ಭಾರತದ ಪ್ರಧಾನಿ ಮೋದಿಗೆ ಜಾಗತಿಕ ನಾಯಕತ್ವದಲ್ಲಿ ತೃತೀಯ ಸ್ಥಾನ

Source: sonews | By Staff Correspondent | Published on 12th January 2018, 9:58 PM | National News | Global News | Don't Miss |

ಹೊಸದಿಲ್ಲಿ : ಗಾಲ್ಲಪ್ ಇಂಟರ್ ನ್ಯಾಷನಲ್ ಅಸೋಸಿಯೇಶನ್ ನಡೆಸಿದ ಸಮೀಕ್ಷೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಶ್ವದ ಮೂರು ಅಗ್ರಗಣ್ಯ ನಾಯಕರಲ್ಲಿ ಒಬ್ಬರೆಂದು ಗುರುತಿಸಲ್ಪಟ್ಟಿದ್ದಾರೆ. ಮೊದಲ ಸ್ಥಾನವನ್ನು ಜರ್ಮನಿಯ ಚಾನ್ಸಲರ್ ಏಂಜಲಾ ಮರ್ಕೆಲ್ ಹಾಗೂ ಎರಡನೇ ಸ್ಥಾನವನ್ನು ಫ್ರಾನ್ಸ್ ಅಧ್ಯಕ್ಷ ಇಮಾನ್ಯುವೆಲ್ ಮೆಕ್ರಾನ್ ಗಳಿಸಿದ್ದರೆ, ಮೂರನೇ ಸ್ಥಾನವನ್ನು ಪ್ರದಾನಿ ಮೋದಿ ಗಳಿಸಿದ್ದಾರೆ.

ಅಂದ ಹಾಗೆ ಈ ಸಮೀಕ್ಷೆಯಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಚೀನಾದ ಕ್ಸಿ ಜಿನ್ಪಿಂಗ್, ಬ್ರಿಟಿಷ್ ಪ್ರಧಾನಿ ತೆರೆಸಾ ಮೇ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹಾಗೂ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಮೋದಿ ಹಿಂದಿಕ್ಕಿದ್ದಾರೆ. ಒಟ್ಟು 50 ದೇಶಗಳ ಜನರು ಈ ಸಮೀಕ್ಷೆಯಲ್ಲಿ ಭಾಗವಹಿಸಿದ್ದರು.

ಸ್ವಿರ್ಜಲ್ಯಾಂಡ್ ನ ದಾವೋಸ್ ನಲ್ಲಿ ಜನವರಿ 22 ಹಾಗೂ 23ರಂದು ನಡೆಯಲಿರುವ ವರ್ಲ್ಡ್ ಇಕನಾಮಿಕ್ ಫೋರಂ ಶೃಂಗಸಭೆಯಲ್ಲಿ ಭಾಗವಹಿಸಲು ಸದ್ಯವೇ ಪ್ರಧಾನಿ ಮೋದಿ ತೆರಳಿರುವುದರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಸಮೀಕ್ಷಾ ವರದಿ ಅವರ ವರ್ಚಸ್ಸನ್ನು ಇನ್ನಷ್ಟು ಹೆಚ್ಚಿಸಲಿದೆಯೆಂದು ಹೇಳಲಾಗುತ್ತಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗಾಝಾದ ಅಲ್-ಶಿಫಾ ಆಸ್ಪತ್ರೆಯನ್ನು 'ಸಾವಿನ ವಲಯ'ವೆಂದು ಘೋಷಿಸಿದ ವಿಶ್ವಸಂಸ್ಥೆ ಪ್ರವೇಶದ್ವಾರದಲ್ಲಿ ಸಾಮೂಹಿಕ ಸಮಾಧಿ: ವಿಶ್ವ ಆರೋಗ್ಯ ಸಂಸ್ಥೆ

ಹಮಾಸ್ ನಿಯಂತ್ರಣದ ಗಾಝಾ ಪಟ್ಟಿಯಲ್ಲಿ ಇಸ್ರೇಲ್‌ನ ವೈಮಾನಿಕ ದಾಳಿಯ ಬಳಿಕ ನೆಲೆಸಿರುವ ಭೀಕರ ಪರಿಸ್ಥಿತಿಯನ್ನು ಅವಲೋಕಿಸಲು ಈ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...