ಭಟ್ಕಳ ಅಂಜುಮನ್ ಕಾಲೇಜಿನಲ್ಲಿ ಮತದಾರರ ದಿನಾಚರಣೆ

Source: S O News service | By I.G. Bhatkali | Published on 26th January 2021, 1:05 PM | Coastal News |

ಭಟ್ಕಳ:  ಸ್ಥಳೀಯ ಅಂಜುಮನ್ ಪದವಿ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದಲ್ಲಿ ಇಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲ ಪ್ರೊ. ಮುಸ್ತಾಕ ಕೆ. ಶೇಖ ಅವರು ನಮಗೆ ದೊರೆತ ಮತಾಧಿಕಾರ ಎಂಬ ಆಯುಧದಿಂದ ದೇಶದ ಭವಿಷ್ಯವನ್ನೇ ಬದಲಿಸಬಹುದು ಎಂದರು. ಹದಿನೆಂಟು ವರ್ಷ ತುಂಬಿದ ಎಲ್ಲ ವಿದ್ಯಾರ್ಥಿಗಳು ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಿಕೊಂಡು, ಪ್ರತೀ ಚುನಾವಣೆಯಲ್ಲಿ ತಪ್ಪದೆ ಮತದಾನ ಮಾಡಬೇಕೆಂದರು. ಯುವಸಮುದಾಯ ಮತದಾರರ ಪಟ್ಟಿಗೆ ತಮ್ಮ ಹೆಸರು ನೊಂದಾಯಿಸಿಕೊಳ್ಳಲು ಮತ್ತು ನೊಂದಾಯಿತ ಯುವ ಮತದಾರರು ಚುನಾವಣೆಯಲ್ಲಿ ಮತದಾನ ಮಾಡಲು ನಿರಾಸಕ್ತಿ ತೋರಿದರೆ ಬಲಿಷ್ಠ ಭಾರತವನ್ನು ನಿರ್ಮಿಸುವುದು ಕಷ್ಟವಾಗುತ್ತದೆ ಎಂದು ಹೇಳಿದರು.
ವಾಣಿಜ್ಯ ಶಾಸ್ತ್ರದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಎ. ಎಂ. ಮುಲ್ಲಾ ಇಂದಿನ ದಿನಮಾನಗಳಲ್ಲಿ ಓಟು ನೋಟಿಗೆ ಮಾರಾಟವಾಗುತ್ತಿರುವುದರಿಂದ ಭ್ರಷ್ಟರೇ ಅಧಿಕಾರದ ಚುಕ್ಕಾಣಿ ಹಿಡಿದು ದೇಶ ಭ್ರಷ್ಟಾಚಾರದ ಕೂಪವಾಗುತ್ತಲಿದೆ. ಹಣಬಲ ಮತ್ತು ಜಾತಿಬಲದ ಎದುರು ಅರ್ಹರು ಚುನಾಯಿತರಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಒಂದು ದುಷ್ಟ ವ್ಯವಸ್ಥೆಯನ್ನು ಯುವ ಮತದಾರರು ಬದಲಿಸಬಲ್ಲರು ಎಂದು ಅವರು ತಿಳಿಸಿದರು. 

ಆಂಗ್ಲ ವಿಭಾಗದ ಮುಖ್ಯಸ್ಥರಾದ ಪ್ರೊ. ಎಂ. ಎಂ. ಜಮಾದಾರ್ ಪ್ರಜಾಪ್ರಭುತ್ವ ಯಶಸ್ವಿಯಾಗುವುದು ಮತದಾರರ ಕೈಯಲ್ಲೇ ಇದೆ. ಚುನಾವಣೆಗಳಲ್ಲಿ ಮತ ಚಲಾಯಿಸುವಾಗ ಜಾತಿ ಧರ್ಮ ಭಾಷೆ ಇತ್ಯಾದಿಗಳ ಪ್ರಚೋದನೆಗಳಿಗೆ ಒಳಗಾಗದೆ ದಕ್ಷ ವ್ಯಕ್ತಿಗಳನ್ನು ಆರಿಸಿ ಕಳಿಸಬೇಕೆಂದು ಸಲೆಹೆ ನೀಡಿದರು. ಕಾಲೇಜು ವಿದ್ಯಾರ್ಥಿಗಳು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಿಕೊಂಡು ತಾವು ಮತದಾನ ಮಾಡುವುದರ ಜೊತೆಗೆ, ತಮ್ಮ ಸುತ್ತಮುತ್ತಲಿನ ಇತರರಿಗೂ ಮತದಾನದ ಮಹತ್ವವನ್ನು ತಿಳಿಸಿಕೊಡಬೇಕೆಂದು ಹೇಳಿದರು.

ಆರಂಭದಲ್ಲಿ ಎನ್ನೆಸ್ಸೆಸ್ ಅಧಿಕಾರಿ ಪ್ರೊ. ಆರ್. ಎಸ್. ನಾಯಕ ಪ್ರಾಸ್ತಾವಿಕ ನುಡಿಗಳನ್ನಾಡುತ್ತ ಮತದಾರರ ದಿನಾಚರಣೆಯ ಮಹತ್ವವನ್ನು ಮನವರಿಕೆ ಮಾಡಿಕೊಡುವುದರ ಜೊತೆಗೆ, ವಿಶ್ವದ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತ ಅತ್ಯಂತ ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವಾಗಬೇಕೆಂದರೆ ಎಲ್ಲರೂ ಯಾವುದೇ ಆಮಿಷಕ್ಕೆ ಒಳಗಾಗದೆ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕೆಂದು ಕರೆನೀಡಿದರು. ಪ್ರೊ. ಪರಶುರಾಮ ಉಪಸ್ಥಿತರಿದ್ದ ಎಲ್ಲರಿಗೂ ಮತದಾನದ ಪ್ರತಿಜ್ಞಾವಿಧಿ ಬೋಧಿಸದರು. ಕುಮಾರಿ ಪಮಿನಾ ಫಾತಿಮಾ ಅಚ್ಚುಕಟ್ಟಾಗಿ ನಿರ್ವಹಿಸಿದ ಈ ಕಾರ್ಯಕ್ರಮದಲ್ಲಿ ಕುಮಾರಿ ನಯನಾ ನಾಯ್ಕ ಎಲ್ಲರನ್ನು ಸ್ವಾಗತಿಸಿದರೆ, ಕುಮಾರ ರೋಹಿತ ನಾಯ್ಕ ವಂದಿಸಿದನು. ಪ್ರೊ. ಎಸ್. ಎ. ಇಂಡಿಕರ್, ಪ್ರೊ. ಬಿ. ಎಚ್. ನದಾಫ್, ಪ್ರೊ. ಮೊಹಮ್ಮದ್ ಹಿಬ್ಬಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...