ಬಿಜೆಪಿ ನಾಯಕನಿಂದ ಭನ್ಸಾಲಿ, ದೀಪಿಕಾ ತಲೆಗೆ 10 ಕೋ.ರೂ. ಬಹುಮಾನ ಘೋಷಣೆ 

Source: sonews | By Staff Correspondent | Published on 19th November 2017, 7:45 PM | National News | Don't Miss |

ಹೊಸದಿಲ್ಲಿ: ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ‘ಪದ್ಮಾವತಿ’ ಚಿತ್ರದ ಬಿಡುಗಡೆ ದಿನಾಂಕ ವಿವಾದಗಳ ಕಾರಣದಿಂದಾಗಿ ಈಗಾಗಲೇ ಮುಂದೂಡಲ್ಪಟ್ಟಿದೆ. ಆದರೆ ಈ ನಡುವೆ ಬಿಜೆಪಿ ನಾಯಕರೊಬ್ಬರು ಸಂಜಯ್ ಲೀಲಾ ಭನ್ಸಾಲಿ ಹಾಗು ದೀಪಿಕಾ ಪಡುಕೋಣೆ ತಲೆ ಕಡಿಯುವವರಿಗೆ 10 ಕೋಟಿ ರೂ. ನೀಡುವುದಾಗಿ ಘೋಷಿಸಿ ಹೊಸ ವಿವಾದವನ್ನು  ಸೃಷ್ಟಿಸಿದ್ದಾರೆ.

“ಭನ್ಸಾಲಿ ಹಾಗು ದೀಪಿಕಾರ ತಲೆ ಕಡಿದರೆ 5 ಕೋಟಿ ರೂ, ನೀಡುವುದಾಗಿ ಘೋಷಿಸಿದ್ದ ಮೀರತ್ ನ ಯುವಕನನ್ನು ನಾನು ಅಭಿನಂದಿಸುತ್ತೇನೆ. ಅವರಿಬ್ಬರ ತಲೆ ಕಡಿದವರಿಗೆ ನಾವು 10 ಕೋಟಿ ರೂ. ನೀಡುತ್ತೇವೆ ಹಾಗು ಅವರ ಕುಟುಂಬವನ್ನೂ ನೋಡಿಕೊಳ್ಳುತ್ತೇವೆ” ಎಂದು ಬಿಜೆಪಿಯ ಮುಖ್ಯ ಮಾಧ್ಯಮ ಸಂಯೋಜಕ ಪಾಲ್ ಅಮು ಎಂಬವರು ಹೇಳಿದ್ದಾರೆ.

ರಣವೀರ್ ಸಿಂಗ್, ದೀಪಿಕಾ ಪಡುಕೋಣೆ ಹಾಗು ಶಾಹಿದ್ ಕಪೂರ್ ಮುಖ್ಯಭೂಮಿಕೆಯ ಈ ಚಿತ್ರದ ವಿರುದ್ಧ ರಜಪೂತ ಸಮುದಾಯ ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿದೆ. ಈ ವಿವಾದಗಳ ಹಿನ್ನೆಲೆಯಲ್ಲಿ ಪದ್ಮಾವತಿ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...