ಹೊಸದಿಲ್ಲಿ: ಆಗಸ್ಟ್ 1ರಂದು ನೀಟ್ ಪರೀಕ್ಷೆ

Source: VB | By S O News | Published on 14th March 2021, 1:50 PM | National News | State News |

ಹೊಸದಿಲ್ಲಿ: ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ಎನ್‌ಇಇಟಿ) ಯುಜಿ-2021 ಆಗಸ್ಟ್ 1ರಂದು ನಡೆಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಶುಕ್ರವಾರ ಪ್ರಕಟಿಸಿದೆ. “ನೀಟ್ (ಯುಜಿ) 2021ಅನ್ನು ಹಿಂದಿ ಹಾಗೂ ಇಂಗ್ಲಿಷ್ ಸೇರಿದಂತೆ 11 ಭಾಷೆಗಳಲ್ಲಿ ಪೆನ್ ಹಾಗೂ ಪೇಪರ್‌ ಮಾದರಿಯಲ್ಲಿ ನಡೆಸಲಾಗುವುದು' ಎಂದು ಸಂಸ್ಥೆ ಹೊರಡಿಸಿದ ಅಧಿಸೂಚನೆ ಹೇಳಿದೆ. ಪರೀಕ್ಷೆಯನ್ನು ಆನ್‌ಲೈನ್‌ನಲ್ಲಿ ನಡೆಸಲು ಸರಕಾರ ಚಿಂತಿಸಿತ್ತು. ಆದರೆ, ಈ ವರ್ಷ ಪೆನ್ ಹಾಗೂ ಪೇಪರ್‌ ಮಾದರಿಯಲ್ಲಿ ನಡೆಸಲು ನಿರ್ಧರಿಸಿದೆ.

ನೀಟ್ ಯುಜಿ ಎಂಬಿಬಿಎಸ್, ಬಿಎಎಂಎಸ್, ಬಿಎಸ್ಎಂಎಸ್ ಬಿಯುಎಂಎಸ್ ಹಾಗೂ ಬಿಎಚ್ಎಂಎಸ್, ಬಿಡಿಎಸ್ ಸೇರಿದಂತೆ ವೈದ್ಯಕೀಯ ಹಾಗೂ ದಂತವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಆಯೋಜಿಸುತ್ತದೆ. ರಾಜ್ಯ ಸರಕಾರದ ಇತರ ಸಂಸ್ಥೆಗಳು/ಕೇಂದ್ರ ಸರಕಾರದ ಕಾಲೇಜುಗಳಲ್ಲಿ ಬಿಎಸ್‌ಎಸ್ ನರ್ಸಿಂಗ್ ಹಾಗೂ ಬಿಎಸ್‌ಸಿ ಲೈಫ್ ಸಯನ್ಸಸ್ ಪ್ರವೇಶಕ್ಕೆ ಕೂಡ ನೀಟ್‌ನ ಫಲಿತಾಂಶವನ್ನು ಪರಿಗಣಿಸಲಾಗುತ್ತದೆ ಎಂದು ಎನ್‌ಟಿಎ ನೋಟಿಸ್ ಹೇಳಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...