ಕಾರವಾರ: ಬಾಲಮಂದಿರ ಪ್ರೌಢಶಾಲೆಯಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನ’ ಆಚರಣೆ

Source: Press release | By I.G. Bhatkali | Published on 28th February 2024, 3:01 PM | Coastal News |

ಕಾರವಾರ: ಕಾರವಾರ ಎಜ್ಯುಕೇಶನ್ ಸೊಸೈಟಿಯ ಬಾಲಮಂದಿರ ಪ್ರೌಢಶಾಲೆಯಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನ’ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ಮಾತನಾಡಿ, “ಪ್ರತಿಯೊಬ್ಬರೂ ವೈಜ್ಞಾನಿಕ ಮನೋಭಾವನೆ ಮತ್ತು ವೈಚಾರಿಕತೆಯನ್ನು ಬೆಳೆಸಿಕೊಳ್ಳಬೇಕು. ಪ್ರಶ್ನೆ ಮಾಡದೇ ಯಾವದೇ ತರ್ಕವನ್ನು ಒಪ್ಪಿಕೊಳ್ಳಬಾರದು. ಸಂವಿಧಾನದ ಮೂಲಭೂತ ಕರ್ತವ್ಯದ ಆಶಯದಂತೆ ಮೌಢ್ಯತೆ ಮತ್ತು ಅಂಧಕಾರವನ್ನು ನಿರ್ಮೂಲನೆ ಮಾಡಿ ಸಮಾಜಕ್ಕೆ ಪೂರಕವಾದ ಬದುಕನ್ನು ರೂಪಿಸಿಕೊಳ್ಳಬೇಕು” ಎಂದು ನುಡಿದರು.

ನಂತರ ವಿದ್ಯಾರ್ಥಿಗಳಿಂದ ‘ಪ್ರತಿಜ್ಞಾವಿಧಿ’ ಬೋಧಿಸಲಾಯಿತು. ಆರಂಭದಲ್ಲಿ ಶಿಕ್ಷಕಿ ಶೇಫಾಲಿ ಕಿಂದಳಕರ ಸ್ವಾಗತ ಕೋರಿದರು. ವಿಜೇತಾ ಹೆರ್ಲೇಕರ ಪ್ರತಿಜ್ಞಾವಿದಿ ಬೋಧಿಸಿದರು. ಅನುರಾಧಾ ಬಾಂದೋಡಕರ ವಂದನಾರ್ಪಣೆ ಸಲ್ಲಿಸಿದರು. ರಾಜಶ್ರೀ ಹರಿಕಂತ್ರ, ರತ್ನಾಕರ ಮಡಿವಾಳ ಮೊದಲಾದ ಶಿಕ್ಷಕ-ಶಿಕ್ಷಕಿಯರು, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read These Next