ನೀಟ್ ಫಲಿತಾಂಶ; ತನಿಖೆಯಾಗಲಿ ಸಿದ್ದರಾಮಯ್ಯ, ಪ್ರಿಯಾಂಕಾ ಗಾಂಧಿ ಆಗ್ರಹ:

Source: S O News | By I.G. Bhatkali | Published on 9th June 2024, 10:12 AM | State News | National News |

ಬೆಂಗಳೂರು: ನೀಟ್ ಫಲಿತಾಂಶದಲ್ಲಿ ಭಾರೀ ಅಕ್ರಮ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ಮೋದಿಯವರ ಸರಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದ್ದಾರೆ.

ಶುಕ್ರವಾರ ಈ ಸಂಬಂಧ ಪ್ರಕಟನೆ ನೀಡಿರುವ ಅವರು, 'ನೀಟ್ ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ ಶೇ.100ರಷ್ಟು ಅಂಕಗಳು ಬಂದಿದೆ. ಆದರೆ ಈ ಹಿಂದೆ ಬಂದ ಟಾಪರ್‌ಗಳ ಸಂಖ್ಯೆ ಎಷ್ಟು ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ ಈ ಬಾರಿಯ ಫಲಿತಾಂಶದಲ್ಲಿ ಅಕ್ರಮದ ವಾಸನೆ ಬಡಿಯುತ್ತದೆ' ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

ಸಮಗ್ರ ತನಿಖೆಯಾಗಲಿ ಪ್ರಿಯಾಂಕಾ ಗಾಂಧಿ:
ಎಟ್ ಪ್ರವೇಶ ಪರೀಕ್ಷೆಯಲ್ಲಿ ಪತ್ತೆಯಾಗಿ ಅಕ್ರಮಗಳಿಗೆ ಸಂಬಂಧಿಸಿದಂತೆ ಮೋದಿ ಸರಕಾರವನ್ನು ಕಟುವಾಗಿ ಟೀಕಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಈ ವಿಷಯದಲ್ಲಿ ಸಮಗ್ರ ತನಿಖೆ ನಡೆಸುವ ಮೂಲಕ ವಿದ್ಯಾರ್ಥಿಗಳ 'ಕಾನೂನುಬದ್ದ ದೂರುಗಳನ್ನು ಪರಿಹರಿಸುವ ತುರ್ತು ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಮೊದಲು ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಯಿತು ಮತ್ತು > ಈಗ ವಿದ್ಯಾರ್ಥಿಗಳ ಫಲಿತಾಂಶಗಳಲ್ಲಿಯೂ ಹಗರಣ ನಡೆದಿದೆ ಎಂದು ಆರೋಪಿಸಿದ್ದಾರೆ. 'ಫಲಿತಾಂಶ ಪ್ರಕಟಗೊಂಡ ಬಳಿಕ ದೇಶಾದ್ಯಂತ ಅನೇಕ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ವರದಿಗಳಿವೆ. ಇದು ತುಂಬಾ ದುಃಖಕರ ಮತ್ತು ಆಘಾತಕಾರಿಯಾಗಿದೆ ಎಂದು ಎಕ್ಸ್ ಪೋಸ್ಟ್‌ನಲ್ಲಿ ಅವರು ಹೇಳಿದ್ದಾರೆ.

ಪರೀಕ್ಷೆ ನಡೆಸುವ ಅಧಿಕಾರ ರಾಜ್ಯಗಳಿಗೆ ಮರಳಿ ನೀಡಿ: 
ವೈದ್ಯಕೀಯ ಪದವಿ ಶಿಕ್ಷಣ ಸ್ಟಾಲಿನ್ ಪ್ರವೇಶ ಪರೀಕ್ಷೆ (ನೀಟ್-ಯುಜಿ)ಯಲ್ಲಿ ವ್ಯಾಪಕ ಆಗ್ರಹ ಆಕ್ರಮಗಳು ನಡೆದಿವೆಯೆಂಬ ಆರೋಪಗಳಿಗೆ ಸಂಬಂಧಿಸಿ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಹಾಗೂ ಪ್ರತಿಪಕ್ಷ ಎಡಿಎಂಕೆ ಪಕ್ಷಗಳು ಶುಕ್ರವಾರ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ನೀಟ್ ಪರೀಕ್ಷೆಯನ್ನು ರದ್ದುಪಡಿಸಬೇಕು, ವೈದ್ಯಕೀಯ ಶಿಕ್ಷಣಗಳಿಗಾಗಿ ಪ್ರವೇಶ ಪರೀಕ್ಷೆಯನ್ನು ನಡೆಸುವ ಅಧಿಕಾರವನ್ನು ನವನ್ನು ರಾಜ್ಯಗಳಿಗೆ ನೀಡಬೇಕೆಂದು ಅವು ಆಗ್ರಹಿಸಿವೆ.

Read These Next

ಭಾರೀ ಮಳೆಗೆ ಬೆಂಗಳೂರು ತತ್ತರ; ಯಲಹಂಕದಲ್ಲಿ 1 ಸಾವಿರ ಮನೆಗಳಿಗೆ ನುಗ್ಗಿದ ಮಳೆ ನೀರು

ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದ ವಿವಿಧೆಡೆ ಅವಾಂತರ ಸೃಷ್ಟಿಯಾಗಿದೆ. ಸೋಮವಾರ ರಾತ್ರಿಯೆಲ್ಲಾ ಸುರಿದು ...

ಬೆಂಗಳೂರು: ನಿರ್ದೇಶನಾಲಯದ ಕಚೇರಿಯಲ್ಲಿ ಮಾಹಿತಿ ತಂತ್ರಜ್ಞರ ಸೇವೆ ಪಡೆಯಲು ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ಕಛೇರಿಯಲ್ಲಿ ಇಲಾಖೆಯ ಯೋಜನೆಗಳನ್ನು ಸಮಪರ್ಕವಾಗಿ ಇ-ಆಫೀಸ್ ತಂತ್ರಾಂಶ ...

ಬೆಂಗಳೂರು: ರಾಷ್ಟ್ರ ದಲ್ಲಿ ರಾಜ್ಯ ಕೃಷಿ ವಿಶ್ವವಿದ್ಯಾನಿಲಯವು ಸಂಶೋಧನೆ, ಅಭಿವೃದ್ಧಿಯಲ್ಲಿ ಪ್ರಮಖ ಪಾತ್ರ ವಹಿಸಿದೆ : ಕೆ.ಎಚ್.ಮುನಿಯಪ್ಪ

ರಾಷ್ಟ್ರದಲ್ಲಿ ನಮ್ಮ ಕೃಷಿ ವಿಶ್ವವಿದ್ಯಾನಿಲಯವು ಬಹಳಷ್ಟು ದೊಡ್ಡ ಪ್ರಮಾಣದಲ್ಲಿ ಸಂಶೋಧನೆ ಮತ್ತು ಅಭಿವೃಧ್ಧಿಯಲ್ಲಿ ಪ್ರಮುಖ ...

ಬಹ್ರೈಚ್ ಹಿಂಸಾಚಾರ: ಸುಳ್ಳು ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಕ್ಷಮೆಯಾಚನೆ

ಹೊಸದಿಲ್ಲಿ: ಬಹ್ರೈಚ್ ಹಿಂಸಾಚಾರದಲ್ಲಿ ಮೃತ ರಾಮ್ ಗೋಪಾಲ್ ಮಿಶ್ರಾ ಸಾವಿಗೆ ಸಂಬಂಧಿಸಿ ಸುಳ್ಳು ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ...

ಬುಲ್ಡೋಜರ್ ನ್ಯಾಯ; ಮಧ್ಯಸ್ಥಿಕೆಗಾಗಿ ಸುಪ್ರೀಂ ಕೋರ್ಟ್‌ನ್ನು ಕೋರಿದ ವಿಶ್ವಸಂಸ್ಥೆಯ ತಜ್ಞ

ವಸತಿ ಕುರಿತು ವಿಶ್ವಸಂಸ್ಥೆಯ ವಿಶೇಷ ವರದಿಗಾರ ಪ್ರೊ. ಬಾಲಕೃಷ್ಣನ್ ರಾಜಗೋಪಾಲ್ ಅವರು ಅಂತರ್ ರಾಷ್ಟ್ರೀಯ ಮಾನವ ಹಕ್ಕುಗಳ ಕಾನೂನಿನ ...