ಖ್ಯಾತ ಪತ್ರಕರ್ತ, ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ನಿಧನ ನಾಡಿನಲ್ಲೆಡೆ ಗಣ್ಯರ ಸಂತಾಪ.

Source: SO News | By Laxmi Tanaya | Published on 13th November 2020, 3:09 PM | State News |

ಬೆಂಗಳೂರು – ಖ್ಯಾತ ಪತ್ರಕರ್ತ, ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ  ರವಿ ಬೆಳಗೆರೆ ನಿಧನರಾಗಿದ್ದಾರೆ. ಅವರಿಗೆ ಅರವತ್ತೆರಡು ವರ್ಷ ವಯಸ್ಸಾಗಿತ್ತು.

 1958 ಮಾರ್ಚ್ 15 ರಂದು‌ ರವಿ ಅವರು ಬಳ್ಳಾರಿಯಲ್ಲಿ ಜನಿಸಿದ್ದರು. ಬಳ್ಳಾರಿಯಲ್ಲಿ ಶಿಕ್ಷಣ ಪಡೆದ ಅವರು, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದಲ್ಲಿ ಎಂ.ಎ. ಪದವಿ ಪಡೆದು ಕೆಲ ಉಪನ್ಯಾಸಕರಾಗಿ ವೃತ್ತಿ ಕೈಗೊಂಡಿದ್ದರು.

ಅವರು ಕನ್ನಡದಲ್ಲಿ ಹಲವಾರು ಪುಸ್ತಕಗಳನ್ನು ಬರೆದಿದ್ದರು ಜೊತೆಗೆ ಭಾಷಾಂತರಿಸಿದ್ದರು. ರವಿ ಬೆಳಗೆರೆ, ಭಾವನಾ ಪ್ರಕಾಶನ, ಭಾವನಾ ಆಡಿಯೋ ರೀಚ್ ಮತ್ತು  ಪ್ರಾರ್ಥನಾ ಶಾಲೆಯ ಸಂಸ್ಥಾಪಕರಾಗಿದ್ದರು.  ಸಂಯುಕ್ತ ಕರ್ನಾಟಕ, ಕರ್ಮವೀರ ಪತ್ರಿಕೆಗಳಲ್ಲಿ ಸಹ ಕೆಲಸ ಮಾಡಿದ್ದರು.

ತಮ್ಮ ಹಾಯ್ ಬೆಂಗಳೂರು  ವಾರಪತ್ರಿಕೆ ಮೂಲಕ ಭಾರಿ ಖ್ಯಾತಿ ಗಳಿಸಿದ್ದ ರವಿ ಬೆಳಗೆರೆ, ಕನ್ನಡದ ಪ್ರಮುಖ ಬರಹಗಾರರ  ಸಾಲಿನಲ್ಲಿ ಮೊದಲನೆಯವರಾಗಿ ಗುರುತಿಸಿಕೊಂಡಿದ್ದರು. ‌ಅಂಡರ್ವರ್ಲಡ್ ಬರಹ ಭಾರಿ ಪ್ರಸಿದ್ಧವಾಗಿತ್ತು. 

2008ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಜೀವಮಾನದ ಸಾಧನ ಪ್ರಶಸ್ತಿ, 2011ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಮಾಸ್ತಿ ಕಥಾ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಹೀಗೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು.

ತಮ್ಮ ಬದುಕಿನುದ್ದಕ್ಕೂ ಅವರೂ ನೂರಾರು ಪುಸ್ತಕಗಳನ್ನ ಬರೆದು ಯುವ ಪತ್ರಕರ್ತರಿಗೆ ಮಾದರಿಯಾಗಿದ್ದರು. ತಮ್ಮ ಹಾಯ್ ಬೆಂಗಳೂರು ಪತ್ರಿಕೆಗಳ ಮೂಲಕ ಹಲವು ಪ್ರಯೋಗಗಳನ್ನ ಮಾಡಿದ್ದರು. ರವಿ ಬೆಳಗೆರೆ ನಿಧನದಿಂದಾಗಿ ಕನ್ನಡ ಪತ್ರಿಕೋದ್ಯಮ ಬಡವಾದಂತಾಗಿದೆ.
ಅವರ ನಿಧನಕ್ಕೆ ತೀವೃ ಸಂತಾಪ ವ್ಯಕ್ತವಾಗಿದೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...