ಎನ್.ಡಿ.ಎ ವಿರುದ್ಧ ಇಂಡಿಯಾ; ಬಿಜೆಪಿ ವಿರುದ್ಧ ಒಂದಾದ ದೇಶದ ೨೪ ರಾಜಕೀಯ ಪಕ್ಷಗಳು

Source: SOnews | By Staff Correspondent | Published on 18th July 2023, 5:38 PM | Coastal News | State News | National News |

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ದೇಶದ ವಿಪಕ್ಷಗಳ ಸಭೆಯಲ್ಲಿ ೨೪ ರಾಜಕೀಯ ಪಕ್ಷಗಳು ಭಾಗವಹಿಸಿದ್ದು ಮಂಗಳವಾರ ಸಭೆ ಮುಕ್ತಾಯಗೊಂಡಿತು. ೨೦೨೪ರಲ್ಲಿ ನಡೆಯುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳನ್ನು ಮಣಿಸಲು ಮೈತ್ರಿಕೂಟವೊಂದು ರಚನೆಯಾಗಿದ್ದು ವಿಪಕ್ಷಗಳ ಮೈತ್ರಿಕೂಟಕ್ಕೆ INDIA (Indian National Democratic Inclusive Alliance) ಎಂದು ಹೆಸರಿಡಲಾಗಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರು ಘೋಷಿಸಿದ್ದಾರೆ.  

ಅವರು ಸಿಬಿಐ, ಈಡಿ ಸೇರಿದಂತೆ ಎಲ್ಲಾ ತನಿಖಾ ಸಂಸ್ಥೆಗಳನ್ನು ವಿಪಕ್ಷ ನಾಯಕರ ವಿರುದ್ಧ ಬಳಸುತ್ತಿದ್ದಾರೆ. ನಮಗೆ ದೇಶ ಮುಖ್ಯ, ನಮ್ಮಲ್ಲಿ ಪ್ರಾದೇಶಿಕವಾಗಿ ಹಲವು ರಾಜಕೀಯ ವಿರೋಧ ಇರಬಹುದು, ಆದರೆ, ದೇಶದ ಹಿತಾಸಕ್ತಿಗಾಗಿ ನಾವು ಒಂದಾಗುತ್ತಿದ್ದೇವೆ ಎಂದು ಹೇಳಿದ್ದಾರೆ.  ದೇಶದ ಜನರ ಹಿತಾಸಕ್ತಿ, ಪ್ರಜಾಪ್ರಭುತ್ವ ರಕ್ಷಣೆಗೆ ಇದು ಪ್ರಮುಖ ಸಭೆ, ನಾವು ನಮ್ಮೊಳಗೆ ವೈರುದ್ಧಗಳಿದ್ದರೂ ಜನರ ಒಂದೇ ದನಿಯಾಗಿ ನಾವು ಹೊರ ಹೊಮ್ಮುತ್ತೇವೆ ಎಂದು ಖರ್ಗೆ ಹೇಳಿದ್ದಾರೆ. ನಮ್ಮ ಮೈತ್ರಿಕೂಟದ ಹೆಸರಿನಲ್ಲಿ ಆಳವಾದ ಅರ್ಥವಿದೆ. ಇದು ದೇಶದ ಒಳಿತಿಗಾಗಿ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...