ಯಾವುದೇ ಸೋಂಕಿತ ಚಿಕಿತ್ಸೆ ಪಡೆಯದೇ ತಿರುಗುವಂತಿಲ್ಲ - ಕೇಂದ್ರ ಆರೋಗ್ಯ ಇಲಾಖೆ

Source: SO News | By Laxmi Tanaya | Published on 10th September 2020, 6:48 PM | National News | Don't Miss |

ನವದೆಹಲಿ: ಯಾವುದೇ ಕಾರಣಕ್ಕೂ ಕೊರೋನ ಸೋಂಕಿತ ವ್ಯಕ್ತಿ  ಚಿಕಿತ್ಸೆ ಪಡೆಯದೇ ಸಮಾಜದಲ್ಲಿ ತಿರುಗುವಂತಿಲ್ಲ . ಆತನಿಂದ ಇತರರಿಗೆ ಸೋಂಕು ಹರಡದಂತೆ ಮುಂಜಾಗ್ರತೆ ವಹಿಸುವುದು ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕರ್ತವ್ಯ ಎಂದು ಕೇಂದ್ರ ಸರ್ಕಾರ ಹೇಳಿದೆ.

ಸೋಂಕು ತಡೆಯುವ ಈ ಕಾರ್ಯದಲ್ಲಿ ಯಾರನ್ನೂ ಕೂಡ ನಿರ್ಲಕ್ಷಿಸುವಂತಿಲ್ಲ. ಕೊರೋನಾ ಸೋಂಕು ಲಕ್ಷಣಗಳಿದ್ದೂ ಕೂಡ ಆರ್ಟಿಪಿಸಿಆರ್ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿರುವವರನ್ನು ಮತ್ತೆ ಆ್ಯಂಟಿಜೆನ್ ಪರೀಕ್ಷೆಗೊಳಪಡಿಸಿ ಎಂದು ಕೇಂದ್ರ ಸರ್ಕಾರ ರಾಜ್ಯಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಗುರುವಾರ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ಐಸಿಎಂಆರ್ ಮಾರ್ಗದರ್ಶನದಂತೆ ಕೆಲವು ದೊಡ್ಡ ರಾಜ್ಯಗಳಲ್ಲಿ, ರಾಪಿಡ್ ಆಂಟಿಜೆನ್ ಟೆಸ್ಟ್ (ರಾಟ್) ಪರೀಕ್ಷೆ ಮಾಡುತ್ತಿಲ್ಲ. ರ್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ ಮತ್ತು ಆರ್ಟಿಪಿಸಿಆರ್ ಪರೀಕ್ಷೆಗಳಲ್ಲಿ ನೆಗೆಟಿವ್ ಬಂದ ಎರಡು ಮೂರು ದಿನಗಳಲ್ಲಿ ರೋಗಲಕ್ಷಣಗಳು ಗೋಚರಿಸುತ್ತಿವೆ. ಹೀಗಾಗಿ ರೋಗ ಲಕ್ಷಣಗಳು  ಇರುವವರು ಕೂಡ ಮತ್ತೆ ಆ್ಯಂಟಿಜೆನ್ ಪರೀಕ್ಷೆಗೊಳಪಡಬೇಕು ಎಂದೂ ಆರೋಗ್ಯ ಇಲಾಖೆ ಹೇಳಿದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...