ದೇಶದಲ್ಲಿ ಕಾನೂನು ನೆರವು ಕಾರ್ಯ ನಿರ್ಲಕ್ಷ್ಯ: ಸಿಜೆಐ ಯುಯು ಲಲಿತ್

Source: PTI | By MV Bhatkal | Published on 19th September 2022, 12:21 AM | National News |

ಕಟಕ್: ದೇಶದಲ್ಲಿ ಕಾನೂನು ನೆರವಿನ ಕೆಲಸ ನಿರ್ಲಕ್ಷ್ಯಕ್ಕೊಳಗಾಗಿದೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್ ಹೇಳಿದ್ದಾರೆ. ಇಂತಹ ಸೇವೆಗಳನ್ನು ನೀಡಲು  ಕಾನೂನು ವಿದ್ಯಾರ್ಥಿಗಳು ತಮ್ಮ ಸಮಯವನ್ನು ಮೀಸಲಿಡುವಂತೆ ಅವರು ಒತ್ತಾಯಿಸಿದ್ದಾರೆ.

ಇಲ್ಲಿನ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಒಂದೂವರೆ ವರ್ಷದಿಂದ ಕಾನೂನು ನೆರವಿನ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇನೆ.  ನನ್ನ ಪ್ರಕಾರ ಇದು ದೂರು ಅಥವಾ ಅಗೌರವ ತೋರಿಸುವುದು ಎನ್ನಿಸಲಿಲ್ಲ. ಆದರೆ, ದೇಶದಲ್ಲಿ ಕಾನೂನು ನೆರವಿನ ಕಾರ್ಯ ನಿರ್ಲಕ್ಷ್ಯಕ್ಕೊಳಗಾಗಿದೆ.  ಇದರ ವಿಸ್ತರಣೆಗೆ ಚಿಂತಿಸಬೇಕಾಗಿದೆ. ಅದಕ್ಕಾಗಿ ಸಮಯ ಮೀಸಲಿಡಬೇಕಾಗಿದೆ ಎಂದು ಅವರು ಹೇಳಿದರು.

ಹೊಣೆಗಾರಿಕೆಯೊಂದಿಗೆ ದಬ್ಬಾಳಿಕೆಯನ್ನು ತಡೆಯಲು ಕಾನೂನು ಪ್ರಯತ್ನಿಸುತ್ತದೆ ಎಂದು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಹೇಳಿದರು.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...