'ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ' ಇದೇ ನನ್ನ ಕೊನೆಯ ಅಧಿವೇಶನ; ಬಿಎಸ್‌ವೈ ಭಾವುಕ

Source: Vb | By I.G. Bhatkali | Published on 24th February 2023, 1:02 AM | State News |

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದು, ನಾನು ಮತ್ತೆ ಈ ಸದನಕ್ಕೆ ಬರುವುದಿಲ್ಲ. ಇದೇ ಕೊನೆಯ ಅಧಿವೇಶನ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಿಕಾರಿಪುರ ಕ್ಷೇತ್ರದ ಹಾಲಿ ಶಾಸಕ ಬಿ.ಎಸ್. ಯಡಿಯೂರಪ್ಪ ಭಾವುಕರಾಗಿ ನುಡಿದಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ ಆಯವ್ಯ ಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಬಿಜೆಪಿ ಯಡಿಯೂರಪ್ಪನವರನ್ನು ಕಡೆಗಣಿಸಿದೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. ಆದರೆ, ಬಿಜೆಪಿ ಅಥವಾ ಪ್ರಧಾನಿ ಮೋದಿ ನನ್ನನ್ನು ಕಡೆಗಣಿಸಿಲ್ಲ. ಇದುವರೆಗೆ ಹಲವು ಅವಕಾಶಗಳನ್ನು ನನಗೆ ನೀಡಿದ್ದಾರೆ.ಹೀಗಾಗಿ ಪಕ್ಷ ಹಾಗೂ ಮೋದಿಯವರಿಗೆ ನಾನು ಋಣಿಯಾಗಿದ್ದೇನೆ ಎಂದು ಹೇಳಿದರು.

ನನ್ನ ರಾಜಕೀಯ ಜೀವನದಲ್ಲಿ ನಾಲ್ಕು ಬಾರಿ ಸಿಎಂ ಆಗುವ ಅವಕಾಶವನ್ನು ಬಿಜೆಪಿ ನನಗೆ ಕೊಟ್ಟಿದೆ. ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೇನೆ. ಆದರೆ, ಈ ಯಡಿಯೂರಪ್ಪ ಸುಮ್ಮನೆ ಮನೆಯಲ್ಲಿ ಕೂರುವುದಿಲ್ಲ. ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ರಾಜ್ಯದ ಉದ್ದಗಲಕ್ಕೂ ಪ್ರವಾಸ ಕೈಗೊಳ್ಳುವೆ ಎಂದ ಅವರು ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಭರವಸೆ ವ್ಯಕ್ತಪಡಿಸಿದರು. ಈ ಹಿಂದಿನ ಯಾವುದೇ ಸರಕಾರಗಳು ನೀಡ ದಷ್ಟು ಯೋಜನೆಗಳನ್ನು ಬಿಜೆಪಿ ಸರಕಾರ ಕೊಟ್ಟಿದೆ. ಹೀಗಾಗಿ ನಮ್ಮ ಸರಕಾರದ ಯೋಜನೆಗಳನ್ನು ಜನರಿಗೆ ತಿಳಿಸುವ ಕೆಲಸವನ್ನು ಮಾಡಬೇಕು. ರಾಜ್ಯದ ಬಜೆಟ್ ಎಲ್ಲ ವರ್ಗದ ಜನರನ್ನು ತಲುವುವ ಬಜೆಟ್‌ ಆಗಿದೆ. ಪ್ರಾದೇಶಿಕ ಅಸಮಾನತೆ ನಿವಾರಣೆಗೆ ಪ್ರಯತ್ನ ಮಾಡಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ನೆರೆಯ ರಾಜ್ಯಗಳಿಗೆ ಮಾದರಿ ರೀತಿಯಲ್ಲಿ 402 ಕೋಟಿ ರೂ. ಮೊತ್ತದ ಹೆಚ್ಚುವರಿ ಆಯವ್ಯಯ ಮಂಡನೆ ಮಾಡಿದ್ದು, ದೂರಗಾಮಿ ಅಭಿವೃದ್ಧಿಗೆ ಪೂರಕ ಬಜೆಟ್‌ ಇದಾಗಿದೆ. ರೈಲ್ವೆ ರಸ್ತೆ ವಿದ್ಯುತ್‌ ಸಹಿತ ಮೂಲ ಸೌಕರ್ಯಕ್ಕೆ ವಿಶೇಷ ಆದ್ಯತೆ ನೀಡಿದ್ದು, ಡಬಲ್ ಇಂಜಿನ್ ಸರಕಾರ ಇರುವ ಕಾರಣದಿಂದಲೇ ರಾಜ್ಯ ಹಾಗೂ ದೇಶ ಸದೃಢವಾಗಿದ್ದು, ವಿಕಾಸ ಹೊಂದುತ್ತಿದೆ ಎಂದು ಯಡಿಯೂರಪ್ಪ ಸಮರ್ಥಿಸಿಕೊಂಡರು.

ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಕರೆ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಒಮ್ಮೆ ಗೆದ್ದು ಬಂದ ಕ್ಷೇತ್ರವನ್ನು ಬಿಟ್ಟು ಬೇರೆ ಕಡೆ ಸ್ಪರ್ಧಿಸಲು ಕ್ಷೇತ್ರ ಹುಡುಕಾಟ ನಡೆಸಿದ್ದಾರೆ. ಆದರೆ, ಅವರಿಗೆ ತಾವು ಆಯ್ಕೆಯಾದ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧಿಸಲು ಧೈರ್ಯವಿಲ್ಲ ಎಂದರೆ ಅವರು ಅಭಿವೃದ್ಧಿ ಕೆಲಸ ಮಾಡಿಲ್ಲ ಅಥವಾ ಸೋಲಿನ ಭೀತಿ ಇರಬೇಕು. ಬೇರೆ ಕ್ಷೇತ್ರಗಳ ಜನರು ನಿಮ್ಮನ್ನು ಹೇಗೆ ನಂಬಬೇಕು. ಹೀಗಾಗಿ ಸಿದ್ದರಾಮಯ್ಯನವರು ಪುನಃ ಅದೇ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಿ, ಆಯ್ಕೆಯಾಗಬೇಕು. ಆಗ ಮಾತ್ರ ಜನರಿಗೆ ವಿಶ್ವಾಸ ಬರುತ್ತದೆ. ಇಲ್ಲವಾದರೆ ಅವರನ್ನು ಆಯ್ಕೆ ಮಾಡಿದ ಬಾದಾಮಿ ಕ್ಷೇತ್ರದ ಜನರಿಗೆ ಅವರು ದ್ರೋಹ ಮಾಡಿದಂತೆ ಆಗುತ್ತದೆ ಎಂದು ಯಡಿಯೂರಪ್ಪ ಹೇಳಿದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...