ನೂತನ ಸಂಸತ್ ಭವನ ರಾಷ್ಟ್ರಪತಿಯಿಂದಲೇ ಲೋಕಾರ್ಪಣೆಯಾಗಲಿ; ಸುಪ್ರೀಂ ಕೋರ್ಟ್‌ಗೆ ಪಿಐಎಲ್‌

Source: Vb | By I.G. Bhatkali | Published on 26th May 2023, 4:08 PM | National News | Don't Miss |

ಹೊಸದಿಲ್ಲಿ: ನೂತನ ಸಂಸತ್‌ ಭವನವನ್ನು ರಾಷ್ಟ್ರಪತಿ ದೌಪದಿ ಮುರ್ಮು ಅವರೇ ಲೋಕಾರ್ಪಣೆಗೊಳಿಸಲು ನಿರ್ದೇಶನ ನೀಡುವಂತೆ ಕೋರಿ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ಸಲ್ಲಿಸಲಾಗಿದೆ.

ನೂತನ ಸಂಸತ್ ಭವನದ ಉದ್ಘಾಟನಾ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರನ್ನು ಆಹ್ವಾನಿಸದ ಲೋಕಸಭಾ ಸೆಕ್ರೇಟರಿಯೇಟ್ ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹೇಳಿದೆ.

ನೂತನ ಸಂಸತ್ ಭವನದ ಉದ್ಘಾಟನೆ ಕುರಿತು ಲೋಕಸಭಾ ಸೆಕ್ರೇಟರಿಯೇಟ್ ಮೇ 18ರಂದು ಹೇಳಿಕೆ ಹೊರಡಿಸಿದೆ ಹಾಗೂ ಲೋಕಸಭೆಯ ಮಹಾ ಕಾರ್ಯದರ್ಶಿ ಆಹ್ವಾನ ನೀಡಿದ್ದಾರೆ. ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ನ್ಯಾಯವಾದಿ ಜಯಾ ಸುಕಿನ್ ಹೇಳಿದ್ದಾರೆ.

'ಪ್ರಧಾನ ಮಂತ್ರಿಯವರನ್ನು ರಾಷ್ಟ್ರಪತಿ ನೇಮಕ ಮಾಡುತ್ತಾರೆ. ಇತರ ಸಚಿವರನ್ನು ಪ್ರಧಾನ ಮಂತ್ರಿ ಅವರ ಸಲಹೆಯಂತೆ ರಾಷ್ಟ್ರಪತಿ ಅವರು ನೇಮಕ ಮಾಡುತ್ತಾರೆ. ರಾಜ್ಯಪಾಲರು, ಸುಪ್ರೀಂ ಕೋರ್ಟ್, ಹೈಕೋರ್ಟ್‌ನ ನ್ಯಾಯಾಧೀಶರು, ಮಹಾಲೇಖಪಾಲರು, ಕೇಂದ್ರ ನಾಗರಿಕ ಸೇವಾ ಆಯೋಗದ ಅಧ್ಯಕ್ಷರು ಹಾಗೂ ಮ್ಯಾನೇಜರ್, ಮುಖ್ಯ ಚುನಾವಣಾ ಆಯುಕ್ತರು, ಹಣಕಾಸು ಆಯುಕ್ತರು ಹಾಗೂ ಇತರ ಚುನಾವಣಾ ಆಯುಕ್ತರಂತಹ ಸಾಂವಿಧಾನಿಕ ಪದಾಧಿಕಾರಿಗಳನ್ನು ನೇಮಕ ಮಾಡುವ ಅಧಿಕಾರ ರಾಷ್ಟ್ರಪತಿ ಅವರಿಗಿದೆ'' ಎಂದು ಅರ್ಜಿ ಹೇಳಿದೆ.

ಈ ಪ್ರಕರಣದಲ್ಲಿ ಲೋಕಸಭಾ ಸೆಕ್ರೇಟರಿಯೇಟ್, ಕೇಂದ್ರ ಗೃಹ ಸಚಿವಾಲಯ, ಕಾನೂನು ಹಾಗೂ ನ್ಯಾಯ ಸಚಿವಾಲಯಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಪ್ರತಿವಾದಿ (ಕಾರ್ಯದರ್ಶಿ ಹಾಗೂ ಒಕ್ಕೂಟ)ಗಳ ನಿರ್ಧಾರ ಕಾನೂನು ಬಾಹಿರ, ನಿರಂಕುಶ, ಅನ್ಯಾಯ, ಅಧಿಕಾರದ ದುರುಪಯೋಗ ಹಾಗೂ ಸಹಜ ನ್ಯಾಯದ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಎಂದು ಅರ್ಜಿ ಹೇಳಿದೆ.

ಪ್ರತಿವಾದಿಗಳು ಭಾರತದ ಸಂವಿಧಾನದ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಸಂವಿಧಾನಕ್ಕೆ ಗೌರವ ನೀಡಿಲ್ಲ. ಸಂಸತ್ತು ಭಾರತದ ಸರ್ವೋಚ್ಚ ಶಾಸಕಾಂಗ ಸಂಸ್ಥೆ. ಭಾರತದ ಸಂಸತ್ತು ರಾಷ್ಟ್ರಪತಿ ಹಾಗೂ ಎರಡು ಸದನಗಳಾದ ರಾಜ್ಯಸಭೆ ಹಾಗೂ ಲೋಕಸಭೆಯನ್ನು ಒಳಗೊಂಡಿದೆ. ರಾಷ್ಟ್ರಪತಿ ಅವರಿಗೆ ಸಂಸತ್ ಸದನದ ಸಭೆ ಕರೆಯುವ ಹಾಗೂ ಮುಂದೂಡುವ ಅಥವಾ ಲೋಕಸಭೆಯನ್ನು ವಿಸರ್ಜಿಸುವ ಅಧಿಕಾರ ಇದೆ'' ಎಂದು ಅದು ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಮೇ 28ರಂದು ನೂತನ ಸಂಸತ್ ಭವನವನ್ನು ಲೋಕಾರ್ಪಣೆ ಮಾಡಲಿದ್ದಾರೆ. ರಾಷ್ಟ್ರಪತಿ ದೌಪದಿ ಮುರ್ಮು ಅವರ ಬದಲಿಗೆ ತಾವೇ ಭಾಗವಹಿಸುವ ಪ್ರಧಾನಿಯವರ ನಿರ್ಧಾತರವನ್ನು ಕನಿಷ್ಠ 21 ಪ್ರತಿಪಕ್ಷಗಳು ಬಹಿಷ್ಕರಿಸಲು ನಿರ್ಧರಿಸಿವೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...