ಗೃಹರಕ್ಷಕರ ಈಶಾನ್ಯ ವಲಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟ ದೈಹಿಕ, ಮಾನಸಿಕವಾಗಿ ಸದೃಢರಾಗಿರಲು ಕ್ರೀಡೆಯಲ್ಲಿ ಪಾಲ್ಗೊಳ್ಳಿ: ವಿಮ್ಸ್ ನಿರ್ದೇಶಕ ಗಂಗಾಧರ್

Source: SO News | By Laxmi Tanaya | Published on 3rd December 2021, 9:56 PM | State News | Don't Miss |

ಬಳ್ಳಾರಿ : ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿರಲು ಯಾವುದಾದರೂ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು ಎಂದು ವಿಮ್ಸ್ ನಿರ್ದೇಶಕ ಡಾ.ಗಂಗಾಧರಗೌಡ ಅವರು ಹೇಳಿದರು.

ಜಿಲ್ಲಾ ಗೃಹರಕ್ಷಕದಳ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆವರಣದಲ್ಲಿ ಗುರುವಾರ ನಡೆದ ಗೃಹರಕ್ಷಕರ ಈಶಾನ್ಯ ವಲಯಮಟ್ಟದ ವೃತ್ತಿಪರ ಹಾಗೂ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗೃಹರಕ್ಷಕರು ತಮ್ಮ ಒತ್ತಡ ಜೀವನದಿಂದ ರಿಲ್ಯಾಕ್ಸ್ ಆಗಲು ಹಾಗೂ ಆರೋಗ್ಯಯುತವಾಗಿರಲು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಅವರು ಎಲ್ಲಾ ಕ್ರೀಡಾಪಟುಗಳಿಗೆ ಪ್ರಮಾಣವಚನ ಬೋಧಿಸಿದರು.

     ಗೃಹರಕ್ಷಕದಳದ ಸಮಾದೇಷ್ಟರಾದ ಎಂ.ಎ.ಷಕೀಬ್ ಅವರು ಈಶಾನ್ಯ ವಲಯಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಆರು ಜಿಲ್ಲೆಗಳ ಗೃಹರಕ್ಷಕ ತಂಡಗಳಿಗೆ ಶುಭ ಕೋರುತ್ತಾ ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ಆದರೆ ಕ್ರೀಡೆಯಲ್ಲಿ ಭಾಗವಹಿಸಿ ಸಂಸ್ಥೆಯ ಹೆಸರು ಮೇಲಕ್ಕೆ ತನ್ನಿ ಎಂದರು.

ಈ ಸಂದರ್ಭದಲ್ಲಿ ಗೃಹರಕ್ಷಕದಳದ ಬೋಧಕ ಹೆಚ್.ತಿಪ್ಪೇಸ್ವಾಮಿ, ನಿವೃತ್ತ ಸೆಕೆಂಡ್ ಇನ್ ಕಮಾಂಡ್ ಎನ್.ಎಸ್.ಲಕ್ಷ್ಮೀನರಸಿಂಹ,  ಗೃಹರಕ್ಷಕದಳದ ಕಚೇರಿಯ ಪ್ರಥಮದರ್ಜೆ ಸಹಾಯಕ ಬಿ.ಎನ್.ಗೋಪಿನಾಥ, ಘಟಕಾಧಿಕಾರಿಗಳಾದ ಎಸ್.ಎಂ.ಗಿರಿಶ್, ಎನ್.ಮಲ್ಲಿಕಾರ್ಜುನ, ಶಂಕರ್ ನಾಯ್ಕ್, ರಾಜ್‍ಪೀರ್, ಜಿ.ಬಸವರಾಜ್, ಜೆ.ಸುರೇಶ್, ಪ್ಲಟೂನ್ ಕಮಾಂಡರ್‍ಗಳಾದ ಬಿ.ಕೆ.ಬಸವಲಿಂಗ, ಹೆಚ್.ಲಕ್ಷ್ಮೀನಾರಾಯಣ, ಬಳ್ಳಾರಿ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹಾಗೂ ಕೊಪ್ಪಳ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಯ ಅಧಿಕಾರಿಗಳು ಮತ್ತು 215 ಪುರುಷ ಮತ್ತು ಮಹಿಳಾ ಗೃಹರಕ್ಷಕರು ಭಾಗವಹಿಸಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...