ಎನ್‌ಡಿಎ ವಿರುದ್ಧ ಇಂಡಿಯಾ; ಒಗ್ಗಟ್ಟು ಪ್ರದರ್ಶಿಸಿದ ಪ್ರತಿಪಕ್ಷಗಳು; ಬೆಂಗಳೂರಿನಲ್ಲಿ ವಿಪಕ್ಷ ಸಮಾವೇಶ ಸಮಾರೋಪ

Source: Vb | By I.G. Bhatkali | Published on 19th July 2023, 1:34 PM | State News | National News |

ಬೆಂಗಳೂರು: ಮುಂದಿನ ವರ್ಷದಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾರಥ್ಯದ ಬಿಜೆಪಿ ಹಾಗೂ ಎನ್‌ಡಿಎ ಮೈತ್ರಿಕೂಟದ ವಿರುದ್ಧ ಹೋರಾಟ ನಡೆಸಲು ಸಜ್ಜಾಗಿರುವ ವಿರೋಧ ಪಕ್ಷಗಳು ತಮ್ಮ ಒಕ್ಕೂಟಕ್ಕೆ ಇಂಡಿಯಾ' ಎಂದು ಹೆಸರಿಟ್ಟಿದ್ದು, ಒಂದೇ ವೇದಿಕೆಯಡಿ 26 ಪಕ್ಷಗಳ ನಾಯಕರನ್ನು ಒಳಗೊಂಡ ಹೊಸ ಸಮಿತಿಯೊಂದನ್ನು ರಚಿಸಿವೆ.

ಎರಡು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ನಡೆದ 'ಒಂದಾಗಿದ್ದೇವೆ ನಾವು' ರಾಷ್ಟ್ರೀಯ ವಿಪಕ್ಷಗಳ ಸಭೆಯಲ್ಲಿ 26 ಪಕ್ಷಗಳ ನಾಯಕರು ಭಾಗವಹಿಸಿ, ಒಮ್ಮತದಿಂದ ಅನೇಕ ನಿರ್ಣಯಗಳನ್ನು ಕೈಗೊಂಡಿದ್ದು, ಪ್ರಮುಖವಾಗಿ ಈ ಹಿಂದಿನ ಯುಪಿಎ ಬದಲಾಗಿ 'I-N-D-I-A' (Indian National Developmental Inclusive Alliance) ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿಗೆ ಕರೆ ನೀಡಲಾಗಿದೆ.

ಈವರೆಗೂ ಕಾಂಗ್ರೆಸ್ ಪಕ್ಷವು UPA ಮೈತ್ರಿ ಕೂಟದ ಸಾರಥ್ಯ ವಹಿಸಿತ್ತು. United Progressive Alliance ಎಂಬುದು UPA ವಿಕೃತ ರೂಪ. ಇದೀಗ ಈ ಒಕ್ಕೂಟದ ಹೆಸರು INDIA ಎಂದು ಬದಲಾಗಿದೆ. ಯುಪಿಎ ಮೈತ್ರಿ ಕೂಟದಲ್ಲಿ ಇದ್ದ ಅಂಗ ಪಕ್ಷಗಳಿಗಿಂತ ಇಂಡಿಯಾ ಮೈತ್ರಿ ಕೂಟದ ಅಂಗ ಪಕ್ಷಗಳ ಸಂಖ್ಯೆ ಹೆಚ್ಚಾಗಿರುವ ಜೊತೆಯಲ್ಲೇ ಮುಂದಿನ ದಿನಗಳಲ್ಲಿ ಈ ಮೈತ್ರಿ ಕೂಟ ಪ್ರಬಲವೂ ಆಗಲಿದೆ ಎಂಬ ನಿರೀಕ್ಷೆ ವಿಪಕ್ಷ ನಾಯಕರಲ್ಲಿದೆ.

ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, 'ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಉಳಿಸಲು, ಜನರ ಹಿತ ಕಾಪಾಡಲು ಇದೊಂದು ಮಹತ್ವದ ಸಭೆಯಾಗಿತ್ತು. ಈ ಹಿಂದೆ ನಾವು ಯುಪಿಎ ಎಂದು ಮೈತ್ರಿ ಮಾಡಿಕೊಳ್ಳಲಾಗಿತ್ತು. ಈಗ ಈ ಮೈತ್ರಿಗೆ ಇಂಡಿಯಾ ಎಂದು ಹೆಸರಿಡಲಾಗಿದೆ. ಜತೆಗೆ, ಶೀಘ್ರದಲ್ಲೇ 11 ಸದಸ್ಯರ ಸಮನ್ವಯ ಸಮಿತಿ ರಚಿಸಲಾಗುವುದು. ಈ ಸಂಬಂಧ ಸಭೆಯ ದಿನಾಂಕ ಪ್ರಕಟಿಸಲಾಗುವುದು' ಎಂದು ಹೇಳಿದರು.

ಇನ್ನೂ, ಪ್ರಚಾರ ನಿರ್ವಹಣೆ ಹಾಗೂ ಇತರ ಸಮಿತಿಗಳ ನಿರ್ವಹಣೆಗೆ ಕಾರ್ಯದರ್ಶಿ ನೇಮಕ ಮಾಡಲಾಗುವುದು. ಇದನ್ನು ದಿಲ್ಲಿಯಲ್ಲಿ ಸ್ಥಾಪಿಸಲಾಗುವುದು. ಇಂದಿನ ಸಭೆಯಲ್ಲಿ ಅತ್ಯುತ್ತಮ ಸಲಹೆ ನೀಡಲಾಗಿದೆ ಎಂದ ಅವರು, ಮೊದಲ ಸಭೆ ಪಾಟ್ನಾದಲ್ಲಿ 15 ಪಕ್ಷಗಳು ಸೇರಿದ್ದು, ಇಂದಿನ ಸಭೆಯಲ್ಲಿ 26 ಪಕ್ಷಗಳು ಸೇರಿದ್ದವು. ನಮ್ಮ ಸಭೆ ಬಳಿಕ ಪ್ರಧಾನಿ ಮೋದಿ ಅವರು ಎನ್‌ಡಿಎ ಮೈತ್ರಿಕೂಟದ ಸಭೆ ಮಾಡಿದ್ದು, 30 ಪಕ್ಷಗಳ ಸಭೆ ಕರೆದಿದ್ದಾರೆ. ಅಲ್ಲದೆ, ಇಷ್ಟು ದಿನ ಬಿಜೆಪಿಯವರು ತಮ್ಮ ಮೈತ್ರಿ ಪಕ್ಷಗಳನ್ನು ಲೆಕ್ಕಕ್ಕೆ ತೆಗೆದುಕೊಂಡಿರಲಿಲ್ಲ. ಈಗ ವಿರೋಧ ಪಕ್ಷಗಳ ಒಗ್ಗಟ್ಟು ನೋಡಿ ಹೆದರಿದ್ದಾರೆ' ಎಂದು ಟೀಕಿಸಿದರು.

ಇಂಡಿಯಾ ವಿರುದ್ಧ ಯಾರೇ ನಿಂತರೂ ಗೆಲುವು ನಮ್ಮದು

'ಯಾರೇ ಇಂಡಿಯಾ ವಿರುದ್ಧ ನಿಂತರೂ ಗೆಲುವು ಯಾರಿಗೆ ಸಿಗುತ್ತದೆ ಎಂಬುದು ಎಲ್ಲರಿಗೂ ಗೊತ್ತಿದೆ. ಮುಂದಿನ ಸಭೆ ಮಹಾರಾಷ್ಟ್ರದಲ್ಲಿ ನಡೆಯಲಿದ್ದು, ಕಾರ್ಯ ಯೋಜನೆ ಸಿದ್ಧಪಡಿಸಿ ನಾವು ಒಂದಾಗಿ ನಮ್ಮ ವಿಚಾರಧಾರೆಗಳನ್ನು ಜನರಿಗೆ ತಿಳಿಸಬೇಕಿದೆ. ಬಿಜೆಪಿಯ ಸಿದ್ಧಾಂತಗಳು ಭಾರತದ ಪರಿಕಲ್ಪ ನೆ ಮೇಲೆ ದಾಳಿ ಮಾಡುತ್ತಿದೆ. ನಿರುದ್ಯೋಗ, ಬೆಲೆ ಏರಿಕೆ ಸಮಸ್ಯೆಗಳು ಹೆಚ್ಚುತ್ತಿವೆ. ಇದು ರಾಜಕೀಯ ಪಕ್ಷಗಳ ಹೋರಾಟವಲ್ಲ. ಇದು ಇಂಡಿಯಾದ ಪರಿಕಲ್ಪ ನೆ ರಕ್ಷಣೆಯ ಹೋರಾಟವಾಗಿದ್ದು, ನಾವು ಪ್ರಜಾಪ್ರಭುತ್ವ, ಸಂವಿಧಾನ, ಜನರ ಧ್ವನಿಯ ರಕ್ಷಣೆಗೆ ಹೋರಾಟ ಮಾಡುತ್ತಿದ್ದು, ಈ ಕಾರಣಕ್ಕೆ ನಾವು ನಮ್ಮ ಮೈತ್ರಿಯನ್ನು ಇಂಡಿಯಾ ಎಂದು ತೀರ್ಮಾನಿಸಿದ್ದೇವೆ.

-ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕ

ಆಕಾಶ, ಪಾತಾಳವೂ ಬಿಟ್ಟಿಲ್ಲ ಮೋದಿ

'ಪ್ರಧಾನಿ ಮೋದಿ ಬಳಿ ದೇಶಕ್ಕಾಗಿ ಕೆಲಸ ಮಾಡಲು ಅವಕಾಶಗಳಿದ್ದವು. ಆದರೆ, ಅವರು ಯಾವುದೇ ಕ್ಷೇತ್ರದಲ್ಲೂ ಪ್ರಗತಿ ಸಾಧಿಸಿಲ್ಲ. ಎಲ್ಲ ಕ್ಷೇತ್ರಗಳನ್ನು ಹಾಳು ಮಾಡಿದ್ದಾರೆ. ರೈಲ್ವೆ ಆರ್ಥಿಕತೆ, ವಿಮಾನ ನಿಲ್ದಾಣ, ಭೂಮಿ, ಆಕಾಶ, ಪಾತಾಳವನ್ನೂ ಮಾರಾಟ ಮಾಡಿದ್ದಾರೆ. ಹೊಸ ಭಾರತದ ನಿರ್ಮಾಣ, ಸುಖ, ಶಾಂತಿ, ಸೌಹಾರ್ದತೆಯ ಭಾರತವನ್ನು ಸ್ಥಾಪಿಸಲು ನಾವು ಇಲ್ಲಿ ಸೇರಿದ್ದೇವೆ' -ಅರವಿಂದ ಕೇಜಿವಾಲ್, ದಿಲ್ಲಿ ಮುಖ್ಯಮಂತ್ರಿ

'ಸಭೆಗೆ ಸೇರಿರುವ ನಾಯಕರು ಯಾವುದೇ ಅಧಿಕಾರದ ಆಸೆಗೆ ಸೇರಿಲ್ಲ. ದೇಶದ ಜನರ ಸಮಸ್ಯೆಗೆ ಪರಿಹಾರ ನೀಡಿ, ದೇಶದ ಹಿತಕಾಯಲು ಹೋರಾಟ ಮಾಡುವ ಉದ್ದೇಶದೊಂದಿಗೆ ಸೇರಿವೆ. ನಾವು ದೇಶದ ಜನರ ಸಮಸ್ಯೆಗಳನ್ನು ಒಂದೊಂದಾಗಿ ತೆಗೆದುಕೊಂಡು ಎಲ್ಲಾ ರಾಜ್ಯಗಳಲ್ಲಿ ಜನರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತೇವೆ. ದೇಶದ ಬಹುತೇಕ ಮಾಧ್ಯಮಗಳು ಪ್ರಧಾನಿ ಮೋದಿ ಅವರ ನಿಯಂತ್ರಣದಲ್ಲಿವೆ. ಕೆಲವು ಮಾಧ್ಯಮಗಳು ಅವರ ನಿರ್ದೇಶನಗಳಿಲ್ಲದೆ ಕೆಲಸ ಮಾಡುವುದಿಲ್ಲ. ನನ್ನ ಇಷ್ಟು ವರ್ಷಗಳ ರಾಜಕೀಯ ಜೀವನದಲ್ಲಿ ವಿರೋಧ ಪಕ್ಷಗಳು ಹಾಗೂ ನಾಯಕರ ವಿರುದ್ಧ ಮಾಧ್ಯಮಗಳು ಕೆಲಸ ಮಾಡಿರುವುದು ನೋಡಿಲ್ಲ' ಎಂದೂ ಅವರು ಬೇಸರ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತನಾಡಿ, 'ನಮ್ಮ ಹೋರಾಟ ಬಿಜೆಪಿ ವಿಚಾರಧಾರೆ, ಅವರ ಚಿಂತನೆ ವಿರುದ್ದ. ಅವರು ದೇಶದ ಮೇಲೆ ಆಕ್ರಮಣ ಮಾಡಿ, ನಿರುದ್ಯೋಗ ಹರಡುತ್ತಿದ್ದು, ದೇಶದ ಸಂಪೂರ್ಣ ಸಂಪತ್ತು ಕೆಲವು ಉದ್ಯಮಿಗಳ ವಶಕ್ಕೆ ಸೇರುತ್ತಿದೆ. ಹೀಗಾಗಿ, ಇದು ಬಿಜೆಪಿ ಹಾಗೂ ವಿರೋಧ ಪಕ್ಷಗಳ ನಡುವಣ ಹೋರಾಟ ವಲ್ಲ. ಇದು ದೇಶದ ಧ್ವನಿಯ ಪರವಾದ ಹೋರಾಟ. ಈ ಕಾರಣಕ್ಕೆ ಈ ಮೈತ್ರಿಯನ್ನು ಇಂಡಿಯಾ ಎಂದು ಹೆಸರಿಡಲಾಗಿದೆ' ಎಂದರು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿ, 'ಯುವಕರು, ರೈತರು, ಉತ್ತಮ ಆರ್ಥಿಕತೆ, ವಿದ್ಯಾರ್ಥಿಗಳು, ದಲಿತರು, ದೇಶದ ಪರವಾಗಿ ನಾವು ಇದ್ದೇವೆ. ನಮ್ಮ ಸವಾಲುಗಳು, ಹೋರಾಟ, ಪ್ರಚಾರ ಎಲ್ಲವನ್ನು ಇಂಡಿಯಾ ಅಡಿಯಲ್ಲಿ ಮಾಡಲಾಗುವುದು. ನಿಮಗೆ ಸಾಧ್ಯವಾದರೆ ನಮ್ಮನ್ನು ತಡೆಯಿರಿ. ವಿಪತ್ತಿನಿಂದ ಭಾರತವನ್ನು ರಕ್ಷಣೆ ಮಾಡಿ, ಭಾರತೀಯರನ್ನು ರಕ್ಷಿಸಿ ಎಂದ ಅವರು, ಬಿಜೆಪಿ ದೇಶವನ್ನು ಮಾರುವುದರಲ್ಲಿ, ಲೋಕತಂತ್ರ ಖರೀದಿಸುವಲ್ಲಿ ಮಗ್ನವಾಗಿದೆ. ಇದೇ ಕಾರಣಕ್ಕೆ ಯಾವುದೇ ಸಂಸ್ಥೆಗಳಿಗೆ ಸ್ವತಂತ್ರವಾಗಿ ಕೆಲಸ ಮಾಡಲು ಬಿಡುತ್ತಿಲ್ಲ. ಯಾವುದೇ ವಿರೋಧ ಪಕ್ಷಗಳ ನಾಯಕರು ಧ್ವನಿ ಎತ್ತಿದರೆ ಅವರ ವಿರುದ್ಧ ಐಟಿ, ಈ.ಡಿ. ದಾಳಿ ಮಾಡಲಾಗುತ್ತಿದೆ' ಎಂದು ಅವರು ಆಕ್ರೋಶ ಹೊರಹಾಕಿದರು.

ಲೋಕಸಭೆ ಸೀಟು ಹಂಚಿಕೆ ದೊಡ್ಡ ವಿಚಾರವಲ್ಲ: ಮಲ್ಲಿಕಾರ್ಜುನ ಖರ್ಗೆ

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ವಿಪಕ್ಷಗಳ ಜತೆ ಸೇರಿ ಕ್ಷೇತ್ರವಾರು ಸೀಟು ಹಂಚಿಕೆ ಮಾಡುವುದು ಅಷ್ಟೊಂದು ದೊಡ್ಡ ವಿಚಾರವಲ್ಲ ಎಂದು ಎಐಸಿಸಿ ಅಧ್ಯಕ್ಷಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಮಂಗಳವಾರ ಖಾಸಗಿ ಹೋಟೆಲ್‌ನಲ್ಲಿ ಒಂದಾಗಿದ್ದೇವೆ ನಾವು' ರಾಷ್ಟ್ರೀಯ ವಿಪಕ್ಷಗಳ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸೀಟು ಹಂಚಿಕೆ ವಿಚಾರದೊಡ್ಡ ವಿಚಾರವಲ್ಲ. ನಮ್ಮ ಸಮನ್ವಯ ಸಮಿತಿ ತೀರ್ಮಾನ ಮಾಡಲಿದೆ. ಎಲ್ಲ ನಾಯಕರು, ಸಮಿತಿ ಸೇರಿ ತೀರ್ಮಾನ ಮಾಡಲಿದೆ ಎಂದು ತಿಳಿಸಿದರು.

ವ್ಯಕ್ತಿಯ ವಿರುದ್ಧವಲ್ಲ, ನೀತಿಯ ವಿರುದ್ಧ: ಉದ್ಧವ್ ಠಾಕ್ರೆ

'ಪ್ರತಿಪಕ್ಷಗಳ ಗಮನ ಕುಟುಂಬವೇ ಹೊರತು ರಾಷ್ಟ್ರವಲ್ಲ ಎಂದಿರುವ ಪ್ರಧಾನಿ ಮೋದಿ ಅವರ ಹೇಳಿಕೆಗೆ ತಿರುಗೇಟು ನೀಡಿದ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, 'ನಮಗೆ ದೇಶವೇ ಕುಟುಂಬ. ಹೀಗಾಗಿಯೇ ನಾವು ರಕ್ಷಣೆಗೆ ಮುಂದಾಗಿದ್ದೇವೆ. ನಮ್ಮ ಪರಿವಾರದಂತಿರುವ ದೇಶವನ್ನು ರಕ್ಷಿಸಲು. ನಮ್ಮ ಹೋರಾಟ ಒಂದು ಪಕ್ಷ ಅಥವಾ ಒಬ್ಬ ವ್ಯಕ್ತಿಯ ವಿರುದ್ಧ ಅಲ್ಲ. ನಮ್ಮ ಹೋರಾಟ ನೀತಿಯ ವಿರುದ್ಧ ಸ್ವಾತಂತ್ರ್ಯ ಹೋರಾಟದ ಮಾದರಿಯಲ್ಲಿ ಇಂದು ಹೋರಾಟ ಮಾಡಲಾಗುವುದು' ಎಂದು ಹೇಳಿದರು.

ಕೇಂದ್ರ ಸರಕಾರ ಸ್ಥಳೀಯ ಪಕ್ಷಗಳನ್ನು ಇಬ್ಬಾಗ ಮಾಡುತ್ತಿದ್ದು, ಈ ಸಮಯದಲ್ಲಿ ನೀವು ಎಲ್ಲ ಪ್ರಾದೇಶಿಕ ಪಕ್ಷಗಳನ್ನು ಹೇಗೆ ಒಗ್ಗಟ್ಟಾಗಿ ಕೊಂಡೊಯ್ಯುತ್ತೀರಿ ಎಂಬ ಪ್ರಶ್ನೆಗೆ, ಎನ್‌ಸಿಪಿ ನಾಯಕ ಶರದ್ ಪವಾರ್, ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಸೇರಿದಂತೆ ಪ್ರಾದೇಶಿಕ ಪಕ್ಷಗಳ ನಾಯಕರು ಇಲ್ಲಿದ್ದಾರೆ. ಶಾಸಕರು ಪಕ್ಷ ಬಿಟ್ಟು ಹೋಗಿರಬಹುದು. ಆದರೆ ಜನ ಈ ಪ್ರಮುಖ ನಾಯಕರ ಬೆನ್ನಿಗೆ ನಿಲ್ಲಲಿದ್ದಾರೆ. ನಾವು ಒಟ್ಟಾಗಿ ಇರುತ್ತೇವೆ. ಆ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಉತ್ತರಿಸಿದರು.

ಇಂಡಿಯಾ ಅಧ್ಯಕ್ಷ ಯಾರು?

2004ರಿಂದ 2014ರವರೆಗೆ ಸೋನಿಯಾ ಗಾಂಧಿ ಅವರು ಯುಪಿಎ ಮುಖ್ಯವಾಗಿದ್ದರೂ ಅವರು ಇದೀಗ ವಸ ಒಕ್ಕೂಟದ ಅಧ್ಯಕ್ಷೆ ಆಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಈ ಒಕ್ಕೂಟದ ಸಂಚಾಲಕರಾಗುವ ಸಾಧ್ಯತೆಗಳಿವೆ. ಮುಂದಿನ ಸಭೆಯಲ್ಲಿ ನಿರ್ಧಾರ ಪ್ರಕಟಗೊಳ್ಳುವ ಸಾಧ್ಯತೆ ಇದೆ.

ಇಂಡಿಯಾ'ದ ಅಂತಿಮ ಸಂಕಲ್ಪ: ಎರಡು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದ ರಾಷ್ಟ್ರೀಯ ವಿಪಕ್ಷಗಳು (ಇಂಡಿಯಾ) ಸಾಮೂಹಿಕ ಸಂಕಲ್ಪ ಅಂಶಗಳನ್ನು ಪ್ರಕಟಿಸಿವೆ.

ಸಂವಿಧಾನದ ಆಧಾರ ಸ್ತಂಭಗಳು ದುರ್ಬಲ: ನಮ್ಮ ಗಣರಾಜ್ಯದ ಚಾರಿತ್ರ್ಯದ ಮೇಲೆ ಬಿಜೆಪಿಯವರು ವ್ಯವಸ್ಥಿತ ರೀತಿಯಲ್ಲಿ ತೀವ್ರ ಪ್ರಮಾಣದಲ್ಲಿ ಹಲ್ಲೆ ನಡೆಸುತ್ತಿದ್ದಾರೆ. ಭಾರತೀಯ ಸಂವಿಧಾನದ ಆಧಾರ ಸ್ತಂಭಗಳಾದ-ಜಾತ್ಯತೀತ 
ಪ್ರಜಾಪ್ರಭುತ್ವ, ಆರ್ಥಿಕ ಸಾರ್ವ ಭೌಮತ್ವ, ಸಾಮಾಜಿಕ ನ್ಯಾಯ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಕ್ರಮಬದ್ಧವಾಗಿ ಮತ್ತು ಭಯಂಕರವಾಗಿ ದುರ್ಬಲಗೊಳಿಸಲಾಗುತ್ತಿದೆ.

ಮೀರಿದ ಸಾಂವಿಧಾನಿಕ ಮಾನದಂಡಗಳು: ಸಂವಿಧಾನದ ಮೇಲೆ ಮತ್ತು 'ಪ್ರಜಾಸತ್ತಾತ್ಮಕವಾಗಿ ಚುನಾಯಿತ ರಾಜ್ಯ ಸರಕಾರಗಳ ಸಾಂವಿಧಾನಿಕ ಹಕ್ಕುಗಳ ಮೇಲಿನ ನಿರಂತರ ದಾಳಿಯನ್ನು ಎದುರಿಸಲು ಮತ್ತು ತಡೆಯಲು ನಿರ್ಧರಿಸಲಾಗಿದೆ. ಬಿಜೆಪಿಯೇ ತರ ಆಡಳಿತ ವಿರುವ ರಾಜ್ಯಗಳಲ್ಲಿ ರಾಜ್ಯ ಪಾಲರು ಮತ್ತು ಎಲ್‌ಜಿಗಳ ಪಾತ್ರವು ಎಲ್ಲ ಸಾಂವಿಧಾನಿಕ ಮಾನದಂಡಗಳನ್ನು ಮೀರಿದೆ. ರಾಜಕೀಯ ಪ್ರತಿಸ್ಪರ್ಧಿಗಳ ವಿರುದ್ಧ ಬಿಜೆಪಿ ಸರಕಾರ ಸಂಸ್ಥೆಗಳ ದುರುಪಯೋಗ ನಮ್ಮ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದೆ.

ಮಿತಿ ಮೀರಿದ ನಿರುದ್ಯೋಗ, ಆರ್ಥಿಕ ಬಿಕ್ಕಟ್ಟು: ನಿರುದ್ಯೋಗದಿಂದಾಗಿ ಗಂಭೀರ್ ಆರ್ಥಿಕ ಬಿಕ್ಕಟ್ಟನ್ನು ಎದುರಿಸಿಬೇಕಾಗಿ ಬಂದಿದೆ.

ನಾವು ನಮ್ಮ ಸಂಕಲ್ಪವನ್ನು ಬಲಪಡಿಸಿದ್ದು, ಈ ವಿಚಾರದಲ್ಲಿ ಗಮನ ಹರಿಸಲು ತೀರ್ಮಾನಿಸಿದ್ದೇವೆ. ನೋಟು ಅಮಾನೀಕರಣವು ಎಂಎಸ್ ಎಂಇ ಮತ್ತು ಅಸಂಘಟಿತ ವಲಯಗಳ ಸಂಕಷ್ಟಕ್ಕೆ ಕಾರಣವಾಗಿದೆ. ಇದರ ಪರಿಣಾಮವಾಗಿ ನಮ್ಮ ಯುವಕರಲ್ಲಿ ದೊಡ್ಡ ಪ್ರಮಾಣದ ನಿರುದ್ಯೋಗ ಸೃಷ್ಟಿಯಾಗಿದೆ. ಹಾಗೆಯೇ ರಾಷ್ಟ್ರದ ಸಂಪತ್ತನ್ನು ತಮ್ಮ ಪರ ಒಲವು ಹೊಂದಿರುವ ಆತ್ಮೀಯರು ಅಥವಾ ಆಪ್ತರಿಗೆ ಯಾವುದೇ ಜಾಗರೂಕತೆ ಇಲ್ಲದ ರೀತಿ ಮಾರಾಟ ಮಾಡುವುದನ್ನು ನಾವು ವಿರೋಧಿಸುತ್ತೇವೆ. ನಾವು ಬಲವಾದ ಮತ್ತು ಕಾರ್ಯತಂತ್ರದ ಸಹಕಾರ ಪಡೆದು ಸಾರ್ವಜನಿಕ ವಲಯದ ಜೊತೆಗೆ ಸ್ಪರ್ಧಾತ್ಮಕ ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ಖಾಸಗಿ ವಲಯದೊಂದಿಗೆ ನ್ಯಾಯಯುತ ಆರ್ಥಿಕತೆಯನ್ನು ನಿರ್ಮಿಸಬೇಕು.

ಕಿಸಾನ್ ಮತ್ತು ಖೇತ್ ಮಜದೂರ್ ಕಲ್ಯಾಣಕ್ಕೆ ಯಾವಾಗಲೂ ಹೆಚ್ಚಿನ ಆದ್ಯತೆ ಸಿಗಬೇಕು ಎಂಬುದು ನಮ್ಮ ಒಲವು ಎಂಬ ತೀರ್ಮಾನಕ್ಕೆ ಇಂಡಿಯಾ ಸಂಕಲ್ಪ ಕೈಗೊಂಡಿದೆ.

ಕೋಮುವಾದ: ಅಲ್ಪಸಂಖ್ಯಾತರ ವಿರುದ್ಧ ಸಮಾಜದಲ್ಲಿ ಉದ್ಭವಿಸುತ್ತಿರುವ ದ್ವೇಷ  ಮತ್ತು ಹಿಂಸೆಯನ್ನು ಸೋಲಿಸಲು ನಾವು ಒಟ್ಟಾಗಿ ಬಂದಿದ್ದೇವೆ. ಮಹಿಳೆಯರು, ದಲಿತರು, ಆದಿವಾಸಿಗಳು ಮತ್ತು ಕಾಶ್ಮೀರಿ ಪಂಡಿತರ ಮೇಲೆ ಹೆಚ್ಚುತ್ತಿರುವ ಅಪರಾಧಗಳನ್ನು ನಿಲ್ಲಿಸಬೇಕಾಗಿದೆ.

ಎಲ್ಲ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಮೊದಲ ಹಂತವಾಗಿ ಸಮುದಾಯಗಳಿಗೆ ನ್ಯಾಯವನ್ನು ಒದಗಿಸಲು ಜಾತಿ ಗಣತಿ ಜಾರಿಗೊಳಿಸುವುದು ನಮ್ಮ ಧೈಯ ಎಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಜೆಪಿಯ ವ್ಯವಸ್ಥಿತ ಪಿತೂರಿ ವಿರುದ್ಧ ಹೋರಾಟ: ನಮ್ಮ ಭಾರತೀಯರಲ್ಲಿ ಬಿಜೆಪಿಯವತ ರಿಯಾಗರಾುಕು ನೀಡುವ ಮು ನಿಗ್ರಹಿಸುವ ಬಿಜೆಪಿಯ ವ್ಯವಸ್ಥಿತ ಪಿತೂರಿಯ ವಿರುದ್ಧ ಹೋರಾಡಲು ನಾವು ನಿರ್ಧರಿಸಿದ್ದೇವೆ.

ಮಣಿಪುರವನ್ನು ನಾಶಪಡಿಸಿದ ಹಿಂಸಾಚಾರದ ಬಗ್ಗೆ ನಾವು ನಮ್ಮ ತೀವ್ರ ಕಳವಳ ವ್ಯಕ್ತಪಡಿಸುತ್ತೇವೆ. ಈ ವಿಚಾರದಲ್ಲಿ ಪ್ರಧಾನಿಯವರ ಮೌನ ಆಘಾತಕಾರಿ ಮತ್ತು ಅಚ್ಚರಿದಾಯಕವಾಗಿದೆ. ಮಣಿಪುರವನ್ನು ಶಾಂತಿ ಮತ್ತು ಸೌಹಾರ್ದತೆಯ ಹಾದಿಗೆ ಮರಳಿ ತರುವ ತುರ್ತು ಅಗತ್ಯವಿದೆ. ಈ ನಿಟ್ಟಿನಲ್ಲಿ ಇಂಡಿಯಾ ಬಲಗೊಂಡು ಪ್ರಯತ್ನ ಮಾಡಬೇಕಿದೆ ಎಂಬ ಪ್ರಮುಖ ಸಂಕಲ್ಪ ಮಾಡಲಾಗಿದೆ.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...