ಉತ್ತರ ಕರ್ನಾಟಕದ ಪ್ರಥಮ ಸಂಚಾರಿ ಪ್ರಾಣಿ ಚಿಕಿತ್ಸಾಲಯ ಲೋಕಾರ್ಪಣೆ

Source: SO News | By Laxmi Tanaya | Published on 29th September 2020, 7:14 AM | State News | Don't Miss |

ಧಾರವಾಡ :  ಹ್ಯುಮೇನ್ ಸೊಸೈಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆಯು ಹುಬ್ಬಳ್ಳಿ ಧಾರವಾಡ ಅವಳಿ ನಗರದ ಸಮುದಾಯ ಪ್ರಾಣಿಗಳ ಆರೋಗ್ಯ ರಕ್ಷಣೆ ಲಸಿಕೆ ಮತ್ತು ಸಂತಾನೋತ್ಪತ್ತಿ ನಿಯಂತ್ರಣ ಮತ್ತಿತರ ತುರ್ತು ವೈದ್ಯಕೀಯ ಆರೈಕೆಯನ್ನು  ಪ್ರಾಣಿಗಳಿಗೆ ಒದಗಿಸಲು ನೀಡಿರುವ ಉತ್ತರ ಕರ್ನಾಟಕದ ಪ್ರಥಮ ಸಂಚಾರಿ ಪ್ರಾಣಿ ಚಿಕಿತ್ಸಾಲಯವನ್ನು ಜಿಲ್ಲಾಧಿಕಾರಿ ನಿತೇಶ ಪಾಟೀಲ ಲೋಕಾರ್ಪಣೆ ಮಾಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಾಹನ ವೀಕ್ಷಿಸಿ ಮಾತನಾಡಿದ ಅವರು, ಸಮುದಾಯದ ನಾಯಿಗಳು, ಬೆಕ್ಕುಗಳು, ಬೀದಿ ಪ್ರಾಣಿಗಳ ಸಂರಕ್ಷಣೆಗೆ ಈ ಚಿಕಿತ್ಸಾಲಯ ನೆರವಾಗಲಿದೆ. ಎಚ್‍ಎಸ್‍ಐ ಸಂಸ್ಥೆಯ ಈ ಕೊಡುಗೆ ಶ್ಲಾಘನೀಯವಾಗಿದೆ ಎಂದರು.

ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಪರಮೇಶ್ವರ ನಾಯಕ್ ಮಾತನಾಡಿ, ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಈ ಸಂಚಾರಿ ಪ್ರಾಣಿ ಚಿಕಿತ್ಸಾಲಯ ಲಾಭದ ಉದ್ದೇಶವಿಲ್ಲದೆ ಪ್ರಾಣಿಗಳ ಸಂಕಟಕ್ಕೆ ಸ್ಪಂದಿಸಲು ಮುಂದಾಗಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.

ಎಚ್ ಎಸ್ ಐ ಇಂಡಿಯಾದ ಕಾರ್ಯಕ್ರಮ ವ್ಯವಸ್ಥಾಪಕ ಹೇಮಂತ್ ಬ್ಯಾಟರಾಯ್, ಡಾ.ವಿನಿತಾ ಪೂಜಾರಿ,ಡಾ.ಧೀರಜ್ ವೀರನಗೌಡರ್  ಸೇರಿದಂತೆ ಸಂಸ್ಥೆಯ ಸ್ವಯಂ ಸೇವಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Read These Next

ಯಾವ ವ್ಯಕ್ತಿ ಸೋಲನ್ನು ಜೀರ್ಣಿಸಿಕೊಳ್ಳಲು ಕಲಿಯುತ್ತಾನೋ ಅಂತಹ ವ್ಯಕ್ತಿ ಜೀವನದಲ್ಲಿ ಅತ್ಯುತ್ತಮ ಸಾಧನೆ ಮಾಡಲು ಸಾಧ್ಯ: ಜಿಲ್ಲಾಧಿಕಾರಿ

ಮಂಡ್ಯ : ಪ್ರತಿಯೊಬ್ಬ ಮನುಷ್ಯನಿಗೆ ಓದು ಮತ್ತು ಕ್ರೀಡೆ ಎರಡು ಇರಬೇಕು. ವಿಶ್ವ ಆರೋಗ್ಯ ಸಂಸ್ಥೆ ಹೇಳುವಂತೆ ಭೌತಿಕವಾಗಿ, ...

ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ಚುನಾವಣೆ-2020 ಕೋವಿಡ್-19 ಮಾರ್ಗಸೂಚಿ ಪಾಲನೆ, ಆರೋಗ್ಯ ಸಿಬ್ಬಂದಿ ಪಾತ್ರವೂ ಮುಖ್ಯ -ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಧಾರವಾಡ : ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ಚುನಾವಣೆ ಪ್ರಕ್ರಿಯೆಯಲ್ಲಿ ಆರೋಗ್ಯ ಇಲಾಖೆ ನೀಡಿರುವ ಕೋವಿಡ್-19 ಮಾರ್ಗಸೂಚಿಗಳ ...

ದಿ. ಚಿರಂಜೀವಿ ಸರ್ಜಾ ಕುಟುಂಬಕ್ಕೆ ಜ್ಯೂನಿಯರ್ ಸರ್ಜಾ ಆಗಮನ. ಅಣ್ಣನ ಮಗುವಿಗೆ ಬೆಳ್ಳಿಯ ತೊಟ್ಟಿಲು ತಂದಿಟ್ಟ ಧ್ರುವ.

ಬೆಂಗಳೂರು : ಸ್ಯಾಂಡಲವುಡ್ ಆ್ಯಕ್ಟರ್ ದಿ. ಚಿರಂಜೀವಿ ಸರ್ಜಾ ಕುಟುಂಬಕ್ಕೆ ಜ್ಯೂನಿಯರ್ ಆಗಮನವಾಗಿದೆ. ಸರ್ಜಾ ಪುತ್ನಿ ಮೇಘನಾ ರಾಜ್ ...

ಯಾವ ವ್ಯಕ್ತಿ ಸೋಲನ್ನು ಜೀರ್ಣಿಸಿಕೊಳ್ಳಲು ಕಲಿಯುತ್ತಾನೋ ಅಂತಹ ವ್ಯಕ್ತಿ ಜೀವನದಲ್ಲಿ ಅತ್ಯುತ್ತಮ ಸಾಧನೆ ಮಾಡಲು ಸಾಧ್ಯ: ಜಿಲ್ಲಾಧಿಕಾರಿ

ಮಂಡ್ಯ : ಪ್ರತಿಯೊಬ್ಬ ಮನುಷ್ಯನಿಗೆ ಓದು ಮತ್ತು ಕ್ರೀಡೆ ಎರಡು ಇರಬೇಕು. ವಿಶ್ವ ಆರೋಗ್ಯ ಸಂಸ್ಥೆ ಹೇಳುವಂತೆ ಭೌತಿಕವಾಗಿ, ...