ಉಸ್ತುವಾರಿಯಿಂದ ಕೈಬಿಟ್ಟಿರುವುದಕ್ಕೆ ಚಿಂತೆ ಇಲ್ಲ, ರಾಜ್ಯಸಭೆ ಪ್ರತಿಪಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ: ಖರ್ಗೆ

Source: UNI | Published on 12th September 2020, 7:01 PM | State News | Don't Miss |

ಬೆಂಗಳೂರು: ಮಹಾರಾಷ್ಟ್ರ ಸರ್ಕಾರದ ಉಸ್ತುವಾರಿಯಿಂದ ತಮ್ಮನ್ನು ಕೈಬಿಟ್ಟಿರುವುದಕ್ಕೆ ತಮಗೇನೂ ಬೇಸರವಾಗಿಲ್ಲ ಎಂದು ರಾಜ್ಯಸಭಾ ಕಾಂಗ್ರೆಸ್ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಅಲ್ಲದೇ ತಾವು ರಾಜ್ಯಸಭೆ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಬೇಡಿಕೆ ಇಟ್ಟಿಲ್ಲ. ಈ ಜವಾಬ್ದಾರಿಯನ್ನು ಇದೀಗ  ಗುಲಾಂ ನಭಿ ಅಜಾದ್ ನಿರ್ವಹಿಸುತ್ತಿದ್ದಾರೆ. ಈ ಕುರಿತು ಹೈಕಮಾಂಡ್ ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.
ತಮಗೆ ಜವಾಬ್ದಾರಿ ವಹಿಸುವ ಕುರಿತು ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ವರಿಷ್ಠರ ಯಾವುದೇ ನಿಲುವಿಗೆ ತಲೆ ಭಾಗುವುದಾಗಿ ಖರ್ಗೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಸ್ತುವಾರಿಯಿಂದ ತಮ್ಮನ್ನು ಕೈಬಿಟ್ಟಿದ್ದಾರೆಂಬ ವಿಚಾರದಲ್ಲಿ ತಮಗೆ ಬೇಸರವಿಲ್ಲ. ಎಲ್ಲವೂ ನಮ್ಮ ಕೈಯಲ್ಲಿ ಇರುವುದಿಲ್ಲ. ಎಲ್ಲವೂ ನನಗೇ ಸಿಗಬೇಕೆಂಬ ದುರಾಸೆಯೂ ನನಗಿಲ್ಲ ಎಂದರು.
ನಾನು ಕಾಂಗ್ರೆಸ್ ಸಿದ್ಧಾಂತದಡಿ ಬದುಕುತ್ತಿರುವವನು. ನೆಹರು, ಅಂಬೇಡ್ಕರ್ ಸಾಮಾಜಿಕನ್ಯಾಯಕ್ಕೆ ಬದ್ಧನಾಗಿರುವ ವ್ಯಕ್ತಿ. ಪಕ್ಷವನ್ನು ಎಲ್ಲರೂ ಸೇರಿ ಮುನ್ನಡೆಸಬೇಕು ಎಂದು ಹೇಳಿದರು.
ಪಕ್ಷದ ಸಿದ್ಧಾಂತ ಅನುಷ್ಠಾನಕ್ಕೆ ತರಲು ಯಾರೇ ಮುಂದಾಗಲಿ ಅದಕ್ಕೆ ನನ್ನ ಒಪ್ಪಿಗೆಯೂ ಇದೆ. ನನಗೆ ಅವಕಾಶ ಸಿಗಲಿಲ್ಲ ಎಂದು ವ್ಯಥೆ ಪಟ್ಟವನು ನಾನಲ್ಲ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಎಲ್ಲರೂ ಇರಬೇಕು. ಆ ದಿಕ್ಕಿನಲ್ಲಿಯೇ ಮುನ್ನಡೆದಿರುವವನು ಎಂದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...