ರೇಸ್ ಕೋರ್ಸ್ ಸ್ಥಳಾಂತರ ಇಲ್ಲ : ಜೆ.ಸಿ.ಮಾಧುಸ್ವಾಮಿ

Source: sonews | By Staff Correspondent | Published on 23rd September 2020, 7:15 PM | State News |

ಬೆಂಗಳೂರು:  ರೇಸ್ ಕೋರ್ಸ್‍ನ್ ಪ್ರಕರಣವು ಸುಪ್ರೀಂ ಕೋರ್ಟ್‍ನಲ್ಲಿ ಬಾಕಿ ಇರುವುದರಿಂದ ಸ್ಥಳಾಂತರ ಸಾಧ್ಯ ಇಲ್ಲ ಎಂದು  ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದರು.

ಅವರು ಇಂದು ವಿಧಾನಪರಿಷತ್‍ನ ಕಲಾಪದಲ್ಲಿ  ಮುಖ್ಯಮಂತ್ರಿಗಳ ಪರವಾಗಿ ವಿಧಾನಸಬೆಯಿಂದ ಅಂಗೀಕೃತ ರೂಪದಲ್ಲಿರುವ 2020ನೇ ಸಾಲಿನ ಕರ್ನಾಟಕ ರೇಸ್ ಕೋರ್ಸ್‍ಗಳಿಗೆ ಪರವಾನಗಿ ನೀಡುವ ಪ್ರಸ್ತಾವನೆ ಹಾಗೂ ವಿಧೇಯಕವನ್ನು ಮಂಡಿಸಿದಾಗ, ಕಾಂಗ್ರೆಸ್ ಸದಸ್ಯ ಬಿ.ಕೆ. ಹರಿಪ್ರಸಾದ್, ನಾರಾಯಣ ಸ್ವಾಮಿ ಮಾತನಾಡಿ, ನಗರದ ಹೃದಯ ಭಾಗದಲ್ಲಿರುವ ರೇಸ್ ಕೋರ್ಸ್‍ನ್ನು  ಹೊರವಲಯಕ್ಕೆ ಸ್ಥಳಾಂತರಿಸಬೇಕೆಂದು ಹಲವಾರು ಬಾರಿ ಚರ್ಚೆಯಾದರು ಅದು ಸಾಧ್ಯವಾಗಿಲ್ಲ ಎಂದಾಗ  ಸಚಿವರು ಸ್ಥಳಾಂತರ ಸಾಧ್ಯವಿಲ್ಲ ಎಂದರು.

ಕರ್ನಾಟಕ ರೇಸ್ ಕೋರ್ಸ್‍ಗಳ ಕೆಲವು ನಿಯಮಾವಳಿಗೆ ಕೆಲವು ಸಣ್ಣ ಪುಟ್ಟ ತಿದ್ದುಪಡಿ ತರಲಾಗಿದೆ.  ಸೆಕ್ಷನ್ 4,5,6,7ರ ನಿಯಮಗಳನ್ನು ಉಲ್ಲಂಘನೆ ಮಾಡಿದ ವೇಳೆ 500 ರೂ. ಇದ್ದ ದಂಡದ  ಪ್ರಮಾಣವನ್ನು 50 ಸಾವಿರಕ್ಕೆ , ಒಂದು ಸಾವಿರ ಇದ್ದ ದಂಡದ ಪ್ರಮಾಣವನ್ನು 1 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಪರವಾನಗಿ ಇಲ್ಲದೆ ರೇಸ್ ನಡೆಸಿದರೆ, ಮಾಲೀಕರು ರೇಸ್‍ನಲ್ಲಿ ಭಾಗವಹಿಸಿದರೆ ದಂಡ ವಿಧಿಸಲಾಗುತ್ತದೆ ಎಂದರು.

 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...