ವಿರೋಧ ಬಿಟ್ಟು ಬೇರೆ ಗೊತ್ತಿಲ್ಲ: ಕಾಂಗ್ರೆಸ್‌ ವಿರುದ್ಧ ನಳಿನ್ ಕುಮಾರ್ ಕಟೀಲ್

Source: so news | By MV Bhatkal | Published on 12th June 2021, 12:37 PM | Coastal News | Don't Miss |

ಪುತ್ತೂರು: ‘ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಮಾಡುವುದು ಬಿಟ್ಟು, ಬೇರೆ ವಿಷಯವೇ ಗೊತ್ತಿಲ್ಲ. ದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಪಕ್ಷ ಎಲ್ಲದಕ್ಕೂ ವಿರೋಧ ಮಾಡುತ್ತಲೇ ಬಂದಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್ ಲಸಿಕೆ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್, ಈಗ ಪೆಟ್ರೋಲ್, ಡೀಸೆಲ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾದ ಕಾರಣ ದೇಶದಲ್ಲೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಬೇಕಾಗಿದೆ. ಈ ಬೆಳವಣಿಗೆ ಯಾವುದೇ ಪಕ್ಷ ಆಡಳಿತದಲ್ಲಿದ್ದರೂ ನಡೆದುಕೊಂಡು ಬಂದಿದೆ. ಕೋವಿಡ್ ಸಂಕಷ್ಟದ ದಿನಗಳಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕುಸಿಯದಂತೆ ಹಾಗೂ ದೇಶದ ಜನತೆಯ ಹಿತದೃಷ್ಟಿಯಿಂದ ಕೇಂದ್ರ ಹಲವು ನಿರ್ಧಾರಗಳನ್ನು ಕೈಗೊಂಡಿದ್ದು, ಬೆಲೆ ಇಳಿಕೆಯ ಬಗ್ಗೆಯೂ ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...