ಉಪಚುನಾವಣೆ ಫಲಿತಾಂಶ; ಬಿಜೆಪಿಗೆ ತೀವ್ರ ಮುಖಭಂಗ

Source: sonews | By Staff Correspondent | Published on 31st May 2018, 10:40 PM | National News | Don't Miss |

ಹೊಸದಿಲ್ಲಿ: ಉಪಚುನಾವಣೆಯ ಫಲಿತಾಂಶ ನಾಲ್ಕು ವರ್ಷಗಳ ಮೋದಿ ಆಡಳಿತಕ್ಕೆ ಜನತೆ ನೀಡಿದ ಆದೇಶವಾಗಿದೆ ಮತ್ತು ಬಿಜೆಪಿ ಸಾಮ್ರಾಜ್ಯದ ಅಂತ್ಯದ ಆರಂಭವಾಗಿದೆ ಎಂದು ಕಾಂಗ್ರೆಸ್ ವಿಶ್ಲೇಷಿಸಿದೆ.

ಗೋಡೆಯ ಮೇಲಿನ ಬರಹ ಸ್ಪಷ್ಟವಾಗಿದೆ. ಬಿಜೆಪಿಯ ನಿರ್ಗಮನ ಮತ್ತು ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ಯಶಸ್ಸು ಖಚಿತಗೊಂಡಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಮೋದ್ ತಿವಾರಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಮೋದಿ ಸರಕಾರ ಬಡಜನತೆಯನ್ನು ಹಾಗೂ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಕಳೆದ ನಾಲ್ಕು ವರ್ಷ ಸುಳ್ಳು, ವಂಚನೆ ಹಾಗೂ ವಿಶ್ವಾಸದ್ರೋಹದ ತಳಹದಿಯಲ್ಲಿ ನಿಂತಿದ್ದ ಬಿಜೆಪಿ ಸಾಮ್ರಾಜ್ಯದ ಅಂತ್ಯದ ಆರಂಭವಾಗಿದೆ . ಮುಂದಿನ ಲೋಕಸಭಾ ಚುನಾವಣೆಗೆ ಇದು ಸೆಮಿಫೈನಲ್ ಎಂದು ಪರಿಗಣಿಸಲಾಗಿತ್ತು. ಇದರಲ್ಲಿ ಬಿಜೆಪಿ ಸೋತಿದೆ. 2019ರ ಮಹಾ ಚುನಾವಣೆಯಲ್ಲೂ ಅವರ ಸೋಲು ಖಚಿತ ಎಂದು ತಿವಾರಿ ಹೇಳಿದರು.

ಬಿಜೆಪಿ ವಿರೋಧ ಪಕ್ಷಗಳ ವಿರುದ್ಧ ಸೇಡಿನ ರಾಜಕೀಯ ನಡೆಸಿ ಸಿಬಿಐ, ಜಾರಿ ನಿರ್ದೇಶನಾಲಯ ಮುಂತಾದ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ತಿವಾರಿ ಆರೋಪಿಸಿದರು. ಆದರೆ ಉಪಚುನಾವಣೆಯನ್ನು ಮೋದಿ ಮತ್ತು 12ಕ್ಕೂ ಹೆಚ್ಚು ವಿಪಕ್ಷಗಳ ನಡುವಿನ ಯುದ್ಧ ಎಂದು ಬಿಂಬಿಸುವುದು ಸರಿಯಲ್ಲ . ವಾಸ್ತವವಾಗಿ ಮೋದಿಯವರ ಜೊತೆ ಸುಮಾರು 47 ಪಕ್ಷಗಳಿವೆ. ಆದ್ದರಿಂದ ಹೀಗೆ ಹೇಳುವುದು ಸರಿಯಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರವಾಗಿ ಹೇಳಿದರು.

 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...