ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಣೆ

Source: so news | Published on 20th November 2019, 12:05 AM | State News | Don't Miss |

 

ಹಾಸನ: ಜಿಲ್ಲಾಡಳಿತದ ವತಿಯಿಂದ ರಾಷ್ರೀಯ ಐಕ್ಯತಾ ಸಪ್ತಾಹಕ್ಕೆ ಚಾಲನೆ ನೀಡಲಾಗಿದೆ ಜಿಲ್ಲಾಧಿಖಾರಿ ಕಚೇರಿಯಲಿಂದು ನಡೆದ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಂ ರವರು ರಾಷ್ರೀಯ ಐಕ್ಯತಾ ಪ್ರಮಾಣ ವಚನ ಭೋಧಿಸಿದರು.
ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಸಂರಕ್ಷಿಸಲು ಮತ್ತು ಬಲಪಡಿಸಲು ಅರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತೇನೆಂದು ನಾನು ಶ್ರದ್ಧಾಪೂರ್ವಕವಾಗಿ ಪ್ರಮಾಣ ಮಾಡುತ್ತೇನೆ, ಅಲ್ಲದೆ ನಾನು ಎಂದಿಗೂ ಹಿಂಸಾಚಾರದಲ್ಲಿ ತೊಡಗುವುದಿಲ್ಲವೆಂದು ಮತ್ತು ಮತ, ಭಾಷೆ, ಪ್ರದೇಶ ಅಥವಾ ಇತರ ರಾಜಕೀಯ ಅಥವಾ ಆರ್ಥಿಕ ಕುಂದು ಕೊರತೆಗಳ ಬಗೆಗಿನ ಭಿನ್ನಾಭಿಪ್ರಾಯಗಳನ್ನು ಮತ್ತು ವಿವಾದಗಳನ್ನು ಶಾಂತಿಯುತವಾಗಿ ಹಾಗೂ ಸಂವಿಧಾನಾತ್ಮಕ ರೀತಿಯಲ್ಲಿ ಬಗೆಹರಿಸಿಕೊಳ್ಳುವ ದಿಸೆಯಲ್ಲಿ ನನ್ನ ಪ್ರಯತ್ನವನ್ನು ಮುಂದುವರಿಸುತ್ತೆನೆಂದೂ ಪ್ರಮಾಣ ಮಾಡುತ್ತೆನೆ ಎಂದು ಹಾಜರಿದ್ದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಂ ಈ ಸಂದೇಶವನ್ನು ಅರಿತು ಜೀವನದಲ್ಲಿ ಎಲ್ಲರೂ ಅಡವಳಿಸಿಕೊಂಡು ಕಾರ್ಯರೂಪಕ್ಕೆ ತರಬೇಕು ಎಂದರು.

Read These Next

ಕಾರು ಪಲ್ಟಿ : ಪ್ರಯಾಣಿಕರು ಗಾಯ

ಮುಂಡಗೋಡ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿ 6 ಜನರು ಗಾಯಗೊಂಡ ಘಟನೆ ತಾಲೂಕಿನ ...

ವಿದ್ಯೆ ಮತ್ತು ಡಿಗ್ರಿಗಳಿಂದ ಶಾಂತಿ ನೆಮ್ಮದಿ ದೊರೆಯದು-ಬ್ರಹ್ಮಾನಂದಾ ಸರಸ್ವತಿ ಸ್ವಾಮಿಜಿ

ಭಟ್ಕಳ: ವಿದ್ಯೆಯು ಸಂಸ್ಕಾರಯುತ ಮಕ್ಕಳನ್ನು ಸಮಾಜಕ್ಕೆ ಕೊಡುವಂತಾದಾಗ ಮಾತ್ರ ಆ ವಿದ್ಯೆಗೆ ಬೆಲೆ ಬರುತ್ತದೆ. ಆದರೆ ಇಂದಿನ ವಿದ್ಯೆ, ...