಾರೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...