ಶ್ರೀನಿವಾಸಪುರದ ಮೂಲಕ ದೆಹಲಿಗೆ ಹೊಸ ರೈಲು ಸಂಚಾರ; ಕರ್ನಾಟಕ ಪ್ರಾಂತ ರೈತ ಸಂಘ ವಿಜಯೋತ್ಸವ

Source: sonews | By Staff Correspondent | Published on 6th March 2019, 5:20 PM | State News |

ಶ್ರೀನಿವಾಸಪುರ: ಪಟ್ಟಣದ ಹೊರ ವಲಯದ ರೈಲು ನಿಲ್ದಾಣದಲ್ಲಿ, ರೈಲ್ವೆ ಇಲಾಖೆ ಶ್ರೀನಿವಾಸಪುರದ ಮೂಲಕ ದೆಹಲಿಗೆ ಹೊಸ ರೈಲು ಸಂಚಾರ ಪ್ರಾರಂಭಿಸಿದ್ದಕ್ಕಾಗಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಕಾರ್ಯಕರ್ತರು ಮಂಗಳವಾರ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್‌.ಸೂರ್ಯನಾರಾಯಣ ಮಾತನಾಡಿ, ಮಾರ್ಗದಲ್ಲಿ ಹೊಸ ರೈಲುಗಳ ಸೇವೆ ಪ್ರಾರಂಭಿಸುವಂತೆ ಆಗ್ರಹಿಸಿ ಕೆಪಿಆರ್ಎಸ್ಕಾರ್ಯರ್ತರು ಹಲವು ಬಾರಿ ಪ್ರತಿಭಟನೆ ನಡೆಸಿದ್ದರು. ಅದರ ಪರಿಣಾಮವಾಗಿ ದೆಹಲಿಗೆ ರೈಲು ಸೇವೆ ಲಭ್ಯವಾಗಿದೆ. ಇದರಿಂದ ಪ್ರದೇಶದ ಜನರಿಗೆ ಹೆಚ್ಚಿನ ಉಪಯೋಗವಾಗಿದೆ ಎಂದು ಹೇಳಿದರು.

ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಾತಕೋಟ ನವೀನ್ಕುಮಾರ್ಮಾತನಾಡಿ, ’ಇದು ನಮ್ಮ ಸಂಘಟನೆಯ ಹೋರಾಟಕ್ಕೆ ಸಂದ ಗೆಲುವಾಗಿದೆ. ಸಾರ್ವಜನಿಕರ ಸಂಘಟಿತ ಹೋರಾಟಕ್ಕೆ ಜಯ ಸಿಕ್ಕೇ ಸಿಗುತ್ತದೆ. ನಮ್ಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಇನ್ನಷ್ಟು ರೈಲು ಹಾಗೂ ಗೂಡ್ಸ್ರೈಲುಗಳ ಸೇವೆ ಪ್ರಾರಂಭಿಸಲು ಹೋರಾಟ ನಡೆಸಲಾಗುವುದುಎದು ಹೇಳಿದರು.

ಸಂಸದ ಕೆ.ಎಚ್‌.ಮುನಿಯಪ್ಪ, ಕೆಪಿಆರ್ಎಸ್ಮುಖಂಡರಾದ ಎನ್‌.ವೀರಪ್ಪರೆಡ್ಡಿ, ಆರ್‌. ವೆಂಕಟೇಶ್, ಸೈಯದ್ಫಾರೂಕ್‌, ಎಂ.ನಾಗರಾಜ್‌, ನಾರೆಪ್ಪ, ಸಿ.ಎಂ.ಗೌಡ, ಆಂಜಮ್ಮ, ಶ್ರೀನಿವಾಸ್‌, ನಾಗರಾಜ್‌, ಶಿವಣ್ಣ, ಸೋಮಶೇಖರ್‌, ಅಮಾಲಿ ಮೂರ್ತಿ ಇದ್ದರು.

 

 

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...