ಸುಳ್ಳು ಸುದ್ದಿ ನಿಯಂತ್ರಣಕ್ಕೆ ಶೀಘ್ರದಲ್ಲೇ ಹೊಸ ಕಾಯ್ದೆ; ಡಾ.ಜಿ.ಪರಮೇಶ್ವರ್

Source: Vb | By I.G. Bhatkali | Published on 29th July 2023, 9:27 AM | State News |

ತುಮಕೂರು: ಸುಳ್ಳು ಸುದ್ದಿಗಳು ಸಮಾಜಕ್ಕೆ ಬಹಳ ಅಪಾಯಕಾರಿ. ಹಾಗಾಗಿ ಸುಳ್ಳು ಸುದ್ದಿಗಳನ್ನು ನಿಯಂತ್ರಿಸಲು ಶೀಘ್ರದಲ್ಲಿ ಹೊಸ ಕಾನೂನು ಜಾರಿಗೆ ತರುವ ಸಂಬಂಧ ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಿದ್ದಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ರಾಜಕೀಯ ವ್ಯಕ್ತಿಗಳು, ಸರಕಾರದ ಬಗ್ಗೆ, ಅಧಿಕಾರಿಗಳ ಕುರಿತು ಸುಳ್ಳು ಸುದ್ದಿಗಳು ಪ್ರಕಟವಾಗುತ್ತಲೇ ಇವೆ. ಇದರಿಂದ ಆಗುವ ಅನಾಹುತವನ್ನು ಯಾರೂ ಊಹೆ ಮಾಡಿರುವುದಿಲ್ಲ. ರಾಜಕೀಯದಲ್ಲಿ ಟೀಕೆ, ಟಿಪ್ಪಣಿ ಸರ್ವೇ ಸಾಮಾನ್ಯ. ಪತ್ರಿಕೆಗಳಲ್ಲಿ ಬರುವ ಟೀಕೆಗಳು ರಾಜಕಾರಣಿಗಳು ಮಾಡುವ ತಪ್ಪನ್ನು ಎಚ್ಚರಿಸುವಂತಿರಬೇಕು. ಆದರೆ, ಆ ಟೀಕೆ ಸುಳ್ಳಾಗಬಾರದು. ಹೀಗಿದ್ದಾಗ ಮಾತ್ರ ಸಮಾಜಮುಖ ಪತ್ರಿಕೋದ್ಯಮ ಸಾಧ್ಯವಾಗುತ್ತದೆ ಎಂದು ಹೇಳಿದರು.

ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಪತ್ರಕರ್ತರು ಸುದ್ದಿ ಬರೆಯುವಾಗ ಪದ ಬಳಕೆಯ ಬಗ್ಗೆ ಪರಿಜ್ಞಾನ ಹೊಂದಿರಬೇಕು. ನಾವು ಬಳಸುವ ಪದ ಸಮಾಜಕ್ಕೆ, ವ್ಯಕ್ತಿಗೆ ಘಾಸಿ ಮಾಡುವಂತಿರಬಾರದು. ಇಂದು ನೈಜ ಪತ್ರಕರ್ತರಿಗಿಂತ ಬ್ಲ್ಯಾಕ್‌ ಮೇಲ್‌ ಪತ್ರಕರ್ತರ ಸಂಖ್ಯೆ ಹೆಚ್ಚಳವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಶಾಸಕ ಜ್ಯೋತಿಗಣೇಶ್ ಮಾತನಾಡಿ, ಪತ್ರಕರ್ತರಿಗೆ ಸಾಮಾಜಿಕ ಭದ್ರತೆ, ಆರೋಗ್ಯ ವಿಮೆ ಒದಗಿಸುವ ಕೆಲಸ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಪತ್ರಕರ್ತರ ಸಂಘ ಕಾರ್ಯೋನ್ಮುಖವಾಗಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ಸೇವೆ ನೀಡುವ ಸಿದ್ದಗಂಗಾ ಆಸ್ಪತ್ರೆಯ ಆರೋಗ್ಯ ಸಿದ್ದಿ ಉಚಿತ ಒಪಿಡಿ ನಮೂನೆ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ ಕುಮಾರ್‌, ಜಿಪಂ ಸಿಇಒ ಜಿ.ಪ್ರಭು, ಚಿ.ನಿ.ಪುರುಷೋತ್ತಮ್, ಸಿದ್ದಗಂಗಾ ಆಸ್ಪತ್ರೆಯ ಡಾ.ಎಸ್.ಪರಮೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಂ.ಆ‌. ಮಮತಾ, ತಹಶೀಲ್ದಾರ್ ಕಮಲಮ್ಮ ಮತ್ತಿತರರು ಉಪಸ್ಥಿತರಿದ್ದರು.

Read These Next

ಹನೂರು: ಇಂಡಿಗನ ಮತಗಟ್ಟೆ ಮೇಲೆ ಕಲ್ಲು ತೂರಾಟ, ಇವಿಎಂಗೆ ಹಾನಿ ತಹಶೀಲ್ದಾರ್, ಇನ್‌ಸ್ಪೆಕ್ಟರ್, ಚುನಾವಣಾಧಿಕಾರಿ ಸಹಿತ ಹಲವರಿಗೆ ಗಾಯ

ಮಹದೇಶ್ವರ ಬೆಟ್ಟ ಸಮೀಪದ ಇಂಡಿಗನತ್ತ ಮೆಂದಾರೆ ಮತಗಟ್ಟೆ ಬಳಿ ಮತದಾನ ನಡೆಯುವ ಬದಲು ರಣರಂಗವಾಗಿ ಮಾರ್ಪಟ್ಟು ಮತಗಟ್ಟೆ ಸಂಪೂರ್ಣ ...

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...