25 ರಂದು ರಾಷ್ರ್ತೀಯ ಮತದಾನ : ಜಾಗೃತಿ ಜಾಥಾ

Source: S.O. News Service | Published on 21st January 2020, 7:18 PM | State News | Don't Miss |

ಹಾಸನ:ರಾಷ್ರ್ತೀಯ ಮತದಾರರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ದತೆ ನಡೆಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ರಾಷ್ರ್ತಿಯ ಮತದಾರ ದಿನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮದ ಅಂಗವಾಗಿ ಜ.25 ಮತದಾನದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ವಿಶೇಷ ಜಾಥಾ ಆಯೋಜಿಸುವಂತೆ ಸೂಚನೆ ನೀಡಿದರು.
ಬೆಳಿಗ್ಗೆ 9.30ಕ್ಕೆ ಜಾಥಾ ಹೊರಡಲಿದ್ದು ಕಡ್ಡಾಯ ಮತದಾನಕ್ಕೆ ಸಂಬಂಧಿಸಿದ ಘೋಷಣಾ ಫಲಕಗಳೊಂದಿಗೆ ಮೆರವಣಿಗೆ ಕಲಾಭವನಕ್ಕೆ ಸಾಗಲಿದ್ದು ನಂತರ 10.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು.
ಪ್ರಥಮ ಭಾರಿಗೆ ಮತದಾರರ ಪಟ್ಟಿಗೆ ಸೇರ್ಪಡೆಗೊಂಡ ನೂತನ ಮತದಾರರಿಗೆ ಭಾವಚಿತ್ರವಿರುವ ಹೊಸ ಗುರುತಿನ ಚೀಟಿಯನ್ನು ವಿತರಣೆ ಮಾಡುವುದು, ವಿಕಲಾಂಗ ಚೇತನ ಮತದಾರರಿಗೆ ಬ್ರೈಲ್ ಎಪಿಕ್ ಕಾರ್ಡ್‍ಗಳನ್ನು ಹಾಗೂ ಶತಾಯುಶಿ ಮತದಾರರನ್ನು ಗೌರವಿಸುವ ಸಂಬಂಧ 100 ವರ್ಷ ತುಂಬಿದ ಮತದಾರರನ್ನು ಕಾರ್ಯಕ್ರಮಕ್ಕೆ ಕೆರೆತರಬೇಕು ಎಂದರು.
ಪ್ರತಿ ವರ್ಷದಂತೆ ಜ.25 ರಂದು ಜಿಲ್ಲೆಯ ಎಲ್ಲಾ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಲ್ಲಿ, ಗ್ರಾಮ ಪಂಚಾಯಿತಿಗಳಲ್ಲಿ, ತಾಲ್ಲೂಕು ಮಟ್ಟದಲ್ಲಿ ಹಾಗೂ ವಿಶೇಷóವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಾಗೂ ಎಲ್ಲಾ ಕಚೇರಿಗಳಲ್ಲಿ ಜ.24 ರಂದು ಮತದಾನ ಪ್ರತಿಜ್ಞಾವಿಧಿ ಸ್ವೀಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.
ಚುನಾವಣೆಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಶಾಲಾ-ಕಾಲೇಜು, ತಾಲ್ಲೂಕು ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಲಾದ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಗೆ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕರೆತರುವುದು, ವಿಶೇಷವಾಗಿ ಚರ್ಚಾ, ಆಶುಭಾಷಣ ಸ್ಪರ್ಧೆಯಲ್ಲಿ ವಿಜೇತರಾದವರಿಂದ ಕಾರ್ಯಕ್ರಮದಲ್ಲಿ 5 ನಿಮಿಷಗಳ ಅನಿಸಿಕೆ ವ್ಯಕ್ತಪಡಿಸಲು ಅವಕಾಶಕಲ್ಪಿಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಕವಿತ ರಾಜರಾಂ, ಉಪ ವಿಭಾಗಾಧಿಕಾರಿಗಳಾದ ಡಾ|| ನವೀನ್ ಭಟ್, ಸ್ವೀಪಂ ಸಮಿತಿಯ ಸದಸ್ಯ ಕಾರ್ಯದರ್ಶಿ ವಿನೋದ್‍ಚಂದ್ರ, ತಹಶೀಲ್ದಾರ್ ಶಿವಶಂಕ್ರಪ್ಪ, ಚುನಾವಣಾ ತಹಶೀಲ್ದಾರ್ ಪದ್ಮನಾಭಶಾಸ್ತ್ರಿ, ಕಲಾ ಕಾಲೇಜಿನ ಪ್ರಾಶುಪಾಲರಾದ ಮತ್ತು ಪದವಿ ಕಾಲೇಜಿನ ಪ್ರಾಂಶುಪಾಲರಾದ ರಾಜಪ್ಪ ಮತ್ತಿತರರು ಹಾಜರಿದ್ದರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...