ಸಾಲ ಮರುಪಾವತಿ ವಿನಾಯಿತಿ ಮುಂದುವರಿಕೆಯಿಲ್ಲ: ಆರ್ ಬಿಐ ಸ್ಪಷ್ಟನೆ

Source: PTI | Published on 1st September 2020, 10:44 PM | National News | Don't Miss |

 

 

 
ನವದೆಹಲಿ: ದೇಶಾದ್ಯಂತ ಕೊರೋನಾ ವೈರಸ್ ಹಿನ್ನೆಲೆಯಲ್ಲಿ 6 ತಿಂಗಳ ಕಾಲ ಮುಂದೂಡಲಾಗಿದ್ದ ಸಾಲದ ಮೇಲಿನ ಇಎಂಐ ಪಾವತಿ ಇಂದಿನಿಂದ ಶುರುವಾಗಲಿದೆ ಎಂದು ಆರ್ ಬಿಐ ಸ್ಪಷ್ಟಪಡಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಸಾಲ ಪಾವತಿ ಮುಂದೂಡುವುದು ತಾತ್ಕಾಲಿಕ ಪರಿಹಾರ, ಇದರಿಂದ ಬ್ಯಾಂಕ್ ಗಳಿಗೆ ಭಾರಿ ಸಮಸ್ಯೆಯಾಗಲಿದೆ. ಇದರಿಂದ ಸಾಲ ಮರುಪಾವತಿದಾರರಿಗೂ ಪರಿಹಾರ ಸಿಗುವುದಿಲ್ಲ. ಆದ್ದರಿಂದ ಸೆ.1 ರಿಂದ ಸಾಲ ಮರುಪಾವತಿ ವಿನಾಯಿತಿ ಮುಂದುವರಿಸುವುದಿಲ್ಲ ಎಂದು ಹೇಳಿದ್ದಾರೆ.
ಕೊರೋನಾ ಮತ್ತು ಲಾಕ್ ಡೌನ್ ಹಿನ್ನೆಲೆಯಲ್ಲಿ ಇಎಂಐ ವಿನಾಯಿತಿ ಮಾರ್ಚ್ ನಿಂದ ಆಗಸ್ಟ್ ವರೆಗೆ 6 ತಿಂಗಳು ಕಂತು ಕಟ್ಟಲು ವಿನಾಯಿತಿ ನೀಡಿ, ಇಎಂಐ ಪಾವತಿ ಮುಂದೂಡಿಕೆಗೆ ಅವಕಾಶ ನೀಡಲಾಗಿತ್ತು.
ಇದೀಗ ಈ ಅವಧಿ ಮುಗಿದಿದ್ದು, ಸೌಲಭ್ಯ ಬಳಸಿಕೊಂಡವರಿಗೆ ಬಡ್ಡಿಯ ಬರೆ ಬೀಳಲಿದೆ. ಪ್ರಸ್ತುತ ಬಡ್ಡಿ ವಿನಾಯಿತಿಗೆ ಆರ್ ಬಿಐ ಮತ್ತು ಕೇಂದ್ರ ಸರ್ಕಾರ ಒಪ್ಪದ ಕಾರಣ ವಿನಾಯಿತಿ ಅವಧಿಯ ಇಎಂಐ ಜೊತೆಯಲ್ಲಿ ಬಡ್ಡಿಗೆ ಚಕ್ರಬಡ್ಡಿಯನ್ನು ಗ್ರಾಹಕರೇ ಭರಿಸಬೇಕಿದೆ

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...