ಬೆಂಗಳೂರು: ಖಾಸಗಿ ಇಂಜಿನಿಯರಿಂಗ್ ಶುಲ್ಕ ಹೆಚ್ಚಳ ಇಲ್ಲ; ಇತರ ಶುಲ್ಕಕ್ಕೆ 20 ಸಾವಿರ ರೂ.ಮಿತಿ

Source: VB | Published on 30th September 2021, 8:39 PM | State News | National News |

ಬೆಂಗಳೂರು: ಕೋವಿಡ್ ಹಿನ್ನೆಲೆ ಯಲ್ಲಿ ಖಾಸಗಿ ಕಾಲೇಜುಗಳ ಇಂಜಿನಿಯ ರಿಂಗ್ ಕೋರ್ಸಿನ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡದೆ ಹಿಂದಿನ ದರವನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಬುಧವಾರವಿಕಾಸಸೌಧದಲ್ಲಿ ಕರ್ನಾಟಕ ಅನುದಾನರಹಿತ ಖಾಸ) ಇಂಜಿನಿಯ ರಿಂಗ್ ಕಾಲೇಜುಗಳ ಸಂಘ (ಕೆಯುಪಿಐಸಿಎ) ಮತ್ತು ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ವೃತ್ತಿ ಪರ ಕಾಲೇಜುಗಳ ಸಂಘ(ಕೆಆರ್‌ ಎಲ್ ಎಂಪಿಸಿಎ)ದ ಪ್ರತಿನಿಧಿಗಳ ಜತೆ ನಡೆದ ಸಭೆಯಲ್ಲಿ ಈ ಮೇಲ್ಕಂಡ ನಿರ್ಧಾರಕ್ಕೆ ಬರಲಾಯಿತು ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮುಂಚಿನಂತೆಯೇ ಸರಕಾರಿ ಕೋಟಾದಡಿ ಪಡೆಯುವವರಿಗೆ ಪ್ರವೇಶ 65,340 ರೂ., 58,806 ರೂ, ಈ ಎರಡು ಫ್ಲ್ಯಾಬ್‌ಗಳಲ್ಲಿ ಶುಲ್ಕಗಳು ಮುಂದು ವರಿಯಲಿವೆ. ಖಾಸಗಿ ಕಾಲೇಜುಗಳು 'ಇತರ ಶುಲ್ಕ' ನೆಪದಲ್ಲಿ ಮಿತಿಮೀರಿ ಕಟ್ಟಿಸಿಕೊಳ್ಳುವುದಕ್ಕೂ ಕಡಿವಾಣ ಹಾಕಿ, ಗರಿಷ್ಠ ಮಿತಿಯನ್ನು 20 ಸಾವಿರ ರೂ.ಗೆ ನಿಗದಿಪಡಿಸಲಾಗಿದೆ. ಹಲವು

ಕಾಲೇಜುಗಳು ಇತರ ಶುಲ್ಕದ ನೆಪದಲ್ಲಿ 70 ಸಾವಿರ ರೂ.ವರೆಗೂ ವಸೂಲಿ ಮಾಡುತ್ತಿವೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ಮಾಡಲಾಗಿದೆ. ಸಂಘದ ಇದಕ್ಕೆ ಕಾಲೇಜು ಪ್ರತಿನಿಧಿಗಳು ಒಪ್ಪಿಗೆ ಸೂಚಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಇನ್ನು ಮುಂದೆ ಪ್ರವೇಶ ಶುಲ್ಕ, ಇತರ ಶುಲ್ಕ, ಕೌಶಲ ಶುಲ್ಕ ಇದ್ಯಾವುದನ್ನೂ ನೇರವಾಗಿ ಕಾಲೇಜಿನಲ್ಲಿ ಕಟ್ಟುವಂತಿಲ್ಲ.

ಇವೆಲ್ಲವನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ದಲ್ಲಿ ಯೇ ಪಾವತಿಸಬೇಕು. ಸೇರಿದಂತೆ ಇತರ ಟ್ಯೂಷನ್ ಶುಲ್ಕ ಶುಲ್ಕಗಳನ್ನು ಕಟ್ಟಿಸಿಕೊಳ್ಳುವ ಮುನ್ನ ಪ್ರತಿಯೊಂದು ಕಾಲೇಜು ಯಾವ ಉದ್ದೇಶಕ್ಕೆ ಇದನ್ನು ಕಟ್ಟಿಸಿಕೊಳ್ಳಲಾಗುತ್ತದೆ ಎಂಬುದನ್ನು ಕೆಎ, ತಾಂತ್ರಿಕ ಶಿಕ್ಷಣ ಇಲಾಖೆ, ಏಟೆಯುಗಳಿಗೆ ಮಾಹಿತಿ ಕೊಡಬೇಕು. ಇದನ್ನು ಕಾಲೇಜುಗಳಲ್ಲಿ ಕಟ್ಟಲು ಅವ ಕಾಶ ಇರುವುದಿಲ್ಲ. ಜೊತೆಗೆ ವೆಬ್ ಸೈಟ್ ನಲ್ಲಿ ಪ್ರಕಟಿಸಬೇಕು ಎಂದು ಅಶ್ವತ್ಥನಾರಾ ಯಣ ಹೇಳಿದರು.

ವಿಶ್ವ ವಿದ್ಯಾನಿಲಯ ಶುಲ್ಕವನ್ನು ಈ ಮುಂಚೆ ಆಯಾ ಕಾಲೇಜಿನಲ್ಲಿ ಕಟ್ಟಬಹುದಿತ್ತು. ಆದರೆ, ಇನ್ನು ಮುಂದೆ ಅದನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲೇ ಕಟ್ಟಬೇಕು. ಈ ಮುಂಚೆ ಈ ಶುಲ್ಕ ಕಟ್ಟಿಸಿಕೊಳ್ಳುವಲ್ಲಿ ಇದ್ದ ಗೊಂದಲವನ್ನು ನಿವಾರಿಸುವುದಕ್ಕಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಇನ್ನು ಕೆಲವು ಕಾಲೇಜುಗಳು ವಿದ್ಯಾರ್ಥಿಗಳನ್ನು ಉದ್ಯಮಗಳಿಗೆ ಸಜ್ಜುಗೊಳಿಸಿ ಅವರ ನೇಮಕಾತಿ ಸಾಧ್ಯತೆ ಹೆಚ್ಚಿಸುವುದಕ್ಕಾಗಿ ನೀಡುತ್ತಿದ್ದ ಹೆಚ್ಚುವರಿ ತರಬೇತಿಗಾಗಿ 'ಕೌಶಲ ಶುಲ್ಕ' (ಸ್ಕಿಲ್ ಫೀಸ್) ಕಟ್ಟಿಸಿಕೊಳ್ಳುತ್ತಿದ್ದವು. ಇದು ಐಚ್ಛಿ ಕವಾಗಿದ್ದು, ಒಂದೊಂದು ಕಾಲೇಜಿನಲ್ಲಿ ಒಂದೊಂದು ರೀತಿ ಶುಲ್ಕ ಇರುತ್ತಿತ್ತು. ಈಗ ಇದಕ್ಕೆ ಗರಿಷ್ಠ 20 ಸಾವಿರ ರೂ.ಮಿತಿ ನಿಗದಿಗೊಳಿಸಲಾಗಿದೆ. ಇದರಲ್ಲಿ 10 ಸಾವಿರ ರೂ., 15 ಸಾವಿರ ರೂ. ಹಾಗೂ 20 ಸಾವಿರ ರೂ. ಹೀಗೆ ಮೂರು ಹಂತಗಳಿರುತ್ತವೆ. ವಿಟಿಯು ತಂಡವು ಕಾಲೇಜುಗಳ ಪರಿಶೀಲನೆ ನಡೆಸಿ ಯಾವ ಕಾಲೇಜಿ ನಲ್ಲಿ ಎಷ್ಟು ಕಟ್ಟಿಸಿಕೊಳ್ಳಬೇಕು ಎಂದು ನಿಗದಿಗೊಳಿಸಲಿದೆ. ಅದರಂತೆ

ಈ ಶುಲ್ಕವನ್ನು ಕೆಇಎಗೆ ಕಟ್ಟಬೇಕಾಗುತ್ತದೆ ಎಂದು ವಿವರಿಸಿದರು. ಇಂಜಿನಿಯರಿಂಗ್ ಕೋರ್ಸ್ ಶುಲ್ಕವನ್ನು ಶೇ.30ರಷ್ಟು ಹೆಚ್ಚಿ ಸಲು ಖಾಸಗಿ ಕಾಲೇಜುಗಳು ಸರಕಾರಕ್ಕೆ ಬೇಡಿಕೆ ಮುಂದಿಟ್ಟಿದ್ದವು.

ವಿಟಿಯು ಕುಲಪತಿ ಕರಿಸಿದ್ದಪ್ಪ ನೇತೃತ್ವದ ಸಮಿತಿಯು ಶೇ.15ರಿಂದ ಶೇ.20ರವರೆಗೆ ಹೆಚ್ಚಳ ಮಾಡಬಹುದೆಂದು ವರದಿಯಲ್ಲಿ ಅಭಿಪ್ರಾಯಪಟ್ಟಿತ್ತು. ಆದರೆ, ಕೋವಿಡ್ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ವರ್ಷ ಶುಲ್ಕ ಹೆಚ್ಚಳ ಮಾಡದಿರಲು ಖಾಸಗಿ ಕಾಲೇಜುಗಳ ಒಕ್ಕೂಟಗಳ ಮನವೊಲಿಸಲಾಯಿತು ಎಂದು ಹೇಳಿದರು.

ಕುಪೇಕಾದ ತಾಂತ್ರಿಕ ಸಮಿತಿಯ ಅಧ್ಯಕ್ಷ ಮಂಜುನಾಥ ಭಂಡಾರಿ, ಸದಸ್ಯರಾದ ಚಂದ್ರಶೇಖರ್ ರಾಜು, ರಮೇಶ್ ರಾಜು, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್, ಗಣೇಶ್ ಕಾರ್ಣಿಕ್ ಸೇರಿದಂತೆ ಇನ್ನಿತರರು ಸಭೆಯಲ್ಲಿ ಹಾಜರಿದ್ದರು.

Read These Next

ಕೋವಿಡ್ ಜನತೆ ಆತಂಕ ಪಡುವ ಅಗತ್ಯವಿಲ್ಲ. ಡಿ.2 ರಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವರ ಭೇಟಿ : ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ...