ನ್ಯೂ ಶಮ್ಸ್ ಶಾಲೆಯಲ್ಲಿ ಸಾಹಿತ್ಯೀಕ, ಸಾಂಸ್ಕೃತಿ ಸ್ಪರ್ಧೆ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ

Source: sonews | By Staff Correspondent | Published on 1st December 2019, 11:38 PM | Coastal News |

ಭಟ್ಕಳ: ತಾಲೂಕಿನ ಹೆಬಳೆ ಪಂಚಾಯತ್ ವ್ಯಾಪ್ತಿಯ ನ್ಯೂ ಶಮ್ಸ್ ಶಾಲೆಯಲ್ಲಿ ಶಾಲಾ ವಾರ್ಷೀಕ ಸಾಂಸ್ಕೃತಿಕ ಮತ್ತು ಸಾಹಿತ್ಯೀಕ ಸ್ಪರ್ಧೆಗಳು ಭಾನುವಾರ ನಡೆದವು. 
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ರಾಬಿತಾ ಸೂಸೈಟಿಯ ಮಾಜಿ ಅಧ್ಯಕ್ಷ ಮುಹಮ್ಮದ್ ಸಾದಿಖ್ ಪಿಲ್ಲೂರ್, ಈ ಸಂಸ್ಥೆ ಭಟ್ಕಳ ಪರಿಸರದಲ್ಲಿ ಉತ್ತಮ ಹೆಸರನ್ನು ಮಾಡಿದ್ದು ಇಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಜೀವನ ಮೌಲ್ಯಗಳನ್ನು ಕಲಿಸಲಾಗುತ್ತಿದೆ. ಇಲ್ಲಿ ಕಲಿತಂತಹ ಅನೇಕಾರು ವಿದ್ಯಾರ್ಥಿಗಳು ಯಶಸ್ವಿ ಜೀವನವನ್ನು ನಡೆಸುತ್ತಿದ್ದಾರೆ ಎಂದರು. 
ಇನ್ನೋರ್ವ ಮುಖ್ಯ ಅತಿಥಿ ಶಾಲೆಯ ಹಳೆ ವಿದ್ಯಾರ್ಥಿ ಮುಹಮ್ಮದ್ ತಾರೀಕ್ ರುಕ್ನುದ್ದೀನ್ ಮಾತನಾಡಿ, ಉನ್ನತ ಗುರಿಯೊಂದಿಗೆ ಮುನ್ನೆಡೆಯಬೇಕೆಂದು ಕರೆ ನೀಡಿದರು. 
ದಿಕ್ಸೂಚಿ ಭಾಷಣ ಮಾಡಿದ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಮೌಲಾನ ಸೈಯ್ಯದ್ ಝುಬೇರ್ ಎಸ್.ಎಂ, ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಪೋಷಿಸಿ ಬೆಳೆಸಿಕೊಂಡು ಬರುವಲ್ಲಿ ಶಾಲಾ ವಾತವರಣ ಮಹತ್ವದ ಪಾತ್ರ ವಹಿಸುತ್ತದೆ. ಶಾಲಾ ಹಂತದಿಂದಲೆ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಆಸಕ್ತಿಯಿಂದ ಭಾಗವಹಿಸುವುದರ ಮೂಲಕ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು. 
ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಅಧ್ಯಕ್ಷ ಮುಹಮ್ಮದ್ ಇಸ್ಮಾಯಿಲ್ ಮೊಹತೆಶಮ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಾಧ್ಯಾಪಕ ಎಂ.ಆರ್.ಮಾನ್ವಿ ಪ್ರಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು. 
ವಿದ್ಯಾರ್ಥಿಗಳಾದ ಅಬ್ದುಲ್ಲಾ ಮತ್ತು ಕಾಮರಾನ್ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಪಿ.ಆರ್.ಒ ಕಾರ್ಯದರ್ಶಿ ಮೌಲಾನ ಅಝೀಝುರ್ರಹ್ಮಾನ್ ರುಕ್ನುದ್ದೀನ್ ಧನ್ಯವಾದ ಅರ್ಪಿಸಿದರು. 
ಸಂಸ್ಥೆಯ ಸ್ಥಾಪಕ ಸದಸ್ಯ ಮುಖಂಡ ಸೈಯ್ಯದ್ ಹಸನ್ ಬರ್ಮಾವರ್, ಪ್ರಧಾನ ಕಾರ್ಯದರ್ಶಿ ಮೌಲಾನ ಝೀಯಾವುರ್ರಹ್ಮಾನ್ ರುಕ್ನುದ್ದೀನ್ ನದ್ವಿ, ಮೌಲಾನ ಯಾಸಿರ್ ಬರ್ಮಾವರ್, ಅಬ್ರಾರ್ ಉಲ್ ಹಖ್ ಖತೀಬಿ ವೇದಿಕೆಯಲ್ಲಿ ಉಪಸ್ತಿತರಿದ್ದರು.
ನ್ಯೂ ಶಮ್ಸ್ ಸ್ಕೂಲ್ ಪ್ರಾಂಶುಪಾಲೆ ಫಹಮಿದಾ ಮುಲ್ಲಾ, ಆಡಳಿತ ಮಂಡಳಿಯ ಮಹಿಳಾ ಸದಸ್ಯರಾದ ಸಬಿಹಾ ಕೌಡಾ, ಫರಹತ್ ಕಾಜಿಯಾ, ರುಫೈದಾ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 
ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು. 
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...