ನವದೆಹಲಿ: ಮತಾಂತರವಾದೆ ಮೀಸಲು ಸಿಗಲ್ಲ; ರವಿಶಂಕರ್ ಪ್ರಸಾದ್

Source: Agency | By S O News | Published on 13th February 2021, 1:56 PM | National News |

ನವದೆಹಲಿ: ದಲಿತರು ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಅವರಿಗೆ ಮೀಸಲಾತಿಯ ಸೌಲಭ್ಯ ಗಳು ಸಿಗುವುದಿಲ್ಲ ಎಂದು ಕೇಂದ್ರ ಕಾನೂನು ಮತ್ತು ಸಂಸ ದೀಯ ವ್ಯವಹಾರಗಳ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಪ್ರಶ್ನೆ ಯೊಂದಕ್ಕೆ ಉತ್ತರಿಸಿದ ಅವರು, ಇಸ್ಲಾಂ ಮತ್ತು ಕ್ರೈಸ್ತ ಧರ್ಮಕ್ಕೆ ಮತಾಂತರವಾದ ದಲಿತರು, ಪರಿಶಿಷ್ಟ ಜಾತಿಯವರಿಗೆ ಮೀಸಲಾಗಿ ಇರಿಸಲಾಗಿರುವ
ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸು ವಂತಿಲ್ಲ. ಹಾಗೆಯೇ, ಇತರೆ ಮೀಸಲಾತಿ ಸೌಲಭ್ಯಗಳೂ ಸಿಗುವುದಿಲ್ಲ ಎಂದರು.

ಆದರೆ, ಹಿಂದು, ಸಿಖ್ ಮತ್ತು ಬೌದ್ಧ ಧರ್ಮಕ್ಕೆ ಮತಾಂತರವಾದರೆ ಅಂಥವರಿಗೆ ಈ ಮೀಸಲು ಸೌಲಭ್ಯ ಸಿಗಲಿದೆ ಎಂದೂ ಸ್ಪಷ್ಟಪಡಿಸಿದರು. ಸಂವಿಧಾನದ ಪ್ಯಾರಾ 3(ಪರಿಶಿಷ್ಟ ಜಾತಿ)ಯಲ್ಲಿ ಹೇಳಿರುವಂತೆ ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮದ ಹೊರತಾಗಿ ಬೇರೆಯವರಿಗೆ ಮೀಸಲಾಗಿಟ್ಟ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ಹಕ್ಕಿಲ್ಲ ಟ ಎಂದು ವಿವರಿಸಿದರು. ಹಾಗೆಯೇ, ಈ ವಿಚಾರದಲ್ಲಿ ಯಾವುದೇ ತಿದ್ದು ಪಡಿ ತರುವ ಯೋಚನೆಗಳೂ ಸರ್ಕಾ ರದ ಮುಂದಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...